Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ನ.25 ರಿಂದ ಸಾವಯುವ, ಸಿರಿಧಾನ್ಯ ವಾಣಿಜ್ಯ...

ನ.25 ರಿಂದ ಸಾವಯುವ, ಸಿರಿಧಾನ್ಯ ವಾಣಿಜ್ಯ ಮೇಳ: ಸಚಿವ ಕೃಷ್ಣಬೈರೇಗೌಡ

ವಾರ್ತಾಭಾರತಿವಾರ್ತಾಭಾರತಿ22 Nov 2017 11:21 PM IST
share

ಬೆಳಗಾವಿ, ನ.22: ಬೆಳಗಾವಿಯ ಶಿವಬಸವ ನಗರದ ಎಸ್.ಜಿ.ಬಾಳೇಕುಂದ್ರಿ ತಾಂತ್ರಿಕ ವಿಶ್ವವಿದ್ಯಾಲಯದ ಮೈದಾನದಲ್ಲಿ ನ.25 ಮತ್ತು 26ರಂದು “ಸಾವಯುವ ಮತ್ತು ಸಿರಿಧಾನ್ಯ ವಾಣಿಜ್ಯ ಮೇಳ”ವನ್ನು ಆಯೋಜಿಸಲಾಗಿದೆ ಎಂದು ಕೃಷಿ ಸಚಿವ ಕೃಷ್ಣ ಬೈರೇಗೌಡ ಹೇಳಿದ್ದಾರೆ.

ಬುಧವಾರ ಸುವರ್ಣ ವಿಧಾನಸೌಧದಲ್ಲಿ ಪತ್ರಿಕಾಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಅವರು, ಮೇಳದಲ್ಲಿ 100ಕ್ಕೂ ಹೆಚ್ಚು ಮಳಿಗೆಗಳನ್ನು ಸ್ಥಾಪಿಸಲಾಗುತ್ತಿದೆ. ನ.24ರ ಮುಂಜಾನೆ ಸಿರಿಧಾನ್ಯ ನಡಿಗೆಯನ್ನು ಆಯೋಜಿಸಲಾಗಿದೆ. ಮೇಳದ ಸ್ಥಳದಲ್ಲಿ ಶಾಲಾ ಮಕ್ಕಳಿಗೆ ಚಿತ್ರಕಲೆ ಹಾಗೂ ಮಹಿಳೆಯರಿಗೆ ಸಾವಯುವ- ಸಿರಿಧಾನ್ಯ ಆಹಾರ ತಯಾರಿಕೆ ಸ್ಪರ್ಧೆಗಳನ್ನು ಏರ್ಪಡಿಸಲಾಗುತ್ತಿದೆ ಎಂದರು.

ಮೇಳದ ಸ್ಥಳದಲ್ಲಿಯೇ ಆಹಾರ ಪದಾರ್ಥಗಳನ್ನು ತಯಾರಿಸಿ, ಗ್ರಾಹಕರಿಗೆ ರುಚಿ ಸವಿಯಲು ಅನುವು ಮಾಡಿ ಕೊಡುವುದರ ಜೊತೆಗೆ ಸಾವಯುವ ಮತ್ತು ಸಿರಿಧಾನ್ಯಗಳ ಮಹತ್ವದ ಕುರಿತು ನುರಿತ ಆಹಾರ ತಜ್ಞರ, ವೈದ್ಯರು ಹಾಗೂ ಅನುಭವಿಕ ರೈತರಿಂದ ಉಪನ್ಯಾಸ ಮತ್ತು ಪ್ರಾತ್ಯಕ್ಷಿಕೆಗಳ ಮುಖಾಂತರ ಅರಿವು ಮೂಡಿಸಲಾಗುವುದು ಹಾಗೂ ನವೆಂಬರ್ 25ರ ಸಂಜೆ ಮೇಳದಲ್ಲಿ ಸಾಂಸ್ಕøತಿಕ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿದೆ ಎಂದು ಹೇಳಿದರು.

ಪೂರ್ವಭಾವಿಯಾಗಿ ರೈತರಲ್ಲಿ ಅರಿವು: 2018ನೆ ಸಾಲಿನ ಜನವರಿ ತಿಂಗಳಲ್ಲಿ 19, 20 ಮತ್ತು 21 ರಂದು ಸಾವಯುವ ಮತ್ತು ಸಿರಿಧಾನ್ಯಗಳ ಅಂತಾರಾಷ್ಟ್ರೀಯ ವಾಣಿಜ್ಯ ಮೇಳ ಬೆಂಗಳೂರಿನಲ್ಲಿ ಹಮ್ಮಿಕೊಳ್ಳಲಾಗಿದ್ದು, ಇದಕ್ಕೆ ಪೂರ್ವಭಾವಿಯಾಗಿ ರೈತರಲ್ಲಿ, ಗ್ರಾಹಕರಲ್ಲಿ ಹಾಗೂ ವರ್ತಕರಲ್ಲಿ ಅರಿವು ಮೂಡಿಸಲು ಕೃಷಿ ಇಲಾಖೆ ಹಾಗೂ ಜಿಲ್ಲಾ ಸಾವಯುವ ಸಹಕಾರ ಸಂಘಗಳ ಒಕ್ಕೂಟಗಳ ಸಂಯುಕ್ತಾಶ್ರಯದಲ್ಲಿ 10 ಜಿಲ್ಲಾ ಕೇಂದ್ರಗಳಲ್ಲಿ ಸಾವಯುವ ಮತ್ತು ಸಿರಿಧಾನ್ಯ ವಾಣಿಜ್ಯ ಮೇಳಗಳನ್ನು ಆಯೋಜಿಸಲಾಗುತ್ತಿದೆ ಎಂದು ಮಾಹಿತಿ ನೀಡಿದರು.

