Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡರಿಂದ...

ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡರಿಂದ ಆಳ್ವಾಸ್ ಕೃಷಿಸಿರಿ ಉದ್ಘಾಟನೆ

ವಾರ್ತಾಭಾರತಿವಾರ್ತಾಭಾರತಿ15 Nov 2017 7:23 PM IST
share
ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡರಿಂದ ಆಳ್ವಾಸ್ ಕೃಷಿಸಿರಿ ಉದ್ಘಾಟನೆ

ಮೂಡುಬಿದಿರೆ, ನ. 15: ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಆಶ್ರಯದಲ್ಲಿ ವಿದ್ಯಾಗಿರಿಯಲ್ಲಿ ಡಿ.1ರಿಂದ 3ರವರೆಗೆ  ನಡೆಯುವ ಕನ್ನಡ ನಾಡು ನುಡಿಯ ರಾಷ್ಟ್ರೀಯ ಸಮ್ಮೇಳನ ಆಳ್ವಾಸ್ ನುಡಿಸಿರಿಗೆ ಪೂರಕವಾಗಿ ನ.30ರಂದು ಸಂಜೆ 6.30ಕ್ಕೆ ಆರಂಭಗೊಳ್ಳುವ ಈ ಬಾರಿಯ ಆಳ್ವಾಸ್ ಕೃಷಿಸಿರಿಯನ್ನು ದೇಶದ ಮಾಜಿ ಪ್ರಧಾನಿ, ಕೃಷಿ ಪ್ರೇಮಿ ಎಚ್.ಡಿ ದೇವೇಗೌಡ ಉದ್ಘಾಟಿಸಲಿದ್ದಾರೆ ಎಂದು ನುಡಿಸಿರಿಯ ರೂವಾರಿ, ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಅಧ್ಯಕ್ಷ ಡಾ.ಎಂ.ಮೋಹನ ಆಳ್ವ ಸುದ್ದಿಗೋಷ್ಠಿಯಲ್ಲಿ ತಿಳಿಸಿದ್ದಾರೆ. 

ಮೂಡುಬಿದಿರೆಯ ಕೃಷಿ ವಿಚಾರ ವಿನಿಮಯ ಕೇಂದ್ರ, ರೈತ ಸಂಘ,  ಕೃಷಿಕ ಸಮಾಜ ಮಂಗಳೂರು ಹಾಗೂ ಶ್ರೀ ಧರ್ಮಸ್ಥಳ ಗ್ರಾಮಾಭಿವೃದ್ಧಿ ಸಂಸ್ಥೆಗಳ ಸಹಯೋಗ ದೊಂದಿಗೆ ಹಮ್ಮಿಕೊಂಡಿರುವ ಈ ಆಳ್ವಾಸ್ ಕೃಷಿ ಸಿರಿಯು ಸುಮಾರು 6 ಎಕರೆ ಪ್ರದೇಶದಲ್ಲಿ ನಡೆಯಲಿದ್ದು ಪ್ರಗತಿಪರ ಕೃಷಿಕರಾಗಿ ಗುರುತಿಸಿಕೊಂಡಿರುವ ದಿ.ಮುಂಡುರ್ದೆಗುತ್ತು ರಾಮಮೋಹನ ರೈ ಅವರ ಹೆಸರನ್ನು ಅವರ ಗೌರವಾರ್ಥ ಆವರಣಕ್ಕೆ ಹೆಸರನ್ನು ಇಡಲಾಗುವುದು. ಮೂರು ದಿನಗಳ ಕಾಲ ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆಯಲಿದ್ದು ಈ ವೇದಿಕೆಗೆ ಯಕ್ಷಗಾನ ಕ್ಷೇತ್ರದ ಅದ್ವಿತೀಯ ಕಲಾವಿದ ದಿವಂಗತ ಗೇರುಕಟ್ಟೆ ಗಂಗಯ್ಯ ಶೆಟ್ಟಿ ಅವರ ಹೆಸರನ್ನು ನಾಮಕರಣ ಮಾಡಲಾಗುವುದು.

