Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಖಾಸಗಿ ವೈದ್ಯಕೀಯ ಸಂಸ್ಥೆಗಳ ತಿದ್ದುಪಡಿ...

ಖಾಸಗಿ ವೈದ್ಯಕೀಯ ಸಂಸ್ಥೆಗಳ ತಿದ್ದುಪಡಿ ವಿಧೇಯಕ ಮಂಡನೆ

ಆಸ್ಪತ್ರೆಗಳಲ್ಲಿ ದರ ಪಟ್ಟಿ ಪ್ರದರ್ಶನ ಕಡ್ಡಾಯ ಸೇರಿದಂತೆ ವಿಧೇಯಕದಲ್ಲೇನಿದೆ

ವಾರ್ತಾಭಾರತಿವಾರ್ತಾಭಾರತಿ21 Nov 2017 9:29 PM IST
share
ಖಾಸಗಿ ವೈದ್ಯಕೀಯ ಸಂಸ್ಥೆಗಳ ತಿದ್ದುಪಡಿ ವಿಧೇಯಕ ಮಂಡನೆ

ಚಿಕಿತ್ಸೆ ಫಲಕಾರಿಯಾಗದೆ ರೋಗಿ ಮೃತಪಟ್ಟರೆ ಬಾಕಿ ಹಣಕ್ಕೆ ಬೇಡಿಕೆ ಇಡುವಂತಿಲ್ಲ
ತಪ್ಪಿತಸ್ಥ ವೈದ್ಯರನ್ನು ಜೈಲಿಗಟ್ಟುವ ಅಂಶ ಕೈ ಬಿಡಲಾಗಿದೆ

ಬೆಳಗಾವಿ, ನ.21: ರಾಜ್ಯಾದ್ಯಂತ ತೀವ್ರ ಚರ್ಚೆಗೆ ಗ್ರಾಸವಾಗಿದ್ದ ಖಾಸಗಿ ವೈದ್ಯಕೀಯ ಸಂಸ್ಥೆಗಳ ತಿದ್ದುಪಡಿ ವಿಧೇಯಕವನ್ನು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ಕೆ.ಆರ್. ರಮೇಶ್‍ಕುಮಾರ್ ಮಂಗಳವಾರ ವಿಧಾನಸಭೆಯಲ್ಲಿ ಮಂಡಿಸಿದ್ದಾರೆ.

ರಾಜ್ಯ ಸರಕಾರ ಉದ್ದೇಶಿತ ಮಸೂದೆ ಮಂಡನೆ ವಿರೋಧಿಸಿ ಖಾಸಗಿ ಆಸ್ಪತ್ರೆಗಳ ವೈದ್ಯರು ಐದು ದಿನಗಳ ರಾಜ್ಯಾದ್ಯಂತ ಪ್ರತಿಭಟನೆ ನಡೆಸಿದ್ದರು. ಈ ವಿಷಯ ಕುರಿತು ವಿಧಾನಮಂಡಲದ ಉಭಯ ಸದನಗಳಲ್ಲಿ ಪ್ರತಿಧ್ವನಿಸಿ ಆಡಳಿತ ಹಾಗೂ ವಿಪಕ್ಷಗಳ ನಡುವೆ ತೀವ್ರ ವಾಕ್ಸಮರಕ್ಕೆ ಎಡೆಮಾಡಿಕೊಟ್ಟಿತ್ತು.

ಆನಂತರ, ಮುಖ್ಯಮಂತ್ರಿ ಸಿದ್ದರಾಮಯ್ಯ ಅಧ್ಯಕ್ಷತೆಯಲ್ಲಿ ಖಾಸಗಿ ವೈದ್ಯರ ಸಂಘದ ಪದಾಧಿಕಾರಿಗಳೊಂದಿಗೆ ನಡೆದ ಸಂಧಾನ ಮಾತುಕತೆಯಲ್ಲಿ ಕೆಲವು ತಿದ್ದುಪಡಿಗಳೊಂದಿಗೆ ವಿಧೇಯಕ ಮಂಡನೆ ಮಾಡಲು ತೀರ್ಮಾನಿಸಲಾಗಿತ್ತು. ಅದರಂತೆ, ನಿನ್ನೆ ನಡೆದ ಸಚಿವ ಸಂಪುಟ ಸಭೆಯಲ್ಲಿ ವಿಧೇಯಕಕ್ಕೆ ಸಂಬಂಧಿಸಿದಂತೆ ಚರ್ಚೆ ನಡೆಸಿ, ಇಂದು ವಿಧಾನಸಭೆಯಲ್ಲಿ ವಿಧೇಯಕವನ್ನು ಮಂಡಿಸಲಾಯಿತು.

