ಗಾಂಜಾ ಸೇವನೆ: ನಾಲ್ವರ ಸೆರೆ
ಮಂಗಳೂರು, ನ.21: ನಗರದ ಉರ್ವ ಪೊಲೀಸ್ ಠಾಣಾ ವ್ಯಾಪ್ತಿಯ ಕುಂಟಿಕಾನ ಕೆಎಸ್ಸಾರ್ಟಿಸಿ ಬಸ್ ಡಿಪೋ ಬಳಿಯ ಸಾರ್ವಜನಿಕ ಸ್ಥಳದಲ್ಲಿ ಗಾಂಜಾ ಸೇವನೆ ಮಾಡುತ್ತಿದ್ದ ನಾಲ್ಕು ಮಂದಿ ಯುವಕರನ್ನು ಮಂಗಳೂರು ಕೇಂದ್ರ ಉಪವಿಭಾಗದ ರೌಡಿ ನಿಗ್ರಹ ದಳ ಹಾಗೂ ಉರ್ವ ಠಾಣೆಯ ಪೊಲೀಸರು ಮಂಗಳವಾರ ಕಾರ್ಯಾಚರಣೆ ನಡೆಸಿ ಬಂಧಿಸಿದ್ದಾರೆ.
ಕೊಂಚಾಡಿ ನಿವಾಸಿಗಳಾದ ಸಂಗಮ್ ಶೆಣೈ, ಅತೀಕ್ ಶೆಟ್ಟಿ, ಉರ್ವಸ್ಟೋರ್ ನಿವಾಸಿಗಳಾದ ಸಿದ್ದೇಶ್, ಸಾತ್ವಿಕ್ ಬಂಧಿತ ಆರೋಪಿಗಳು. ಇವರಿಂದ ಎರಡು ದ್ವಿಚಕ್ರ ವಾಹನ ವಶಪಡಿಸಿಕೊಳ್ಳಲಾಗಿದೆ.
ಖಚಿತ ಮಾಹಿತಿ ಮೇರೆಗೆ ವಶಕ್ಕೆ ಪಡೆದು ವೈದ್ಯಕೀಯ ಪರೀಕ್ಷೆಗೊಳಪಡಿಸಿದಾಗ ಗಾಂಜಾ ಸೇವನೆ ಮಾಡಿರುವುದು ದೃಢಪಟ್ಟಿದೆ. ಇವರ ವಿರುದ್ಧ ಎನ್‌ಡಿಪಿಎಸ್ ಕಾಯ್ದೆಯಡಿ ಪ್ರಕರಣ ದಾಖಲಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
Next Story





