ಜೈಲು ಶಿಕ್ಷೆ ರದ್ದುಕೋರಿ ರವಿ ಬೆಳಗೆರೆ, ಅನಿಲ್‌ರಾಜ್ ಹೈಕೋರ್ಟ್‌ಗೆ ಅರ್ಜಿ ಸಲ್ಲಿಕೆ

ಬೆಂಗಳೂರು, ನ.22: ವಿಧಾನಸಭೆ ಹಕ್ಕು ಬಾಧ್ಯತೆ ಸಮಿತಿ ಒಂದು ವರ್ಷ ಜೈಲು ಶಿಕ್ಷೆ ಹಾಗೂ 10 ಸಾವಿರ ರೂ.ದಂಡ ವಿಧಿಸಿರುವುದನ್ನು ರದ್ದುಕೋರಿ ಪತ್ರಕರ್ತರಾದ ರವಿ ಬೆಳಗೆರೆ ಹಾಗೂ ಅನಿಲ್‌ರಾಜ್ ಅವರು ಹೈಕೋರ್ಟ್‌ಗೆ ಮತ್ತೆ ಅರ್ಜಿ ಸಲ್ಲಿಸಿದ್ದಾರೆ.
ಈ ಅರ್ಜಿ ಗುರುವಾರ ವಿಚಾರಣೆಗೆ ಬರುವ ಸಾಧ್ಯತೆ ಇದೆ. ರವಿ ಬೆಳಗೆರೆ ಮತ್ತು ಅನಿಲ್‌ರಾಜ್ ಅವರು ಸಲ್ಲಿಸಿದ್ದ ಮರುಪರಿಶೀಲನಾ ಅರ್ಜಿಗಳನ್ನು ಮಂಗಳವಾರ ವಿಧಾನಸಭೆ ತಿರಸ್ಕರಿಸಿತ್ತು. ಅವರಿಗೆ ಜೈಲು ಶಿಕ್ಷೆ ವಿಧಿಸಬೇಕು ಎಂಬ ಹಿಂದಿನ ನಿರ್ಣಯವನ್ನು ಸಮಿತಿ ಎತ್ತಿ ಹಿಡಿದಿತ್ತು. ಹೀಗಾಗಿ, ಪರ್ತಕರ್ತರಿಬ್ಬರೂ 1 ವರ್ಷ ಜೈಲು ಶಿಕ್ಷೆ ಹಾಗೂ 10 ಸಾವಿರ ರೂ.ದಂಡ ವಿಧಿಸಿರುವುದನ್ನು ರದ್ದುಕೋರಿ ಕೋರ್ಟ್ ಮೆಟ್ಟಿಲೇರಿದ್ದಾರೆ.
ಶಾಸಕರ ವಿರುದ್ಧ ಲೇಖನ ಪ್ರಕಟಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಧಾನಸಭೆ ಹಕ್ಕು ಬಾಧ್ಯತೆ ಸಮಿತಿಯು ಈ ಇಬ್ಬರು ಪತ್ರಕರ್ತರನ್ನು ಬಂಧಿಸಲು ವಿಧಾನಸಭಾ ಸಚಿವಾಲಯ ಗೃಹ ಇಲಾಖೆಗೆ ಪತ್ರ ಬರೆದಿದೆ.
Next Story