ವಿಧೇಯಕದಲ್ಲಿರುವ ಅಂಶಗಳು:

*ಸರಕಾರಿ ಯೋಜನೆಗಳಡಿಯಲ್ಲಿ ಒದಗಿಸಲಾಗುವ ಆರೋಗ್ಯ ಸೇವೆಗಳಿಗೆ ಸರಕಾರ ನಿಗದಿಪಡಿಸಿರುವ ದರವನ್ನು ದರಪಟ್ಟಿ ಮೂಲಕ ಆಸ್ಪತ್ರೆಯಲ್ಲಿ ಹಾಗೂ ವೆಬ್‍ಸೈಟ್‍ನಲ್ಲಿ ಪ್ರದರ್ಶಿಸಬೇಕು.

*ಆಯಾ ಆಸ್ಪತ್ರೆಗಳ ಚಿಕಿತ್ಸಾ ದರ ಪಟ್ಟಿಯನ್ನು ಆಯಾ ಆಸ್ಪತ್ರೆಗಳಲ್ಲಿ ಕಡ್ಡಾಯವಾಗಿ ಪ್ರದರ್ಶಿಸಬೇಕು.

*ಚಿಕಿತ್ಸೆ ಫಲಕಾರಿಯಾಗದೆ ರೋಗಿ ಮೃತಪಟ್ಟರೆ, ಚಿಕಿತ್ಸೆಯ ಬಾಕಿ ಹಣಕ್ಕಾಗಿ ಬೇಡಿಕೆ ಇಡುವಂತಿಲ್ಲ. 

*ನಿಗದಿತ ಅವಧಿಗಿಂತ ಹೆಚ್ಚಿನ ಸಮಯ ರೋಗಿಗಳನ್ನು ಕಾಯಿಸದೇ ಸಮಾಲೋಚನೆ ನಡೆಸಬೇಕು. ಅಲ್ಲದೆ, ಸಮಾಲೋಚನಾ ಕೊಠಡಿಯೊಳಗೆ ರೋಗಿಯ ಸಂಬಂಧ ಅಥವಾ ಸ್ನೇಹಿತರಿಗೆ ಅವಕಾಶ ನೀಡಬೇಕು.

*ತಪ್ಪು ಮಾಡುವ ವೈದ್ಯರಿಗೆ ಜೈಲು ಶಿಕ್ಷೆ ವಿಧಿಸಬೇಕು ಎಂಬ ಅಂಶವನ್ನು ವಿಧೇಯಕದಿಂದ ಹೊರಗಿಡಲಾಗಿದೆ.

*ಜಿಲ್ಲಾಧಿಕಾರಿ ನೇತೃತ್ವದಲ್ಲಿ ಜಿಲ್ಲಾ ವೈದ್ಯಾಧಿಕಾರಿ, ಜಿಲ್ಲಾ ಆಯುಷ್ ಅಧಿಕಾರಿ, ಭಾರತೀಯ ವೈದ್ಯರ ಒಕ್ಕೂಟದ ಒಬ್ಬ ಪ್ರತಿನಿಧಿ, ಒಬ್ಬರು ಮಹಿಳಾ ಪ್ರತಿನಿಧಿ ಇರುವ ಐದು ಜನರನ್ನು ಒಳಗೊಂಡ ದೂರು ಪ್ರಾಧಿಕಾರ ಸಮಿತಿ ರಚಿಸಲು ಉದ್ದೇಶಿಸಲಾಗಿದೆ.

*ದೂರು ಪ್ರಾಧಿಕಾರದ ಎದುರು ವಾದ ಮಂಡಿಸಲು ವಕೀಲಕರನ್ನು ನೇಮಕಗೊಳಿಸಲು ಆರೋಪಿತ ವೈದ್ಯರು ಅಥವಾ ವೈದ್ಯಕೀಯ ಸಂಸ್ಥೆಗೆ ಅವಕಾಶ ಕಲ್ಪಿಸಲಾಗಿದೆ. 

*ಸರಕಾರಿ ಯೋಜನೆಗಳಡಿಯಲ್ಲಿ ಒದಗಿಸಲಾಗುವ ಆರೋಗ್ಯ ಸೇವೆಗಳಿಗೆ ಚಿಕಿತ್ಸೆ ದರ ನಿಗದಿ ಮಾಡುವ ಅಧಿಕಾರ ಸರಕಾರ ತನ್ನ ಬಳಿ ಇರಿಸಿಕೊಳ್ಳಲಿದೆ.

*ತುರ್ತು ಚಿಕಿತ್ಸಾ ಸಮಯದಲ್ಲಿ ಮುಂಗಡ ಹಣಕ್ಕೆ ರೋಗಿಗಳ ಸಂಬಂಧಪಟ್ಟವರಿಂದ ಒತ್ತಾಯ ಮಾಡುವಂತಿಲ್ಲ. 

share
ವಾರ್ತಾಭಾರತಿ
ವಾರ್ತಾಭಾರತಿ
Next Story
X