ಇಂದಿರಾ ಗಾಂಧಿ ಜನ ಮೆಚ್ಚಿದ ನಾಯಕಿ: ಸುಧೀಂದ್ರ

ಬೆಂಗಳೂರು, ನ.21: ಮಾಜಿ ಪ್ರಧಾನಿ ಇಂದಿರಾಗಾಂಧಿ ಜನಪರ ಕಾರ್ಯಕ್ರಮಗಳನ್ನು ನೀಡುವ ಮೂಲಕ ಜನ ಮೆಚ್ಚಿದ ನಾಯಕಿಯಾಗಿದ್ದರು ಎಂದು ಕರ್ನಾಟಕ ರಾಜ್ಯ ಅರಣ್ಯ ಕೈಗಾರಿಕಾಭಿವೃದ್ಧಿ ನಿಗಮದ ಅಧ್ಯಕ್ಷ ಎಸ್.ಈ. ಸುಧೀಂದ್ರ ತಿಳಿಸಿದ್ದಾರೆ.
ನಗರದ ಬ್ಯಾಟರಾಯನಪುರ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ವಾರ್ಡ್ ಸಂಖ್ಯೆ 11ರಲ್ಲಿ ಮಾಜಿ ಪ್ರಧಾನಿ ಇಂದಿರಾ ಗಾಂಧಿ ಅವರ 100ನೆ ಜನ್ಮ ದಿನಾಚರಣೆ ಅಂಗವಾಗಿ ಉಚಿತ ಶುದ್ಧ ಕುಡಿಯುವ ನೀರಿನ ಘಟಕ ಉದ್ಘಾಟನೆ ಹಾಗೂ ಸಾರ್ವಜನಿಕರಿಗೆ ಉಚಿತ ಕ್ಯಾನ್‌ಗಳನ್ನು ವಿತರಣೆ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಅವರು ಮಾತನಾಡಿದರು.
ಮಾಜಿ ಪ್ರಧಾನಿ ಇಂದಿರಾ ಗಾಂಧಿ ಅವರು ಬ್ಯಾಂಕ್‌ಗಳ ರಾಷ್ಟ್ರೀಕರಣ, ಉಳುವವನೇ ಭೂಮಿಯ ಒಡೆಯ, ಹೀಗೆ ಅನೇಕ ಯೋಜನೆ ಜಾರಿಗೊಳಿಸಿದರು. ಉಕ್ಕಿನ ಮಹಿಳೆ ಎಂಬುದಾಗಿ ಖ್ಯಾತಿ ಗಳಿಸಿದ್ದ ಅವರು ತುರ್ತು ಪರಿಸ್ಥಿತಿ ಹೇರಿ, ಅದನ್ನು ಕೂಡ ಸರಿಯಾದ ರೀತಿಯಲ್ಲಿ ನಿಭಾಯಿಸಿದರು ಎಂದು ಹೇಳಿದರು.
ಕಾರ್ಯಕ್ರಮದಲ್ಲಿ ಬಿಬಿಎಂಪಿ ಸದಸ್ಯ ಪಾಥಿರಾಜನ್, ಎಸ್.ಈ.ಸುಧೀಂದ್ರ ಚಾರಿಟೇಬಲ್ ಟ್ರಸ್ಟ್‌ನ ಅಧ್ಯಕ್ಷ ರಘರಾಂ ರೆಡ್ಡಿ, ಪುಟ್ಟಸ್ವಾಮಿ, ಪದ್ಮಾರಾಜ್ ಜೈನ್ ಸೇರಿ ಪ್ರಮುಖರಿದ್ದರು.







