ಖಾಸಗಿ ವೈದ್ಯಕೀಯ ಸಂಸ್ಥೆಗಳ ತಿದ್ದುಪಡಿ ವಿಧೇಯಕಕ್ಕೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅಧ್ಯಕ್ಷತೆಯಲ್ಲಿ ಇಂದು ನಡೆದ ಸಂಧಾನ ಮಾತುಕತೆ ಯಶಸ್ವಿಯಾಗಿದ್ದು, ಮುಷ್ಕರ ವಾಪಸ್ ಪಡೆಯಲು ಖಾಸಗಿ ವೈದ್ಯರು ನಿರ್ಧರಿಸಿದ್ದಾರೆ. ಇದರೊಂದಿಗೆ ರಾಜ್ಯ ಸರಕಾರ ಹಾಗೂ ಖಾಸಗಿ ವೈದ್ಯರ ನಡುವಿನ ಸಂಘರ್ಷ ಅಂತ್ಯಗೊಂಡಿದೆ.