ಪ್ರತ್ಯೇಕ ಪ್ರಕರಣ: ಮೂವರು ಆತ್ಮಹತ್ಯೆ
ಬೆಂಗಳೂರು, ನ.22: ಪ್ರತ್ಯೇಕ ಮೂರು ಕಡೆಗಳಲ್ಲಿ ಮೂವರು ಮಂಗಳವಾರ ರಾತ್ರಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ.
ಹುಳಿಮಾವು: ಗೊಟ್ಟಿಗೆರೆಯ ಸಿಲ್ವರ್‌ಸ್ಪ್ರಿಂಗ್ ಅಪಾರ್ಟ್‌ಮೆಂಟ್‌ನಲ್ಲಿ ವಾಸಿಸುತ್ತಿದ್ದ ಅಬ್ದುಲ್ ಖಾದರ್(37) ಎಂಬವರು ಮಂಗಳವಾರ ರಾತ್ರಿ 11ರ ಸುಮಾರಿಗೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎನ್ನಲಾಗಿದೆ.
ಆಸ್ತಮಾ ರೋಗದಿಂದ ಬಳಲುತ್ತಿದ್ದ ಖಾದರ್, ಅವರ ಪತ್ನಿ ಎರಡು ತಿಂಗಳ ಹಿಂದೆ ಮನೆ ಬಿಟ್ಟು ಹೋಗಿದ್ದರು. ಇದರಿಂದ ನೊಂದ ಅವರು, ಅಪಾರ್ಟ್‌ಮೆಂಟ್‌ನ ಮನೆಯ ಸೀಲಿಂಗ್ ಫ್ಯಾನಿಗೆ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆಂದು ತಿಳಿದು ಬಂದಿದೆ.
ಈ ಸಂಬಂಧ ಹುಳಿಮಾವು ಪೊಲೀಸ್ ಠಾಣೆಯಲ್ಲಿ ಮೊಕದ್ದಮೆ ದಾಖಲಾಗಿದೆ.
ಸಾಲದ ಬಾಧೆ: ಯಲಹಂಕ ಉಪನಗರದ ಎಸ್ಕಾರ್ಟ್ ಲೇಔಟ್‌ನಲ್ಲಿ ಮನೆ ಕಟ್ಟಿ ಸಾಲ ಮಾಡಿಕೊಂಡಿದ್ದ ಯುವಕನೊಬ್ಬ ಸಾಲ ತೀರಿಸಲಾಗದೆ ನೊಂದು ಆತ್ಮಹತ್ಯೆ ಮಾಡಿಕೊಂಡಿರುವುದಾಗಿ ತಿಳಿದು ಬಂದಿದೆ.
ಎಸ್ಕಾರ್ಟ್ ಲೇಔಟ್‌ನ ಸಂತೋಷ್(34) ಎಂಬಾತ ಆತ್ಮಹತ್ಯೆ ಮಾಡಿಕೊಂಡಿರುವ ಯುವಕ ಎಂದು ಪೊಲೀಸರು ಗುರುತಿಸಿದ್ದಾರೆ.
ಈ ಸಂಬಂಧ ಯಲಹಂಕ ಉಪನಗರ ಪೊಲೀಸ್ ಠಾಣೆಯಲ್ಲಿ ಮೊಕದ್ದಮೆ ದಾಖಲಾಗಿದೆ.
ಯುವಕ ಆತ್ಮಹತ್ಯೆ : ಜೆಪಿ ನಗರದ 8ನೆ ಹಂತದ ಚೇತನ್(24) ಎಂಬಾತ ಯುವಕ ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಸಲೂನ್ ನಡೆಸುತ್ತಿದ್ದ ಚೇತನ್, ಮಾನಸಿಕ ಖಿನ್ನತೆಗೊಳಗಾಗಿ ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎಂದು ತಿಳಿದು ಬಂದಿದೆ.
ಈ ಸಂಭಂಧ ಕೋಣನಕುಂಟೆ ಪೊಲೀಸರು ಮೊಕದ್ದಮೆ ದಾಖಲಿಸಿದ್ದಾರೆ.







