ಮಂಗಳೂರು: ಇಂದಿರಾ ಗಾಂಧಿ ಜನ್ಮದಿನಾಚರಣೆ

ಮಂಗಳೂರು, ನ.19: ದ.ಕ.ಜಿಲ್ಲಾ ಕಾಂಗ್ರೆಸ್ ಸಮಿತಿ ವತಿಯಿಂದ ನಗರದ ಮಲ್ಲಿಕಟ್ಟೆಯಲ್ಲಿರುವ ಕಾಂಗ್ರೆಸ್ ಭವನದಲ್ಲಿ ಮಾಜಿ ಪ್ರಧಾನಿ ಇಂದಿರಾ ಗಾಂಧಿಯ 100ನೆ ವರ್ಷದ ಜನ್ಮದಿನವನ್ನು ರವಿವಾರ ಆಚರಿಸಲಾಯಿತು.
ಡಿಸಿಸಿ ಅಧ್ಯಕ್ಷ ಕೆ. ಹರೀಶ್ ಕುಮಾರ್ ಅಧ್ಯಕ್ಷತೆ ವಹಿಸಿದ್ದರು. ಎಐಸಿಸಿ ಕಾರ್ಯದರ್ಶಿ ಪಿ.ಸಿ. ವಿಷ್ಣುನಾಥ್, ಶಾಸಕರಾದ ಬಿ.ಎ.ಮೊಯ್ದಿನ್ ಬಾವ, ಜೆ.ಆರ್ ಲೊಬೊ, ಕೆಪಿಸಿಸಿ ಪ್ರಧಾನ ಕಾರ್ಯದರ್ಶಿಗಳಾದ ಯು.ಬಿ. ವೆಂಕಟೇಶ್, ಜಿ.ಎ. ಬಾವ, ಸವಿತಾ ರಮೇಶ್, ಮಾಜಿ ರಾಜ್ಯಸಭಾ ಸದಸ್ಯ ಬಿ.ಇಬ್ರಾಹೀಂ, ಪಕ್ಷದ ಮುಖಂಡ ಯು.ಕೆ.ಮೋನು, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರು, ಜಿಲ್ಲಾ ಕಾಂಗ್ರೆಸ್ ಪದಾಧಿಕಾರಿಗಳು, ವಿವಿಧ ಘಟಕದ ಜಿಲ್ಲಾ ಅಧ್ಯಕ್ಷರು ಉಪಸ್ಥಿತರಿದ್ದರು
Next Story





