ಅತಿಥಿ ಉಪನ್ಯಾಸಕರ ಬಾಕಿ ವೇತನ ಬಿಡಗಡೆ ಒತ್ತಾಯ
.jpg)
ಬೆಳಗಾವಿ, ನ.15: ರಾಜ್ಯದಲ್ಲಿನ ಅತಿಥಿ ಉಪನ್ಯಾಸಕರಿಗೆ 6 ತಿಂಗಳ ಬಾಕಿ ಇರುವ ವೇತನವನ್ನು ಶೀಘ್ರವೇ ಬಿಡುಗಡೆ ಮಾಡಬೇಕೆಂದು ವಿಧಾನಸಭೆಯಲ್ಲಿ ಆಡಳಿತ ಮತ್ತು ವಿಪಕ್ಷ ಸದಸ್ಯರಯ ಪಕ್ಷಾತೀತವಾಗಿ ಒತ್ತಾಯಿಸಿದ ಪ್ರಸಂಗ ನಡೆಯಿತು.
ಬುಧವಾರ ವಿಧಾನಸಭೆ ಪ್ರಶ್ನೋತ್ತರ ಅವಧಿಯಲ್ಲಿ ಆಡಳಿತ ಪಕ್ಷದ ಸದಸ್ಯ ಜೆ.ಆರ್.ಲೋಬೋ ಕೇಳಿದ ಪ್ರಶ್ನೆಗೆ ಸಚಿವರು ನೀಡಿದ ಉತ್ತರಿಂದ ಅಸಮಾಧಾನಗೊಂಡರು. ಪದವಿ ಕಾಲೇಜುಗಳಲ್ಲಿ ಗುತ್ತಿಗೆ ಆಧಾರದ ಮೇಲೆ ಎಷ್ಟು ಉಪನ್ಯಾಸಕರು ಕೆಲಸ ನಿರ್ವಹಿಸುತ್ತಿದ್ದಾರೆಂದು ಪ್ರಶ್ನಿಸಿದರು.
ಬಳಿಕ ಪ್ರತಿಕ್ರಿಯಿಸಿದ ಉನ್ನತ ಶಿಕ್ಷಣ ಸಚಿವ ಬಸವರಾಜ ರಾಯರೆಡ್ಡಿ, ಪದವಿ ಕಾಲೇಜುಗಳಲ್ಲಿ ಒಬ್ಬ ಉಪನ್ಯಾಸಕನೂ ಗುತ್ತಿಗೆ ಆಧಾರದ ಮೇಲೆ ಕೆಲಸ ಮಾಡುತ್ತಿಲ್ಲ. ಹೊರ ಗುತ್ತಿಗೆಯಲ್ಲೂ ನೇಮಕ ಮಾಡಿಲ್ಲ ಎಂದರು.
ಬಳಿಕ ಮಾತನಾಡಿದ ಸದಸ್ಯ ಲೋಬೋ, ಒಂದೇ ಕಾಲೇಜಿನಲ್ಲಿ ಒಂದೇ ವಿಷಯದಲ್ಲಿ ಪಾಠ ಮಾಡುವ ಅತಿಥಿ ಉಪನ್ಯಾಸಕರಿಗೆ ಒಂದು ರೀತಿ ಖಾಯಂ ಉಪನ್ಯಾಸಕರಿಗೆ ಮತ್ತೊಂದು ರೀತಿಯ ವೇತನ ಇದೆ. ಅತಿಥಿ ಉಪನ್ಯಾಸಕರ ನಡುವೆಯೂ ವೇತನ ತಾರತಮ್ಯಗಳಿವೆ. ಇದನ್ನು ಸರಿಪಡಿಸಿ ಎಂದು ಒತ್ತಾಯಿಸಿದರು.
ಇದಕ್ಕೆ ಧ್ವನಿಗೂಡಿಸಿದ ಬಿಜೆಪಿ ಶಾಸಕ ಸಿ.ಟಿ.ರವಿ, ನಿಮಗೆ ತಿಂಗಳಿಗೆ ಸರಿಯಾಗಿ ವೇತನ ಬರುತ್ತಿಲ್ಲವೆ, ಹಾಗಿದ್ದ ಮೇಲೆ ಅತಿಥಿ ಉಪನ್ಯಾಸಕರಿಗೆ ಏಕೆ ವೇತನ ನೀಡುತ್ತಿಲ್ಲ ಎಂದು ಪ್ರಶ್ನಿಸಿದರು.