ನೈಜ ಕೃಷಿ ದರ್ಶನ : ಎರಡು ಎಕರೆ ಪ್ರದೇಶದಲ್ಲಿ ವಿಶೇಷವಾಗಿ ಈ ವರ್ಷ ಬೆಂಗಳೂರಿನ ಸುಧಾರಿತ ಹಾಗೂ ಊರಿನ ಸಾಂಪ್ರಾದಾಯಿಕ ಮಾದರಿಯಲ್ಲಿ ಬೆಳೆದ ನೈಜ ಕೃಷಿ ದರ್ಶನಕ್ಕೆ ಅವಕಾಶ ಮಾಡಲಾಗಿದೆ. ದಿನನಿತ್ಯ ಬಳಸುವ ವಿವಿಧ ತರಕಾರಿಗಳನ್ನು ನೈಜವಾಗಿ ಕಣ್ತುಂಬಿಕೊಳ್ಳಲು ಅವಕಾಶವಿದೆ.

ಡಿ.1ರಂದು ಬೆಳಿಗ್ಗೆ 10ರಿಂದ 3 ವರೆಗೆ ಜಾನುವಾರು ಪ್ರದರ್ಶನ ಹಾಗೂ ಸಂಜೆ 4.30ರಿಂದ 6ರವರೆಗೆ  ಓಟದ ಕೋಣಗಳ ಸೌಂದರ್ಯ ಸ್ಪರ್ಧೆ ಯನ್ನು ಏರ್ಪಡಿಸಲಾಗು ವುದು. ಜಾನುವಾರು ಪ್ರದರ್ಶನದಲ್ಲಿ ವಿವಿಧ ತಳಿಗಳ 70ಕ್ಕಿಂತ ಹೆಚ್ಚು ಜಾನುವಾರುಗಳು ಪ್ರದರ್ಶನಗೊಳ್ಳಲಿವೆ. ಸೌಂದರ್ಯ ಸ್ಪರ್ಧೆಯಲ್ಲಿ ವಿಜೇತವಾಗುವ ಕೋಣಗಳಿಗೆ ಪ್ರಥಮ ಬಹುಮಾನವಾಗಿ 50,000, ದ್ವಿ.30,000 ಹಾಗೂ ತೃ.20,000 ರೂ ನಗದನ್ನು ನೀಡಲಾಗುವುದು. ಜೊತೆಗೆ ಕೋಣಗಳನ್ನು ಓಡಿಸುವ ಓಟಗಾರನ ಅಂಗಸೌಷ್ಠವ, ದೇಹ ಸೌಂದರ್ಯಕ್ಕೆ ಪ್ರಥಮ 10,000 ಮತ್ತು 7,000 ರೂಗಳ ಬಹುಮಾನಗಳನ್ನು ನೀಡಲಾಗುವುದು.

