Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಭಯೋತ್ಪಾದಕ ಗುಂಪು ಸೇರಿದನೇ ಕಾಶ್ಮೀರದ...

ಭಯೋತ್ಪಾದಕ ಗುಂಪು ಸೇರಿದನೇ ಕಾಶ್ಮೀರದ ಫುಟ್‌ಬಾಲ್ ಆಟಗಾರ ?

ವಾರ್ತಾಭಾರತಿವಾರ್ತಾಭಾರತಿ16 Nov 2017 7:10 PM IST
share
ಭಯೋತ್ಪಾದಕ ಗುಂಪು ಸೇರಿದನೇ ಕಾಶ್ಮೀರದ ಫುಟ್‌ಬಾಲ್ ಆಟಗಾರ ?

ಶ್ರೀನಗರ, ನ.16: ಕಳೆದೊಂದು ವರ್ಷದಿಂದ ಜಮ್ಮುಕಾಶ್ಮೀರದ 100ಕ್ಕೂ ಹೆಚ್ಚು ಸ್ಥಳೀಯ ವ್ಯಕ್ತಿಗಳು ಭಯೋತ್ಪಾದಕರ ಗುಂಪನ್ನು ಸೇರಿಕೊಂಡಿದ್ದಾರೆ ಎಂದು ಭದ್ರತಾ ಪಡೆಗಳು ಮಾಹಿತಿ ನೀಡಿದ್ದು, ಇದೀಗ ಈ ಪಟ್ಟಿಗೆ ಖ್ಯಾತ ಫುಟ್‌ಬಾಲ್ ಆಟಗಾರನಾಗಿದ್ದ ಜಮ್ಮು ಕಾಶ್ಮೀರದ 20ರ ಹರೆಯದ ಮಜೀದ್ ಖಾನ್ ಎಂಬಾತ ಸೇರ್ಪಡೆಗೊಂಡಿದ್ದಾನೆ ಎನ್ನಲಾಗಿದೆ.

ಕಳೆದ ಗುರುವಾರ ಮಜೀದ್‌ಖಾನ್ ಏಕಾಏಕಿ ಕಣ್ಮರೆಯಾಗಿದ್ದ. ಕೆಲ ದಿನದ ಬಳಿಕ ವಾಟ್ಸಾಪ್‌ನಲ್ಲಿ ಮಜೀದ್‌ಖಾನ್ ರೈಫಲ್ ಹಿಡಿದು ನಿಂತಿರುವ ಚಿತ್ರ ಪ್ರಸಾರವಾಗಿದ್ದು ಆತ ಭಯೋತ್ಪಾದಕ ಗುಂಪು ಸೇರಿರಬಹುದು ಎಂಬ ಶಂಕೆಯನ್ನು ದೃಢಪಡಿಸಿದೆ. 

ಶಾಲಾ ದಿನದಿಂದಲೇ ಫುಟ್‌ಬಾಲ್ ಆಟದತ್ತ ಆಕರ್ಷಿತನಾಗಿದ್ದ ಮಜೀದ್‌ಖಾನ್ ಮನೆಯ ಕಪಾಟಿನ ತುಂಬಾ ಟ್ರೋಫಿಗಳೇ ತುಂಬಿವೆ. ದಕ್ಷಿಣ ಕಾಶ್ಮೀರದಲ್ಲಿ ಪೊಲೀಸರು ನಡೆಸಿದ ಫುಟ್‌ಬಾಲ್ ಟೂರ್ನಿಯಲ್ಲಿ ಉತ್ತಮ ಆಟಗಾರನೆಂಬ ಪುರಸ್ಕಾರದ ಜೊತೆ ದೊರೆತ ಟ್ರೋಫಿಯೂ ಇದರಲ್ಲಿ ಸೇರಿದೆ.

