ತುಳು ಸಾಹಿತ್ಯ ಸಮ್ಮೇಳನ
ನ. 22ರಂದು ಕಾರ್ಯಾಲಯ ಉದ್ಘಾಟನೆ, ಆಮಂತ್ರಣ ಪತ್ರಿಕೆ ಬಿಡುಗಡೆ
ಬಂಟ್ವಾಳ, ನ. 19: ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿ ಮತ್ತು ಬಂಟ್ವಾಳ ತಾಲೂಕು ತುಳು ಸಾಹಿತ್ಯ ಸಮ್ಮೇಳನ ಸಮಿತಿ ಆಶ್ರಯದಲ್ಲಿ ಡಿ. 10ರಂದು ಬೆಳಗ್ಗೆ 9ರಿಂದ ರಾತ್ರಿ 9ರ ತನಕ ಬಿ.ಸಿ.ರೋಡಿನ ಸ್ಪರ್ಶಾ ಕಲಾ ಮಂದಿರದಲ್ಲಿ ನಡೆಯುವ ಬಂಟ್ವಾಳ ತಾಲೂಕು ಮಟ್ಟದ ಪ್ರಥಮ ತುಳು ಸಾಹಿತ್ಯ ಸಮ್ಮೇಳನದ ಆಮಂತ್ರಣ ಪತ್ರಿಕೆ ಬಿಡುಗಡೆ, ಕಾರ್ಯಾಲಯ ಉದ್ಘಾಟನೆ ಹಾಗೂ ಸಮಾಲೋಚನಾ ಸಭೆ ನ. 22ರಂದು ಸಂಜೆ 3.30ಕ್ಕೆ ಬಿ.ಸಿ.ರೋಡಿನ ಸ್ಪರ್ಶಾ ಕಲಾ ಮಂದಿರದಲ್ಲಿ ನಡೆಯಲಿದೆ.
ಒಡಿಯೂರು ಗುರುದೇವಾನಂದ ಸ್ವಾಮೀಜಿ ಅವರು ಆಮಂತ್ರಣ ಪತ್ರಿಕೆ ಬಿಡುಗಡೆ ಮಾಡುವರು. ಸಭೆಯಲ್ಲಿ ಅಕಾಡೆಮಿ ಅಧ್ಯಕ್ಷ ಎ.ಸಿ.ಭಂಡಾರಿ, ಅಕಾಡೆಮಿ ಸದಸ್ಯರ ಸಹಿತ ಹಿರಿಯ ಗಣ್ಯರು ಭಾಗವಹಿಸಿ ಮಾರ್ಗದರ್ಶನ ನೀಡಲಿದ್ದಾರೆ. ತುಳು ಸಾಹಿತಿಗಳು, ಕಲಾವಿದರು, ಜಾನಪದ ವಿದ್ವಾಂಸರು, ಬಂಟ್ವಾಳ ತುಳುಕೂಟದ ಸದಸ್ಯರು, ತುಳುಪರ ಸಂಘಟನೆಗಳು, ಪರ್ತಕರ್ತರು, ತುಳು ಅಭಿಮಾನಿಗಳು ಭಾಗವಹಿಸಿ ಸಲಹೆ ಸೂಚನೆ ನೀಡುವಂತೆ ಸಮ್ಮೇಳನ ಸಮಿತಿ ಅಧ್ಯಕ್ಷ ಸುದರ್ಶನ್ ಜ್ಯೆನ್ ಮತ್ತು ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿ ಸದಸ್ಯ ಗೋಪಾಲ ಅಂಚನ್ ಅವರು ಜಂಟಿ ಪ್ರಕಟನೆಯಲ್ಲಿ ತಿಳಿಸಿದ್ದಾರೆ.





