ನ.20: ಕೊಲ್ಲೂರಿಗೆ ವಸುಂಧರಾ ರಾಜೇ, 21ರಂದು ಶ್ರೀಲಂಕಾ ಪ್ರಧಾನಿ ರನಿಲ್ ವಿಕ್ರಮಸಿಂಘೆ ಭೇಟಿ
ಉಡುಪಿ, ನ.19: ಕೊಲ್ಲೂರು ಮುಕಾಂಬಿಕಾ ದೇವಸ್ಥಾನಕ್ಕೆ ನ.20ರಂದು ರಾಜಸ್ಥಾನದ ಮುಖ್ಯಮಂತ್ರಿ ವಸುಂಧರಾ ರಾಜೇ ಸಿಂಧಿಯಾ ಅವರು ಭೇಟಿ ನೀಡಲಿದ್ದರೆ, ನ.21ರ ಮಂಗಳವಾರ ಶ್ರೀಲಂಕಾದ ಪ್ರಧಾನಿ ರನಿಲ್ ವಿಕ್ರಮ ಸಿಂಘೆ ಅವರು ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಸಲಿದ್ದಾರೆ ಎಂದು ದೇವಸ್ಥಾನದ ಕಾರ್ಯನಿರ್ವಹಣಾಧಿಕಾರಿಯವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಈ ಕಾರಣ ಎರಡೂ ದಿನಗಳಂದು ಭದ್ರತಾ ಕಾರಣಗಳಿಗಾಗಿ ದೇವಸ್ಥಾನಕ್ಕೆ ಸಾರ್ವಜನಿಕ ಭಕ್ತಾಧಿಗಳ ಪ್ರವೇಶವನ್ನು ಬೆಳಗ್ಗೆ 10ರಿಂದ ಅಪರಾಹ್ನ 1:30 ರವರೆಗೆ ನಿರ್ಭಂದಿಸಲಾಗುವುದು. ಎಲ್ಲಾ ಭಕ್ತರು ಸಹಕರಿಸಬೇಕೆಂದು ಅವರು ಪ್ರಕಟಣೆಯಲ್ಲಿ ಮನವಿ ಮಾಡಿದ್ದಾರೆ.
Next Story





