ರಾಣಿ ಹೆಸರಿನಲ್ಲಿ ನಕಲಿ ಇನ್ಸ್‌ಟಾಗ್ರಾಂ ಖಾತೆ: ದೂರು
ಬೆಂಗಳೂರು, ನ.21: ಮೈಸೂರು ಮಹಾರಾಣಿ ತ್ರಿಷಿಕಾ ಹೆಸರಿನಲ್ಲಿ ಇನ್ಸ್‌ಟಾಗ್ರಾಂ ಆ್ಯಪ್‌ನಲ್ಲಿ ನಕಲಿ ಖಾತೆ ಪ್ರಕರಣಕ್ಕೆ ಸಂಬಂಧಪಟ್ಟಂತೆ ಬೆಂಗಳೂರು ಸೈಬರ್ ಕ್ರೈಂ ಠಾಣಾ ಪೊಲೀಸರಿಗೆ ದೂರು ನೀಡಲಾಗಿದೆ ಎಂದು ತಿಳಿದು ಬಂದಿದೆ.
ಸೋಮವಾರ ತ್ರಿಷಿಕಾ ಅವರ ಆಪ್ತ ಸಹಾಯಕರೊಬ್ಬರು ಸೈಬರ್ ಕ್ರೈಂ ಪೊಲೀಸರಿಗೆ ಲಿಖಿತ ದೂರು ನೀಡಿದ್ದಾರೆ. ಅಲ್ಲದೆ, ತ್ರಿಷಿಕಾ ಹೆಸರಿನಲ್ಲಿ ನಕಲಿ ಖಾತೆಯನ್ನು ತೆರೆದು ಬೇರೆ ಖಾತೆದಾರರಿಗೆ ರಿಕ್ವೆಸ್ಟ್ ಕಳುಹಿಸುತ್ತಿದ್ದಾರೆ. ಜತೆಗೆ ತ್ರಿಷಿಕಾ ಮತ್ತು ಅರಮನೆಗೆ ಸಂಬಂಧಪಟ್ಟ ಫೋಟೊಗಳನ್ನು ಅಪ್‌ಲೋಡ್ ಮಾಡಲಾಗುತ್ತಿದೆ ಎಂದು ದೂರಿನಲ್ಲಿ ಉಲ್ಲೇಖಿಸಿದ್ದಾರೆ ಎನ್ನಲಾಗಿದೆ.
ನ.13 ರಂದು ನಕಲಿ ಖಾತೆಯ ಬಗ್ಗೆ ಮಾಹಿತಿ ಸಿಕ್ಕಿತ್ತು. ಈ ಸಂಬಂಧ ಪ್ರಕರಣ ದಾಖಲಿಸಿಕೊಂಡಿರುವ ಸೈಬರ್ ಕ್ರೈಂ ಠಾಣಾ ಪೊಲೀಸರು ತನಿಖೆ ಕೈಗೊಂಡಿದ್ದಾರೆ.
Next Story





