ಗುಂಡಿನ ಚಕಮಕಿ: ಯೋಧ ಹುತಾತ್ಮ

ಶ್ರೀನಗರ, ನ. 21: ಜಮ್ಮು ಕಾಶ್ಮೀರದ ಕುಪ್ವಾರಾ ಜಿಲ್ಲೆಯ ಕೇರನ್ ವಲಯದಲ್ಲಿ ಭದ್ರತಾ ಪಡೆಯ ಯೋಧರು ಹಾಗೂ ಉಗ್ರರ ನಡುವೆ ನಡೆದ ಗುಂಡಿನ ಕಾಳಗದಲ್ಲಿ ಓರ್ವ ಯೋಧ ಹುತಾತ್ಮರಾಗಿದ್ದಾರೆ.
ಗಡಿನಿಯಂತ್ರಣ ರೇಖೆಯ ಸಮೀಪದ ಕೇರನ್ ವಲಯದ ಸಮೀಪ ಚೋಕೆನ್ ಠಾಣೆಯಲ್ಲಿ ಗುಂಡಿನ ಕಾಳಗ ಬೆಳಗ್ಗೆ 7.30ಕ್ಕೆ ನಡೆದಿದೆ. ಈ ಗುಂಡಿನ ಕಾಳಗದಲ್ಲಿ ಓರ್ವ ಯೋಧ ಮೃತಪಟ್ಟಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
Next Story