ಮಗ ನಾಪತ್ತೆಯಾಗಿ ವಾರ ಕಳೆದರೂ ಮಜೀದ್ ಖಾನ್ ನ 50ರ ಹರೆಯದ ತಾಯಿ ಆಶಿಯಾ ಬೇಗಂ ಉಪಾಹಾರ ಸೇವಿಸದೆ ತನ್ನ ಮಗನ ಬರುವಿಕೆಗಾಗಿ ಕಾಯುತ್ತಿದ್ದಾರೆ. ಮನೆಗೆ ಭೇಟಿ ನೀಡುವ ಪ್ರತಿಯೊಬ್ಬರಲ್ಲೂ ತನ್ನ ಮಗನನ್ನು ರಕ್ಷಿಸಿ ಎಂದು ವಿನಂತಿ ಮಾಡಿಕೊಳ್ಳುತ್ತಿದ್ದಾರೆ. 'ಮರಳಿ ಬಾ ಮಗನೇ' ಎಂದು ಬೇಗಂ ಕಣ್ಣೀರಿಡುತ್ತಾ ನಿವೇದನೆ ಮಾಡಿಕೊಳ್ಳುತ್ತಿರುವ ವೀಡಿಯೊ ದೃಶ್ಯಾವಳಿ ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್ ಆಗಿಬಿಟ್ಟಿದೆ. ಸಾವಿರಾರು ಮಂದಿ ಮಜೀದ್‌ಖಾನ್‌ಗೆ ಮರಳಿ ಬರುವಂತೆ ಮನವಿ ಮಾಡಿಕೊಂಡಿದ್ದಾರೆ.

ಈ ಮಧ್ಯೆ, ಮಂಗಳವಾರ ಜಮ್ಮುವಿನ ಕುಲ್‌ಗಾಂವ್‌ನಲ್ಲಿ ನಡೆದ ಎನ್‌ಕೌಂಟರ್‌ನಲ್ಲಿ ಮಜೀದ್‌ಖಾನ್ ಸೇರಿದಂತೆ ಮೂವರು ಸ್ಥಳೀಯ ಭಯೋತ್ಪಾದಕರನ್ನು ಪೊಲೀಸರು ಸೆರೆಹಿಡಿದಿದ್ದಾರೆ ಎಂಬ ಸುದ್ದಿ ಹಬ್ಬಿದ್ದು ಇದನ್ನು ಕೇಳಿ 59ರ ಹರೆಯದ ಆತನ ತಂದೆ ಇರ್ಷಾದ್ ಅಹ್ಮದ್ ಖಾನ್‌ಗೆ ಲಘು ಹೃದಯಾಘಾತವಾಗಿದೆ. ಮಜೀದ್ ಖಂಡಿತಾ ಮರಳಿ ಬರುತ್ತಾನೆ. ಆತ ನನಗೆ ಕೇವಲ ಮಗನಾಗಿರಲಿಲ್ಲ, ನಾವಿಬ್ಬರೂ ಉತ್ತಮ ಸ್ನೇಹಿತರಂತಿದ್ದೆವು . ಆತ ಹೀಗೇಕೆ ಮಾಡಿದ ಎಂದೇ ಅರ್ಥವಾಗುತ್ತಿಲ್ಲ ಎಂದು ಇರ್ಷಾದ್ ಹೇಳುತ್ತಾರೆ.

ಭಯೋತ್ಪಾದಕ ಗುಂಪು ತ್ಯಜಿಸಲು ಸ್ಥಳೀಯ ಯುವಕರು ಇಚ್ಛಿಸಿದರೆ ಅವರಿಗೆ ಸೂಕ್ತ ಸಹಾಯ ನೀಡಿ ಪುನರ್ವಸತಿ ವ್ಯವಸ್ಥೆ ಮಾಡಲಾಗುವುದು. ಇದೇ ರೀತಿ ಮಜೀದ್‌ಖಾನ್ ತಮ್ಮ ಕುಟುಂಬದವರನ್ನು ಮರಳಿ ಸೇರುವಂತಾಗಲು ಸರ್ವಪ್ರಯತ್ನ ನಡೆಸಲಾಗುವುದು. ಶಸ್ತ್ರ ತ್ಯಜಿಸಿ, ಮುಖ್ಯವಾಹಿನಿಗೆ ಮರಳಿ ಬನ್ನಿ ಎಂಬ ಸಂದೇಶವನ್ನು ಮಜೀದ್‌ಖಾನ್ ಸೇರಿದಂತೆ ಎಲ್ಲಾ ಸ್ಥಳೀಯ ಯುವಕರಿಗೂ ನೀಡುತ್ತೇವೆ ಎಂದು ಸಿಆರ್‌ಪಿಎಫ್‌ನ ಹಿರಿಯ ಅಧಿಕಾರಿ ಝುಲ್ಫಿಕರ್ ಹಸನ್ ಹೇಳಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X