Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಸಿನಿಮಾ
  4. ಸ್ಯಾಂಡಲ್ ವುಡ್ ನಲ್ಲಿ ನೋಟು ಬ್ಯಾನ್...

ಸ್ಯಾಂಡಲ್ ವುಡ್ ನಲ್ಲಿ ನೋಟು ಬ್ಯಾನ್ ಚಿತ್ರ

ವಾರ್ತಾಭಾರತಿವಾರ್ತಾಭಾರತಿ18 Nov 2017 5:22 PM IST
share
ಸ್ಯಾಂಡಲ್ ವುಡ್ ನಲ್ಲಿ ನೋಟು ಬ್ಯಾನ್ ಚಿತ್ರ

ಇಳಯದಳಪತಿ ವಿಜಯ್ ನಟಿಸಿರುವ ‘ಮೆರ್ಸಲ್’ ಬಾಕ್ಸ್ ಆಫೀಸ್‌ನಲ್ಲಿ ಧೂಳೆಬ್ಬಿಸುತ್ತಿರುವುದು ಎಲ್ಲರಿಗೂ ಗೊತ್ತು. ಆ ಚಿತ್ರದಲ್ಲಿ ಜಿಎಸ್‌ಟಿ ಕುರಿತ ಸಂಭಾಷಣೆಯೊಂದು ಭಾರೀ ವಿವಾದವೆಬ್ಬಿಸಿದ್ದುದು ಕೂಡಾ ದೊಡ್ಡ ಸುದ್ದಿಯಾಗಿತ್ತು. ಇತ್ತ ಸ್ಯಾಂಡಲ್‌ವುಡ್‌ನಲ್ಲಿ ನೋಟು ಬ್ಯಾನ್ ಹಿನ್ನೆಲೆಯುಳ್ಳ ಕಥಾವಸ್ತುವಿರುವ ಎರಡು ಚಿತ್ರಗಳು ಸದ್ದಿಲ್ಲದೆ ಸೆಟ್ಟೇರುತ್ತಿವೆ. ಜನಪ್ರಿಯ ನಿರ್ದೇಶಕ ಎಸ್.ಡಿ. ಅರವಿಂದ್ ಈಗಾಗಲೇ ತನ್ನ ಮುಂದಿನ ಚಿತ್ರ ನೋಟು ನಿಷೇಧಕ್ಕೆ ಸಂಬಂಧಿಸಿದ ಕಥೆಯನ್ನು ಹೊಂದಿದೆಯೆಂದು ಘೋಷಿಸಿಬಿಟ್ಟಿದ್ದಾರೆ.

ಇದೀಗ ಉದಯೋನ್ಮುಖ ನಿರ್ದೇಶಕ ಸೌರಭ್ ಶುಕ್ಲಾ ಕೂಡಾ ಇದೇ ವಿಷಯವಸ್ತುವನ್ನು ಹೊಂದಿರುವ ಚಿತ್ರದ ಶೂಟಿಂಗ್ ಆರಂಭಿಸಲು ಸಜ್ಜಾಗುತ್ತಿದ್ದಾರೆ. ‘1888’ ಎಂದು ಹೆಸರಿಡಲಾದ ಈ ಚಿತ್ರದಲ್ಲಿ ‘ಗಾಳಿಪಟ ಚಿತ್ರ’ದ ಖ್ಯಾತಿಯ ನೀತು ನಾಯಕಿಯಾಗಿ ನಟಿಸುತ್ತಿದ್ದಾರೆ. ಉದಯೋನ್ಮುಖ ತಾರೆಯರಾದ ಪ್ರತಾಪ್ ಕುಮಾರ್, ಮಂಜುರಾಜ್ ಹಾಗೂ ವಿಕ್ರಮ್ ಇತರ ಮುಖ್ಯ ಪಾತ್ರಗಳಲ್ಲಿದ್ದಾರೆ. ‘‘1888 ಒಂದು ಅಪ್ಪಟ ಥ್ರಿಲ್ಲರ್ ಚಿತ್ರವಾಗಿದೆ. ನೋಟು ನಿಷೇಧ ಘೋಷಣೆಯಾದ ಮೊದಲ ವಾರದಲ್ಲಿ ನಡೆಯುವ ಘಟನಾವಳಿಗಳು ಚಿತ್ರದಲ್ಲಿ ರೋಚಕವಾಗಿ ಮೂಡಿಬರಲಿದೆ. ಚಿತ್ರದ ಅರ್ಧದಷ್ಟು ಸನ್ನಿವೇಶಗಳು ಕಾರೊಂದರಲ್ಲಿ ನಡೆಯುತ್ತವೆ’’ ಎಂದು ನಾಯಕಿ ನೀತು ಹೇಳುತ್ತಾರೆ. ತನ್ನ ವೃತ್ತಿ ಬದುಕಿಗೆ ಈ ಚಿತ್ರ ಮೈಲುಗಲ್ಲಾಗಲಿದೆಯೆಂಬ ಭರವಸೆಯನ್ನು ಆಕೆ ಹೊಂದಿದ್ದಾರೆ. ಅಂದಹಾಗೆ ನೀತು ಈ ಚಿತ್ರದಲ್ಲಿ ರಾಜಕೀಯ ಪ್ರವೇಶಿಸಿದ ನಟಿಯಾಗಿ ಕಾಣಿಸಿಕೊಳ್ಳಲಿದ್ದಾರೆ.

ಈ ಚಿತ್ರದ ಇನ್ನೊಂದು ವಿಶೇಷವೆಂದರೆ, ಈ ಚಿತ್ರವು ಗೆರಿಲ್ಲಾ ಫಿಲ್ಮ್‌ಮೇಕಿಂಗ್ ಟೆಕ್ನಿಕ್ನ್‌ನಲ್ಲಿ ಚಿತ್ರೀಕರಣವಾಗಲಿದೆ. ಅಂದರೆ ಚಿತ್ರದಲ್ಲಿ ಯಾವುದೇ ಕೃತಕ ಸೆಟ್, ಲೈಟ್‌ಗಳು ಇರುವುದಿಲ್ಲ. ಅಷ್ಟೇ ಅಲ್ಲ ನಟ, ನಟಿಯರು ಕೂಡಾ ಯಾವುದೇ ಮೇಕಪ್ ಹಚ್ಚುವುದಿಲ್ಲ. ಬಹುತೇಕ ದೃಶ್ಯಗಳು ಸಾರ್ವಜನಿಕ ಸ್ಥಳಗಳಲ್ಲಿ ಚಿತ್ರೀಕರಣಗೊಳ್ಳಲಿದ್ದು, ಇಲ್ಲಿ ಚಿತ್ರತಂಡವು ಇತರರ ಅರಿವಿಗೆ ಬಾರದಂತೆ ಶೂಟಿಂಗ್ ನಡೆಸಲಿದೆ. ಒಟ್ಟಿನಲ್ಲಿ ‘1888’, ಸ್ಯಾಂಡಲ್‌ವುಡ್‌ನಲ್ಲಿ ಒಂದು ವಿಭಿನ್ನ ಚಿತ್ರವಾಗುವುದರಲ್ಲಿ ಸಂದೇಹವಿಲ್ಲವೆಂದು ನೀತು ಹೇಳುತ್ತಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X