ವಿಶೇಷ ಆಕರ್ಷಣೆಗಳು : 60ಕ್ಕೂ ಮಿಕ್ಕಿ  ಬೃಹತ್ ಗಾತ್ರದ ಮತ್ಸ್ಯಾಲಯಗಳು, 500ಕ್ಕೂ ಮಿಕ್ಕಿ ಸಮುದ್ರ ಚಿಪ್ಪುಗಳು, 120ಕ್ಕೂ ಮಿಕ್ಕಿ ವಿದೇಶಿ ಪಕ್ಷಗಳು, 50ಕ್ಕೂ ಮಿಕ್ಕಿ ಬೊನ್ಸಾಯಿ ಕೃಷಿ, 44 ತಳಿಗಳ ಬಿದಿರು ಗಿಡಗಳು, ಮತ್ತು 40 ತಳಿಗಳ ಬಿದಿರು, ನೈಜಿಲ್ಯಾಂಡ್ ಮೂಲದ ವಿಶಿಷ್ಠ ಬಣ್ಣಗಳ ಹಾಗೂ ಆಹಾರಕ್ಕಾಗಿ ಬಳಸುವ ಸಸ್ಯಗಳು , ಪುಷ್ಪ ಪ್ರದರ್ಶನ ಹಾಗೂ ತರಕಾರಿ ಮತ್ತು ಹಣ್ಣುಗಳಲ್ಲಿ ಕಲಾಕೃತಿ ರಚನೆಗೆ ಅವಕಾಶವನ್ನು ಮಾಡಿಕೊಡಲಾಗುತ್ತದೆ. 250ಕ್ಕೂ ಮಿಕ್ಕಿ ರಾಜ್ಯಮಟ್ಟದ ನರ್ಸರಿ ಮತ್ತು ಕೃಷಿ ಉಪಕರಣ ಮಾರಾಟ ಮಳಿಗೆಗಳು, ಕೃಷಿ ಸಂಬಂಧಿ ಗುಡಿಕೈಗಾರಿಕೆಗಳು, ಜೊತೆಗೆ ತಿಂಡಿ-ತಿನಿಸುಗಳ ಬೃಹತ್ ವ್ಯವಸ್ಥೆಯನ್ನು ಈ ಕೃಷಿಸಿರಿಯಲ್ಲಿ ಕಲ್ಪಿಸಲಾಗುವುದು. 

ಡಿ. 2ರಂದು ಬೆಕ್ಕುಗಳ ಪ್ರದರ್ಶನ, ಸೌಂದರ್ಯ ಸ್ಪರ್ಧೆ, ಹಾಗೂ 3 ಮಧ್ಯಾಹ್ನ 2 ರಿಂದ 6ರವರೆಗೆ ಮರಿ, ಪ್ರಾಮಾಣಿಕತೆ ಹಾಗೂ ಸೌಂದರ್ಯ ವಿಭಾಗಗಳಲ್ಲಿ ಶ್ವಾನ ಪ್ರದರ್ಶನಗಳನ್ನು ವಿದ್ಯಾಗಿರಿಯ ಆಳ್ವಾಸ್ ಪದವಿ ಕಾಲೇಜು ಆವರಣದಲ್ಲಿರುವ ಡಾ.ಅಬ್ದುಲ್ ಕಲಾಂ ಪಿ.ಜಿ ವಠಾರದಲ್ಲಿ ಏರ್ಪಡಿಸಲಾಗುವುದು ಇದಲ್ಲದೆ ಕೃಷಿ ಆವರಣವನ್ನು ತುಳುನಾಡಿನ ಕೃಷಿ ಸಂಸ್ಕøತಿಯನ್ನು ಬಿಂಬಿಸುವಂತೆ ಭತ್ತದ ತುಪ್ಪೆಗಳಿಂದಲೂ ಜನಪದಿಯ ಅಲಂಕರಣಗಳಿಂದಲೂ ಸಿಂಗರಿಸಲಾಗುವುದು ಎಂದು ಆಳ್ವ ತಿಳಿಸಿದರು. 

ಕೃಷಿ ವಿಚಾರ ವಿನಿಮಯ ಕೇಂದ್ರದ ಅಧ್ಯಕ್ಷ ರಾಜವರ್ಮ ಬೈಲಂಗಡಿ, ಜತೆ ಕಾರ್ಯದರ್ಶಿ ಸುಜಾತ ರಮೇಶ್, ಕೋಶಾಧಿಕಾರಿ ಆಲ್ವೀನ್ ಮಿನೇಜಸ್, ಕೃಷಿಕ ಸಮಾಜದ ಜಿಲ್ಲಾಧ್ಯಕ್ಷ ಎಸ್.ಡಿ.ಸಾಮ್ರಾಜ್ಯ, ಪ್ರಗತಿಪರ ಕೃಷಿಕ ಸುಭಾಶ್ಚಂದ್ರ ಚೌಟ ಸುದ್ದಿಶಗೋಷ್ಠಿಯಲ್ಲಿ ಉಪಸ್ಥಿತರಿದ್ದರು. 

share
ವಾರ್ತಾಭಾರತಿ
ವಾರ್ತಾಭಾರತಿ
Next Story
X