ಊಟವಾದ ತಕ್ಷಣ ನೀರನ್ನು ಕುಡಿಯಬಾರದು ಎನ್ನುವುದಕ್ಕೆ ಕಾರಣವಿಲ್ಲಿದೆ
ನಾವು ಪ್ರತಿದಿನ ಕನಿಷ್ಠ ಎಂಟು ಗ್ಲಾಸ್ ನೀರನ್ನು ಕುಡಿಯಬೇಕು ಎನ್ನುವುದು ಎಲ್ಲರಿಗೂ ಗೊತ್ತು. ಆದರೆ ನೀರು ಕುಡಿಯಲು ಸರಿಯಾದ ಸಮಯ ಯಾವುದು? ಶರೀರದಲ್ಲಿ ನೀರಿನ ಪರಿಣಾಮವನ್ನು ಗರಿಷ್ಠವಾಗಿಸಲು ಅದನ್ನು ಸೇವಿಸಲು ಅತ್ಯುತ್ತಮ ಸಮಯ ಯಾವುದು ಮತ್ತು ಹಾನಿಕಾರಕ ಪರಿಣಾಮವನ್ನು ತಪ್ಪಿಸಲು ನೀರನ್ನು ಯಾವ ಸಮಯ ದಲ್ಲಿ ಸೇವಿಸಬಾರದು ಎಂಬ ಬಗ್ಗೆ ಮಾಹಿತಿ ಇಲ್ಲಿದೆ.
ಬೆಳಿಗ್ಗೆ ಎದ್ದ ಬಳಿಕ ಉಪಹಾರವನ್ನು ಸೇವಿಸುವ ಮೊದಲು ಒಂದು ಗ್ಲಾಸ್ ನೀರು ಕುಡಿಯುವುದರಿಂದ ಆಂತರಿಕ ಅಂಗಾಂಗಗಳನ್ನು ಕ್ರಿಯಾಶೀಲಗೊಳಿಸಲು ಮತ್ತು ಶರೀರದಲ್ಲಿಯ ಯಾವುದೇ ನಂಜಿನ ಅಂಶಗಳನ್ನು ನಿವಾರಿಸಲು ನೆರವಾಗುತ್ತದೆ.
ಊಟಕ್ಕೆ ಅರ್ಧ ಗಂಟೆ ಮೊದಲು ಒಂದು ಗ್ಲಾಸ್ ನೀರು ಕುಡಿಯುವುದರಿಂದ ಪಚನ ಕಾರ್ಯ ಸುಗಮವಾಗಿ ನಡೆಯುತ್ತದೆ.
ಊಟಕ್ಕೆ ಕುಳಿತಾಗ ತುತ್ತನ್ನು ಬಾಯಿಗಿಟ್ಟುಕೊಳ್ಳುವ ಮುನ್ನ,ಊಟದ ನಡುವೆ ಅಥವಾ ಊಟವಾದ ತಕ್ಷಣ ನೀರನ್ನು ಕುಡಿಯಲೇಬೇಡಿ. ಹೀಗೆ ಮಾಡುವುದರಿಂದ ನೀರು ಜೀರ್ಣರಸಗಳನ್ನು ದುರ್ಬಲಗೊಳಿಸುತ್ತದೆ ಮತ್ತು ಶರೀರವು ಪೌಷ್ಟಿಕಾಂಶಗಳನ್ನು ಹೀರಿಕೊಳ್ಳಲು ಅವಕಾಶ ನೀಡುವುದಿಲ್ಲ.
ಸ್ನಾನ ಮಾಡುವ ಮುನ್ನ ಒಂದು ಗ್ಲಾಸ್ ನೀರಿನ ಸೇವನೆಯು ರಕ್ತದೊತ್ತಡವನ್ನು ತಗ್ಗಿಸಲು ನೆರವಾಗುತ್ತದೆ.
ರಾತ್ರಿ ಮಲಗುವ ಮುನ್ನ ಒಂದು ಗ್ಲಾಸ್ ನೀರನ್ನು ಸೇವಿಸಿದರೆ ಅದು ರಾತ್ರಿ ಶರೀರದಲ್ಲಿ ಉಂಟಾಗಬಹುದಾದ ನೀರಿನ ಕೊರತೆಯನ್ನು ತುಂಬಿಸುತ್ತದೆ.