 ಕಾರ್ಯಕ್ರಮಕ್ಕೆ ವಾಣಿಜ್ಯ ಸಂಘಗಳು, ಚಿಲ್ಲರೆ ಮಾರಾಟ ಸರಪಣಿ ಸಂಸ್ಥೆಗಳು, ಜಿಲ್ಲಾ ಮಟ್ಟದ ಚೇಂಬರ್ ಆಫ್ ಕಾಮರ್ಸ್, ಚಿಲ್ಲರೆ ಮಾರಾಟಗಾರರ ಸಂಘಗಳು, ಆಹಾರ ಸಂಬಂಧಿತ ಸಂಘಗಳು, ಆಹಾರ ಸಂಸ್ಕರಣಾ ಉದ್ದಿಮೆದಾರರು, ಹೋಟೆಲ್ ಉದ್ದಿಮೆದಾರರು, ನವೋದ್ಯಮಿಗಳನ್ನು ಆಹ್ವಾನಿಸಲಾಗಿದೆ ಎಂದರು.

ಈ ವಾಣಿಜ್ಯ ಮೇಳದ ಮುಖಾಂತರ ಮಾರುಕಟ್ಟೆಯಲ್ಲಿ ದೊರೆಯುವ ಆಹಾರ ಉತ್ಪನಗಳಿಗೆ ಹೋಲಿಸಲಾಗಿ, ಸಾವಯುವ ಕೃಷಿಯಲ್ಲಿ ಬೆಳೆದ ಉತ್ಪನಗಳು ಹಾಗೂ ಸಿರಿಧಾನ್ಯಗಳು ಯಾವ ರೀತಿಯಲ್ಲಿ ಉತ್ತಮ ಎನ್ನುವುದರ ಕುರಿತು ಗ್ರಾಹಕರಲ್ಲಿ ಅರಿವು ಮೂಡಿಸಲಾಗುವುದು. ಜೊತೆಗೆ ಸಾವಯುವ ಮತ್ತು ಸಿರಿಧಾನ್ಯ ಉತ್ಪಾದಿಸುವ ರೈತರಿಗೆ ಉದ್ದಿಮೆದಾರರೊಂದಿಗೆ ಸಂಪರ್ಕ ಕೊಂಡಿಯನ್ನು ನಿರ್ಮಾಣ ಮಾಡಲು ಪೂರಕ ವಾತಾವರಣವನ್ನು ನಿರ್ಮಿಸಲಾಗುವುದು ಎಂದು ವಿವರಿಸಿದರು.

ಮೇಳದ ಮುಖಾಂತರ ಆಹಾರ ಉದ್ದಿಮೆ ಸಂಸ್ಥೆಗಳು ಹಾಗೂ ಫುಡ್ ಪಾರ್ಕ್‍ಗಳು ಸಾವಯುವ ಮತ್ತು ಸಿರಿಧಾನ್ಯಗಳ ಉತ್ತೇಜನ ಹಾಗೂ ಸಹಭಾಗಿತ್ವದಲ್ಲಿ ನಿರಂತರವಾಗಿ ಇರಿಸುವ ನಿಟ್ಟಿನಲ್ಲಿ  ಪ್ರಯತ್ನಗಳನ್ನು ಮುಂದುವರಿಸಲಾಗುವುದು. ಮೇಳದಲ್ಲಿ ಸಿರಿಧಾನ್ಯಗಳ ಸಂಸ್ಕರಣಾ ಘಟಕಗಳ ಪ್ರದರ್ಶನಕ್ಕೆ ವ್ಯವಸ್ಥೆ ಮಾಡಲಾಗಿದ್ದು, ಸಿರಿಧಾನ್ಯ ಬೆಳೆಯುವ ರೈತರು ಇದರಿಂದ ಅಧಿಕ ಮಾಹಿತಿ ಪಡೆಯಲು ಮೇಳವು ಸಹಕಾರಿಯಾಗಲಿದೆ ಎಂದು ತಿಳಿಸಿದರು.

ಮೇಳದಲ್ಲಿ ಸಾವಯುವ ಹಾಗೂ ಸಿರಿಧಾನ್ಯಗಳ ಉತ್ಪನ್ನಗಳ ಉತ್ತೇಜನದಲ್ಲಿ ನಿರತರಾಗಿರುವ ಸಂಘ-ಸಂಸ್ಥೆಗಳು, ಖಾಸಗಿ ಕಂಪೆನಿಗಳು, ವಿತರಕರುಗಳನ್ನು ಆಹ್ವಾನಿಸಿ ಉತ್ಪನ್ನಗಳ ಪ್ರದರ್ಶನಕ್ಕಾಗಿ ವ್ಯವಸ್ಥೆ ಮಾಡಿಕೊಡಲಾಗಿದೆ ಎಂದು ಕೃಷ್ಣ ಬೈರೇಗೌಡ ಹೇಳಿದರು.

ಪತ್ರಿಕಾಗೋಷ್ಠಿಯಲ್ಲಿ ಕೃಷಿ ಇಲಾಖೆಯ ಕಾರ್ಯದರ್ಶಿ ಎಂ.ಮಹೇಶ್ವರ ರಾವ್ ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X