ಪೆಟ್ರೋಲ್ ಬಂಕ್‌ಗಳಲ್ಲಿ ಸಾರ್ವಜನಿಕ ಶೌಚಾಲಯ ನಿರ್ಮಿಸಲು ಆದೇಶ
ಉಡುಪಿ, ನ.22: ಭಾರತ ಸರಕಾರದ ನಗರಾಭಿವೃದ್ಧಿ ಸಚಿವಾಲಯದ ಈ ವರ್ಷದ ಫೆ.2ರ ಪತ್ರ ಹಾಗೂ ರಸ್ತೆ ಸಾರಿಗೆ ಮತ್ತು ಹೆದ್ದಾರಿ ಪ್ರಾಧಿಕಾರ ಸಚಿವಾಲಯದ 2003ರ ಜು.23ರ ಅಧಿಸೂಚನೆಯಂತೆ ಹೆದ್ದಾರಿ ವ್ಯಾಪ್ತಿ ಯಲ್ಲಿ ಬರುವ ಎಲ್ಲಾ ಪೆಟ್ರೋಲ್ ಬಂಕ್‌ಗಳಲ್ಲಿ ಸಾರ್ವಜನಿಕ ಶೌಚಾಲಯ ಗಳನ್ನು ನಿರ್ಮಿಸುವಂತೆ ಹಾಗೂ ವಾಹನಕ್ಕೆ ಇಂಧನ ತುಂಬಿಸಲು ಬರುವ ಸಾರ್ವಜನಿಕರ ಉಪಯೋಗಕ್ಕೆ ನೀಡುವಂತೆ ನಿರ್ದೇಶನ ನೀಡಲಾಗಿದೆ. ಸಾರ್ವಜನಿಕರು ಈ ಸೌಲಭ್ಯವನ್ನು ಬಳಸಿಕೊಳ್ಳುವಂತೆ ಉಡುಪಿ ನಗರಸಭಾ ಪೌರಾಯುಕ್ತರ ಪ್ರಕಟನೆ ತಿಳಿಸಿದೆ.
Next Story





