ಕಾಡಾನೆ ಹಾವಳಿ ತಡೆಗೆ ಕ್ರಮ: ಸಚಿವ ರೆ ಭರವಸೆ
ಮಡಿಕೇರಿ, ನ.16: ಕೊಡಗು ಜಿಲ್ಲೆಯಲ್ಲಿ ಕಾಡಾನೆ ಹಾವಳಿ ನಿಯಂತ್ರಣ ಸಂಬಂಧಿಸಿದಂತೆ ಅಗತ್ಯ ಕ್ರಮ ಕೈಗೊಳ್ಳುವುದಾಗಿ ಸಚಿವ ರಮಾನಾಥ ರೈ ಭರವಸೆ ನೀಡಿದ್ದಾರೆ.
ಈ ಕುರಿತಂತೆ ವಿಧಾನ ಪರಿಷತ್‌ನಲ್ಲಿ ಸದಸ್ಯೆ ವೀಣಾ ಅಚ್ಚಯ್ಯ ಶಾಶ್ವತವಾಗಿ ಕಾಡಾನೆ ಹಾವಳಿ ನಿಯಂತ್ರಿಸಬೇಕು ಎಂದು ಸಚಿವರಲ್ಲಿ ಮನವಿ ಮಾಡಿದ್ದರು. ಇದಕ್ಕೆ ಸಚಿವರು ಸ್ಪಂದಿಸಿದ್ದಾರೆ.
ಕೊಡಗು ವೃತ್ತ ವ್ಯಾಪ್ತಿಯ ಕುಶಾಲನಗರ ವಲಯದ ಚಿಕ್ಲಿಹೊಳೆ ಹಿನ್ನೀರು ಪ್ರದೇಶದಲ್ಲಿ 5 ಕಿ.ಮೀ. ರೈಲ್ವೆ ಬ್ಯಾರಿಕೇಡ್ ನಿರ್ಮಾಣ ಮಾಡಲು ಕಾಮಗಾರಿ ಕೈಗೊಳ್ಳಲಾಗಿದೆ ಎಂದು ಸಚಿವರು ಮಾಹಿತಿ ನೀಡಿದ್ದಾರೆ.
ತಾಂತ್ರಿಕ ಪ್ರಕ್ರಿಯೆ ನಂತರ ಕಾಮಗಾರಿ ಅನುಷ್ಠಾನಗೊಳಿಸ ಲಾಗುವುದು. ವೀರಾಜಪೇಟೆ ವಿಭಾಗದಲ್ಲಿ 2.73 ಕಿ.ಮೀ. ಕಾಮಗಾರಿ ಕೈಗೊಳ್ಳಲು ವಾರ್ಷಿಕ ಕ್ರಿಯಾಯೋಜನೆಯಲ್ಲಿ ಅಳವಡಿಸಲಾಗಿದೆ ಎಂದಿದ್ದಾರೆ.
ತಾಂತ್ರಿಕ ಪರಿಶೀಲನೆಯ ನಂತರ ಟೆಂಡರ್ ಪ್ರಕ್ರಿಯೆ ಕೈಗೊಂಡು ಅನುಷ್ಠಾನಗೊಳಿಸಲಾಗುವುದು. ಹಾಗೆಯೇ ವನ್ಯಜೀವಿ ವಿಭಾಗದಲ್ಲಿ 715 ಮೀ. ರೈಲ್ವೆ ಬ್ಯಾರಿಕೇಡ್ ಕಾಮಗಾರಿ ಕೈಗೊಳ್ಳಲು ಯೋಜನೆಯನ್ನು ಹಮ್ಮಿಕೊಳ್ಳಲಾಗಿದೆ. ಟೆಂಡರ್ ಪ್ರಕ್ರಿಯೆ ಪ್ರಗತಿಯಲ್ಲಿದೆ ಎಂದು ಸಚಿವರು ಮಾಹಿತಿ ನೀಡಿದ್ದಾರೆ.







