ಸುಪ್ರೀಂ ಕೋರ್ಟ್, ಹೈಕೋರ್ಟ್ ನ್ಯಾಯಾಧೀಶರ ವೇತನ ಹೆಚ್ಚಳ !

ಹೊಸದಿಲ್ಲಿ, ನ. 22: ಸುಪ್ರೀಂ ಕೋರ್ಟ್ ನ್ಯಾಯಾಧೀಶರು ಹಾಗೂ 24 ಉಚ್ಚ ನ್ಯಾಯಾಲಯಗಳ ನ್ಯಾಯಾಧೀಶರ ವೇತನ ಏರಿಕೆಯಾಗಲಿದೆ. ಇದಕ್ಕೆ ಸಂಬಂಧಿಸಿದ ಪ್ರಸ್ತಾಪಕ್ಕೆ ಕೇಂದ್ರ ಸಂಪುಟ ಬುಧವಾರ ಅನುಮೋದನೆ ನೀಡಿದೆ.
ವೇತನ ಏರಿಕೆ ಅನುಷ್ಠಾನಕ್ಕೆ ಸಂಸತ್ತಿನಲ್ಲಿ ಮಸೂದೆಯೊಂದನ್ನು ಮಂಡಿಸಲಾಗುವುದು ಎಂದು ಕಾನೂನು ಸಚಿವ ರವಿಶಂಕರ್ ಪ್ರಸಾದ್ ಹೇಳಿದ್ದಾರೆ.
ಸುಪ್ರೀಂ ಕೋರ್ಟ್ ನ್ಯಾಯಾಧೀಶರು ಹಾಗೂ ಉಚ್ಚ ನ್ಯಾಯಾಲಯದ ನ್ಯಾಯಾಧೀಶರ ವೇತನ ಏರಿಕೆ ಮಾಡುವಂತೆ ಕೋರಿ 2016ರಲ್ಲಿ ಆಗಿನ ಮುಖ್ಯ ನ್ಯಾಯಮೂರ್ತಿಯಾಗಿದ್ದ ಟಿ.ಎಸ್. ಠಾಕೂರ್ ಸರಕಾರಕ್ಕೆ ಪತ್ರ ಬರೆದಿದ್ದರು.
Next Story





