ದತ್ತ ಜಯಂತಿ: ಪ್ರವಾಸಿ ವಾಹನ ನಿಷೇಧ
ಚಿಕ್ಕಮಗಳೂರು, ನ.24: ದತ್ತಾತ್ರೇಯ ಬಾಬಾಬುಡಾನ್‌ಸ್ವಾಮಿ ದರ್ಗಾ, ಐ.ಡಿ.ಪೀಠದಲ್ಲಿ ನಡೆಯುವ ದತ್ತ ಜಯಂತಿ ಕಾರ್ಯಕ್ರಮದ ಆಚರಣೆ ಹಿನ್ನೆಲೆಯಲ್ಲಿ ರಾಜ್ಯದ ವಿವಿಧ ಜಿಲ್ಲೆಗಳಿಂದ ಹೆಚ್ಚಿನ ಸಂಖ್ಯೆಯಲ್ಲಿ ಸಂಘಪರಿವಾರದ ಕಾರ್ಯಕರ್ತರು, ಮಠಾಧೀಶರು ಹಾಗೂ ದತ್ತಮಾಲಾಧಾರಿಗಳು ