Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ನ. 24ರಂದು ಧರ್ಮ ಸಂಸದ್ ಸಭೆಗೆ...

ನ. 24ರಂದು ಧರ್ಮ ಸಂಸದ್ ಸಭೆಗೆ ಉಡುಪಿಯಲ್ಲಿ ಚಾಲನೆ: ನರಸಿಂಹ

ಕೊಡಗಿನ ಸಾಧು-ಸಂತರು ಭಾಗಿ

ವಾರ್ತಾಭಾರತಿವಾರ್ತಾಭಾರತಿ22 Nov 2017 7:25 PM IST
share
ನ. 24ರಂದು ಧರ್ಮ ಸಂಸದ್ ಸಭೆಗೆ ಉಡುಪಿಯಲ್ಲಿ ಚಾಲನೆ: ನರಸಿಂಹ

ಮಡಿಕೇರಿ, ನ.22: ದೇಶದ ಸುಮಾರು 3 ಸಾವಿರ ಸಾಧು ಸಂತರು ಪಾಲ್ಗೊಳ್ಳುವ ಹಿಂದೂ ಸಮಾಜದ ಧರ್ಮಾಚಾರ್ಯರ ಮತ್ತು ಪೀಠಾಧಿಪತಿಗಳ ಮಹಾಸಭೆ “ಧರ್ಮ ಸಂಸದ್” ನವೆಂಬರ್ 24 ರಿಂದ 26ರವರೆಗೆ ಉಡುಪಿಯಲ್ಲಿ ನಡೆಯಲಿದ್ದು, ಈ ಸಭೆಯಲ್ಲಿ ಕೊಡಗಿನ ಹಿಂದೂ ಬಾಂಧವರು ಪಾಲ್ಗೊಳ್ಳಲಿದ್ದಾರೆ ಎಂದು ವಿಶ್ವ ಹಿಂದೂ ಪರಿಷತ್‍ನ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಡಿ.ನರಸಿಂಹ ತಿಳಿಸಿದ್ದಾರೆ.

ಸುದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಮೂರು ದಿನಗಳ ಕಾಲ ಉಡುಪಿಯ ರಾಜಾಂಗಣದಲ್ಲಿ ನಡೆಯುವ ಧರ್ಮ ಸಂಸದ್‍ನಲ್ಲಿ ಕೊಡಗಿನ  ಶಾಂತ ಮಲ್ಲಿಕಾರ್ಜುನ ಸ್ವಾಮೀಜಿ, ಬೋಧ ಸ್ವರೂಪಾನಂದ ಸ್ವಾಮೀಜಿ, ಸಿದ್ದು ಸ್ವಾಮಿ, ಮಲ್ಲೇಶ ಸ್ವಾಮಿ, ಮಹಾಂತ ಸ್ವಾಮಿ, ಸದಾಶಿವ ಸ್ವಾಮಿ, ವಿಶ್ವೇಶ್ವರ ಸ್ವಾಮಿ, ನಾರಾಯಣ ಸ್ವಾಮಿ, ಇಮ್ಮಡಿ ಶಿವಲಿಂಗ ಸ್ವಾಮಿ, ಸಿದ್ಧಗಂಗಾ ಸ್ವಾಮಿ, ಮಹಾಂತೇಶ್ ಸ್ವಾಮಿ, ರುದ್ರ ಸ್ವಾಮಿ ಹಾಗೂ ಆನಂದ ತೀರ್ಥ ಸ್ವಾಮಿಗಳು ಪಾಲ್ಗೊಳ್ಳಲಿದ್ದಾರೆ ಎಂದರು.

ಜಾತಿ, ಲಿಂಗ ತಾರತಮ್ಯವಿಲ್ಲದೆ, ಸಮಸ್ತ ಹಿಂದೂ ಬಂಧು ಭಗಿನಿಯರಿಗೆ ಸಮಾನ ಧಾರ್ಮಿಕ ಸ್ವಾತಂತ್ರ್ಯ ನೀಡುವುದು, ಗೋ ಸಂವರ್ಧನೆ, ಗೋ ರಕ್ಷಣೆಗೆ ಸಮಗ್ರ ಗೋ ಸಂರಕ್ಷಣಾ ಕಾನೂನು ಜಾರಿ, ಮತಾಂತರ ತಡೆಗೆ ಸಂತರ ಸಕ್ರಿಯತೆ, ಸಾಂಸ್ಕೃತಿಕ ಆಕ್ರಮಣಕ್ಕೆ ತಡೆ, ಹಿಂದೂ ಸಂಸ್ಕೃತಿ, ಸ್ವಾಭಿಮಾನ ಬೆಳೆಸುವ ಅಭಿಯಾನ, ಅಯೋಧ್ಯೆಯಲ್ಲಿ ಶ್ರೀ ರಾಮಜನ್ಮಭೂಮಿ ಮಂದಿರ ನಿರ್ಮಾಣದ ಕುರಿತ ಚಿಂತನೆ ನಡೆಸುವ ವಿಚಾರ ಮಂಥನ ಧರ್ಮ ಸಂಸದ್‍ನಲ್ಲಿ ನಡೆಯಲಿದೆ ಎಂದು ವಿವರಿಸಿದರು.

ಧರ್ಮ ಸಂಸದ್‍ನ ಸಮಾರೋಪದ ದಿನವಾದ ನ.26 ರಂದು ಬೆಳಗ್ಗೆ 10 ಗಂಟೆಗೆ ರಾಜಾಂಗಣದಲ್ಲಿ ಹಿಂದೂ ಸಮಾಜದ ಪ್ರಮುಖರ ಸಭೆ ನಡೆಯಲಿದ್ದು, ವಿಶ್ವ ಹಿಂದೂ ಪರಿಷತ್‍ನ ಅಂತಾರಾಷ್ಟ್ರೀಯ ಸಂಯುಕ್ತ ಪ್ರಧಾನ ಕಾರ್ಯದರ್ಶಿ ಸುರೇಂದ್ರ ಕುಮಾರ್ ಜೈನ್ ದಿಕ್ಸೂಚಿ ಭಾಷಣ ಮಾಡಲಿದ್ದಾರೆ. ನಂತರ ಮಧ್ಯಾಹ್ನ ಸಂತರ ನೇತೃತ್ವದಲ್ಲಿ ಶೋಭಾ ಯಾತ್ರೆ ಜೋಡುಕಟ್ಟೆ ಉಡುಪಿಯಿಂದ ನಡೆಯಲಿದೆ. ಸಂಜೆ ಎಂಜಿಎಂ ಮೈದಾನದಲ್ಲಿ ನಡೆಯುವ ಬೃಹತ್ ಹಿಂದೂ ಸಮಾಜೋತ್ಸವದಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿಗಳಾದ ಡಿ. ವೀರೇಂದ್ರ ಹೆಗಡೆ, ಧರ್ಮ ಸಂಸದ್ ಸಂದೇಶ ನೀಡಲಿದ್ದಾರೆ. ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಮುಖ್ಯ ಭಾಷಣ ಮಾಡಲಿದ್ದು, ಶ್ರೀವಿಶ್ವೇಶ್ವರ ತೀರ್ಥ ಸ್ವಾಮೀಜಿಗಳು ಅಧ್ಯಕ್ಷತೆ ವಹಿಸಲಿದ್ದಾರೆ ಎಂದು ಡಿ.ನರಸಿಂಹ ಮಾಹಿತಿ ನೀಡಿದರು.

ಸುದ್ದಿಗೋಷ್ಠಿಯಲ್ಲಿ ವಿಶ್ವ ಹಿಂದೂ ಪರಿಷತ್‍ನ ಜಿಲ್ಲಾಧ್ಯಕ್ಷ ಟಾಟಾ ಬೋಪಯ್ಯ, ಭಜರಂಗದಳದ ಜಿಲ್ಲಾ ಸಂಚಾಲಕ ಅಜಿತ್ ಕುಮಾರ್, ಸಹ ಸಂಚಾಲಕ ಚೇತನ್, ತಾಲೂಕು ಸಂಚಾಲಕ ಮನು ಹಾಗೂ ಹಿರಿಯ ಸ್ವಯಂ ಸೇವಕ ಕರವಂಡ ಕುಶಾಲಪ್ಪ ಉಪಸ್ಥಿತರಿದ್ದರು. 

share
ವಾರ್ತಾಭಾರತಿ
ವಾರ್ತಾಭಾರತಿ
Next Story
X