Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಹೆಬ್ಬಳಿ ಜಿಪಂ ಸದಸ್ಯನ ಕೊಲೆ ಪ್ರಕರಣಕ್ಕೆ...

ಹೆಬ್ಬಳಿ ಜಿಪಂ ಸದಸ್ಯನ ಕೊಲೆ ಪ್ರಕರಣಕ್ಕೆ ಅರ್ಧ ದಿನದ ಕಲಾಪ ಬಲಿ

ವಾರ್ತಾಭಾರತಿವಾರ್ತಾಭಾರತಿ24 Nov 2017 11:16 PM IST
share
ಹೆಬ್ಬಳಿ ಜಿಪಂ ಸದಸ್ಯನ ಕೊಲೆ ಪ್ರಕರಣಕ್ಕೆ ಅರ್ಧ ದಿನದ ಕಲಾಪ ಬಲಿ

ಬೆಳಗಾವಿ, ನ. 24: ಧಾರವಾಡ ಜಿಲ್ಲೆಯ ಹೆಬ್ಬಳಿ ಜಿಲ್ಲಾ ಪಂಚಾಯತ್ ಸದಸ್ಯ ಯೋಗೇಶ್‍ಗೌಡ ಕೊಲೆ ಪ್ರಕರಣ ಉಭಯ ಸದನಗಳಲ್ಲಿ ಪ್ರತಿಧ್ವನಿಸಿತಲ್ಲದೆ, ಆಡಳಿತ ಮತ್ತು ವಿಪಕ್ಷಗಳ ಮಧ್ಯೆ ತೀವ್ರವಾಗ್ಯುದ್ಧ, ಗದ್ದಲ-ಕೋಲಾಹಲಕ್ಕೆ ಎಡೆಮಾಡಿಕೊಟ್ಟಿತು. ಅಲ್ಲದೆ, ಕೊನೆಯ ದಿನದ ಕಲಾಪವೂ ಈ ಗದ್ಧಲಕ್ಕೆ ಬಲಿಯಾಯಿತು.

ಶುಕ್ರವಾರ ನಿಗದಿತ ಸಮಯಕ್ಕಿಂತ 25 ನಿಮಿಷ ತಡವಾಗಿ ಕಲಾಪ ಆರಂಭಗೊಳ್ಳುತ್ತಿದ್ದಂತೆ ವಿಪಕ್ಷ ನಾಯಕ ಜಗದೀಶ್ ಶೆಟ್ಟರ್ ವಿಷಯ ಪ್ರಸ್ತಾಪಿಸಿ, ಬಿಜೆಪಿ ಮುಖಂಡ ಯೋಗೇಶ್‍ಗೌಡ ಕೊಲೆ ಪ್ರಕರಣಕ್ಕೆ ಸಂಬಂಧ ಸುದ್ದಿಮಾಧ್ಯಮಗಳಲ್ಲಿ ವರದಿಯಾಗಿರುವ ವಿಷಯ ಗಂಭೀರವಾಗಿದ್ದು, ಈ ಪ್ರಕರಣದಲ್ಲಿ ಸಚಿವರೊಬ್ಬರ ಮೇಲೆ ಆರೋಪ ಕೇಳಿಬಂದಿದೆ ಎಂದು ಗಂಭೀರ ಆರೋಪ ಮಾಡಿದರು.

