ಮಂಗಳೂರು: ಫ್ಲೆಕ್ಸ್ ತೆರವು ಕಾರ್ಯಾಚರಣೆ
ಮಂಗಳೂರು, ನ.21: ನಗರದ ಸೌಂದರ್ಯಕ್ಕೆ ದಕ್ಕೆ ತರುವಂತಹ ಫ್ಲೆಕ್ಸ್ ಗಳನ್ನು ಮಂಗಳವಾರ ಮನಪಾ ಅಧಿಕಾರಿಗಳು ತೆರವುಗೊಳಿಸಿದರು. ಈ ಮಧ್ಯೆ ಉಡುಪಿಯಲ್ಲಿ ನಡೆಯಲಿರುವ ಧರ್ಮ ಸಂಸತ್ ಕಾರ್ಯಕ್ರಮದ ಫ್ಲೆಕ್ಸ್ ಗಳನ್ನು ತೆರವು ಮಾಡಿರುವುದಕ್ಕೆ ಕೆಲವು ಸಂಘಟನೆಗಳ ಕಾರ್ಯಕರ್ತರು ತೀವ್ರ ಆಕ್ಷೇಪ ವ್ಯಕ್ತಪಡಿಸಿದ್ದಾರೆ.
ಮಂಗಳವಾರ ಬೆಳಗ್ಗೆ ಫ್ಲೆಕ್ಸ್ ಗಳ ತೆರವು ಕಾರ್ಯಾಚರಣೆ ಆರಂಭಗೊಂಡಿತು. ನ.24ರಿಂದ 26ರವರೆಗೆ ನಡೆಯುವ ಧರ್ಮಸಂಸತ್ ಪ್ರಚಾರಾರ್ಥ ಅಳವಡಿಸಿದ್ದ ಫ್ಲೆಕ್ಸ್ ಗಳನ್ನು ಕೂಡಾ ತೆರವುಗೊಳಿಸಲಾಯಿತು. ಈ ಬಗ್ಗೆ ಮಾಹಿತಿ ಪಡೆದ ವಿಶ್ವ ಹಿಂದೂ ಪರಿಷತ್ ಜಿಲ್ಲಾಧ್ಯಕ್ಷ ಜಗದೀಶ ಶೇಣವ ಮತ್ತಿತರರು ತೆರವು ಕಾರ್ಯಾಚರಣೆಯನ್ನು ವಿರೋಧಿಸಿದರು. ವಿಷಯ ತಿಳಿದು ಸ್ಥಳಕ್ಕೆ ಆಗಮಿಸಿದ ಕದ್ರಿ ಇನ್‌ಸ್ಪೆಕ್ಟರ್ ಮಾರುತಿ ನಾಯಕ್ ಹಾಗೂ ಮನಪಾ ಅಧಿಕಾರಿಗಳು ಮಾತುಕತೆ ನಡೆಸಿದರು.
Next Story





