ಸೂಕ್ತ ಚಿಕಿತ್ಸೆ ಲಭಿಸದೆ ಯುವಕ ಮೃತ್ಯು: ಆರೋಪ
ವೈದ್ಯರ ಮುಷ್ಕರ
ಬಂಟ್ವಾಳ, ನ.17: ರಾಜ್ಯಾದ್ಯಂತ ವೈದ್ಯರ ಮುಷ್ಕರದ ಪರಿಣಾಮದಿಂದಾಗಿ ಸೂಕ್ತ ಚಿಕಿತ್ಸೆ ಲಭಿಸದೆ ಲಿವರ್ ಸಮಸ್ಯೆಯಿಂದ ಬಳಲುತ್ತಿದ್ದ ವಿಟ್ಲದ ಯುವಕನೋರ್ವ ಮೃತಪಟ್ಟ ಘಟನೆ ಶುಕ್ರವಾರ ನಡೆದಿದೆ.
ವಿಟ್ಲ ಕಸಬಾ ಗ್ರಾಮದ ರಾಯರಬೆಟ್ಟು ನಿವಾಸಿ ರುಕ್ಮ ಪೂಜಾರಿ ಎಂಬವರ ಪುತ್ರ ರಜತ್‌ರಾಜ್(27) ಮೃತ ಯುವಕ ಎಂದು ಗುರುತಿಸಲಾಗಿದೆ.
ಅವರು ಕಳೆದ ಒಂದೂವರೆ ವರ್ಷದಿಂದ ಲಿವರ್ ಸಮಸ್ಯೆಯಿಂದ ಬಳಲುತ್ತಿದ್ದರು. ಗುರುವಾರ ಮತ್ತೆ ಅನಾರೋಗ್ಯ ಕಾಡಿದ್ದು, ವೈದ್ಯರ ಮುಷ್ಕರವಿದ್ದುದರಿಂದ ಮಂಗಳೂರು ವೆನ್ಲಾಕ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಅದಕ್ಕೆ ಸಂಬಂಧಪಟ್ಟ ಚಿಕಿತ್ಸೆ ವ್ಯವಸ್ಥೆ ಇಲ್ಲವೆಂದು ಅಲ್ಲಿನ ವೈದ್ಯರು ತಿಳಿಸಿದ್ದರು ಎನ್ನಲಾಗಿದೆ. ಇದರಿಂದ ರಾತ್ರಿ ತೀವ್ರ ಅನಾರೋಗ್ಯ ಉಂಟಾದಾಗ ಅವರನ್ನು ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಅಲ್ಲಿ ಚಿಕಿತ್ಸೆ ಫಲಕಾರಿಯಾಗದೆ ಶುಕ್ರವಾರ ಮೃತಪಟ್ಟಿದ್ದಾರೆ ಎಂದು ರಜತ್‌ರಾಜ್ ಅವರ ಕುಟುಂಬಸ್ಥರು ಪತ್ರಿಕೆಗೆ ತಿಳಿಸಿದ್ದಾರೆ.
Next Story