ಪೊಲೀಸ್ ಅಧಿಕಾರಿಯೊಬ್ಬರು ಮಧ್ಯಸ್ಥಿಕೆ ವಹಿಸಿ ಪ್ರಕರಣ ರಾಜೀ ಮಾಡುವ ಯತ್ನ ನಡೆದಿದೆ ಎಂಬ ಆಡಿಯೋ- ವೀಡಿಯೋದಲ್ಲಿದ್ದು, ಆದುದರಿಂದ ಈ ವಿಷಯ ಚರ್ಚೆಗೆ ಮೊದಲು ಅವಕಾಶ ಕಲ್ಪಿಸಬೇಕು ಎಂದು ಪಟ್ಟು ಹಿಡಿದರು. ಈ ಹಂತದಲ್ಲಿ ಪ್ರತಿಕ್ರಯಿಸಿದ ಸ್ಪೀಕರ್ ಕೆ.ಬಿ.ಕೋಳಿವಾಡ, ಕಾರ್ಯಕಲಾಪ ಪಟ್ಟಿಯಂತೆ ಮೊದಲು ಪ್ರಶ್ನೋತ್ತರ ಕಲಾಪ ನಡೆಯಲಿ. ಅನಂತರ ಈಗಾಗಲೇ ನೀವು ಪ್ರಸ್ತಾಪಿಸಿದ ವಿಚಾರವನ್ನು ನಿಯಮ 69ರಡಿಯಲ್ಲಿ ಚರ್ಚೆಗೆ ಅವಕಾಶ ಕಲ್ಪಿಸಲಾಗಿದೆ. ಪ್ರಶ್ನೋತ್ತರ ಕಲಾಪಕ್ಕೆ ಸಹಕರಿಸಿ ಎಂದು ಕೋರಿದರು.

ಸ್ಪೀಕರ್ ಕೋಳಿವಾಡರ ಮನವಿಗೆ ಕಿವಿಗೊಡದ ಬಿಜೆಪಿ ಸದಸ್ಯರು, ರಾಜ್ಯ ಸರಕಾರ ಎಲ್ಲ ಪ್ರಕರಣಗಳನ್ನು ಮುಚ್ಚಿ ಹಾಕುವ ಪ್ರಯತ್ನ ಮಾಡುತ್ತಿದೆ. ಡಿವೈಎಸ್ಪಿ ಎಂ.ಕೆ.ಗಣಪತಿ ಆತ್ಮಹತ್ಯೆ ಪ್ರಕರಣದಲ್ಲಿ ಬೆಂಗಳೂರು ನಗರಾಭಿವೃದ್ಧಿ ಸಚಿವ ಕೆ.ಜೆ.ಜಾರ್ಜ್ ಅವರನ್ನು ರಕ್ಷಣೆ ಮಾಡುತ್ತಿದೆ ಎಂದು ದೂರಿದರು. ಸಂಪುಟದಲ್ಲಿರುವ ಹಲವು ಸಚಿವರ ಮೇಲೆ ಗಂಭೀರ ಆರೋಪಗಳಿವೆ ಎಂದು ಪ್ರಸ್ತಾಪಿಸುತ್ತಿದ್ದಾಗ, ಕಾನೂನು ಸಚಿವ ಟಿ.ಬಿ.ಜಯಚಂದ್ರ, ಈ ರೀತಿ ನಿಯಮಾವಳಿ ಬಿಟ್ಟು ಚರ್ಚೆ ಮಾಡಲು ಸಾಧ್ಯವಿಲ್ಲ. ಈ ಬಗ್ಗೆ ಸ್ಪೀಕರ್ ಈಗಾಗಲೇ ಸ್ಪಷ್ಟಪಡಿಸಿದ್ದಾರೆಂದು ಹೇಳಿದರು.

ಈ ಹಂತದಲ್ಲಿ ಎದ್ದುನಿಂತ ಜಗದೀಶ್ ಶೆಟ್ಟರ್, ಪ್ರಶ್ನೋತ್ತರಿಕ್ಕಿಂತ ಅತ್ಯಂತ ಮಹತ್ವದ ವಿಚಾರ ಇದಾಗಿ. ಆದುದರಿಂದ ಕೂಡಲೇ ಚರ್ಚೆಗೆ ಅವಕಾಶ ನೀಡಬೇಕೆಂದು ಒತ್ತಾಯಿಸಿದಾಗ ಬಿಜೆಪಿ ಸದಸ್ಯರು ಬೆಂಬಲ ವ್ಯಕ್ತಪಡಿಸಿ, ಗಣಿ ಮತ್ತು ಭೂವಿಜ್ಞಾನ ಸಚಿವ ವಿನಯ್ ಕುಲಕರ್ಣಿ ಕೂಡಲೇ ರಾಜೀನಾಮೆ ನೀಡಬೇಕು ಎಂದು ಆಗ್ರಹಿಸಿದರು.

