ನ.17ರಂದು ಗೋ.ಮಧುಸೂಧನ್ ವಿರುದ್ಧ ಕಾನೂನು ಕ್ರಮಕ್ಕೆ ಆಗ್ರಹಿಸಿ ಧರಣಿ
ಬೆಂಗಳೂರು, ನ.16: ಖಾಸಗಿ ವಾಹಿನಿಯಲ್ಲಿ ಸಂವಿಧಾನದ ವಿರುದ್ಧ ಅವಹೇನಕಾರಿಯಾಗಿ ಮಾತನಾಡಿದ ರಾಜ್ಯ ಬಿಜೆಪಿ ವಕ್ತಾರ ಗೋ.ಮಧುಸೂಧನ್ ವಿರುದ್ಧ ಕಾನೂನು ಕ್ರಮ ಕೈಗೊಳ್ಳಬೇಕೆಂದು ಆಗ್ರಹಿಸಿ ನ.17ರಂದು ಬೆಳಗ್ಗೆ 11ಕ್ಕೆ ನಗರದ ಮೈಸೂರು ಬ್ಯಾಂಕ್ ವೃತ್ತದಲ್ಲಿ ಧರಣಿ ಹಮ್ಮಿಕೊಳ್ಳಲಾಗಿದೆ ಎಂದು ದಸಂಸ ಜಿಲ್ಲಾ ಸಂಚಾಲಕ ಜಿಗಳ ಶ್ರೀರಾಮ್ ತಿಳಿಸಿದ್ದಾರೆ.
ಡಾ.ಬಿ.ಆರ್.ಅಂಬೇಡ್ಕರ್ ರಚಿಸಿರುವ ಸಂವಿಧಾನವನ್ನು ಒಪ್ಪಲು ಸಾಧ್ಯವಿಲ್ಲ ಎಂದು ರಾಷ್ಟ್ರೀಯ ಪಕ್ಷವಾದ ಬಿಜೆಪಿಯಲ್ಲಿ ವಕ್ತಾರರಾಗಿರುವ ಗೋ.ಮಧುಸೂಧನ್ ಹೇಳಿದ್ದಾರೆ. ಇಂತಹ ಹೇಳಿಕೆಗಳನ್ನು ಕೊಡುವ ಮೂಲಕ ಪ್ರಜಾಪ್ರಭುತ್ವ ವ್ಯವಸ್ಥೆಯನ್ನು ಹಾಳು ಮಾಡಲು ಮುಂದಾಗಿದ್ದಾರೆ. ಹೀಗಾಗಿ ಗೋ.ಮಧುಸೂಧನ್‌ಗೆ ದೇಶದ್ರೋಹಿ ಕಲಂ ಅಡಿ ಬಂಧಿಸಿ ಸೂಕ್ತ ಕ್ರಮ ಕೈಗೊಳ್ಳಬೇಕು. ಗೋ.ಮಧುಸೂಧನ್ ಸಂವಿಧಾನದ ವಿರುದ್ಧ ಹೇಳಿಕೆ ನೀಡುವ ಮೂಲಕ ತನ್ನ ದೇಶದ್ರೋಹಿ ತನವನ್ನು ಪ್ರದರ್ಶಿಸಿದ್ದಾರೆ. ಇವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳದಿದ್ದರೆ ಇವರ ರೀತಿಯಲ್ಲಿ ಬೇರೆಯವರು ಸಂವಿಧಾನದ ವಿರುದ್ಧ ಮಾತನಾಡಲು ಶುರುಮಾಡುತ್ತಾರೆ. ಹೀಗಾಗಿ ಮಧುಸೂಧನ್ ವಿರುದ್ಧ ಸೂಕ್ರ ಕ್ರಮ ಕೈಗೊಂಡು ಪ್ರಜಾಪ್ರಭುತ್ವವನ್ನು ಉಳಿಸಬೇಕು ಎಂದು ಅವರು ಪತ್ರಿಕಾ ಹೇಳಿಕೆಯಲ್ಲಿ ತಿಳಿಸಿದ್ದಾರೆ.