ಇದರಿಂದ ತೀವ್ರ ಆಕ್ರೋಶಿತರಾದ ಕಂದಾಯ ಸಚಿವ ಕಾಗೋಡು ತಿಮ್ಮಪ್ಪ ಏರಿದ ಧ್ವನಿಯಲ್ಲಿ, ಕಾರ್ಯ ಕಲಾಪ ಪಟ್ಟಿಯಂತೆ ಸದನ ನಡೆಯಬೇಕು. ಯಾವ ನಿಯಮದಡಿ ಈ ವಿಷಯ ಚರ್ಚೆಯಾಗಬೇಕೆಂದು ಬಿಜೆಪಿಯನ್ನು ತರಾಟೆಗೆ ತೆಗೆದುಕೊಂಡರು.

ವಿಷಯ ಚರ್ಚೆ ಅವಕಾಶ ದೊರೆಯದಿರುವುದನ್ನು ಗಮನಿಸಿದ ಬಿಜೆಪಿ ಸದಸ್ಯರು ಸ್ಪೀಕರ್ ಪೀಠದ ಮುಂದಿರುವ ಬಾವಿಗಿಳಿದು ಸರಕಾರದ ವಿರುದ್ಧ ಧಿಕ್ಕಾರದ ಘೋಷಣೆ ಕೂಗುತ್ತಾ ಧರಣಿ ಸತ್ಯಾಗ್ರಹ ಆರಂಭಿಸಿದರು. ಇದರಿಂದ ಸದನದಲ್ಲಿ ಗದ್ದಲ, ಗೊಂದಲದ ವಾತಾವರಣ ನಿರ್ಮಾಣವಾದ ಹಿನ್ನೆಲೆಯಲ್ಲಿ ಸ್ಪೀಕರ್ ಕೋಳಿವಾಡ ಅವರು ಎರಡೂ ಬಾರೀ ಕಲಾಪವನ್ನು ಕೆಲ ಕಾಲ ಮುಂದೂಡಿದರು. 

ಧಾರವಾಡ ಜಿಲ್ಲಾ ಹೆಬ್ಬಳಿ ಜಿ.ಪಂ.ಸದಸ್ಯ ಯೋಗೇಶ್ ಗೌಡ ಹತ್ಯೆ ಪ್ರಕರಣವನ್ನು ಮುಚ್ಚಿಹಾಕುವ ಪ್ರಶ್ನೆಗೆ ಇಲ್ಲ. ಜಮೀನು ವೈಷಮ್ಯದ ಹಿನ್ನೆಲೆಯಲ್ಲಿ ಹತ್ಯೆ ನಡೆದಿರುವುದು ತನಿಖೆಯಿಂದ ಗೊತ್ತಾಗಿದೆ. ಈಗಾಗಲೇ ಹತ್ಯೆ ಪ್ರಕರಣ ಸಂಬಂಧ ಆರೋಪಿ ಬಸವರಾಜ ಮುತ್ತಗಿ ಸೇರಿದಂತೆ ಹತ್ತು ಮಂದಿಯನ್ನು ಬಂಧಿಸಲಾಗಿದೆ. ಹತ್ಯೆಗೀಡಾದ ಯೋಗೇಶ್ ಗೌಡ ಮೇಲೆ ಕೊಲೆ, ಕೊಲೆಯತ್ನ ಸೇರಿದಂತೆ 25ಕ್ಕೂ ಹೆಚ್ಚು ಪ್ರಕರಣಗಳಿದ್ದು, ರೌಡಿ ಪಟ್ಟಿಯಲ್ಲಿಯೂ ಇದ್ದಾನೆ.
-ರಾಮಲಿಂಗಾರೆಡ್ಡಿ, ಗೃಹ ಸಚಿವ

share
ವಾರ್ತಾಭಾರತಿ
ವಾರ್ತಾಭಾರತಿ
Next Story
X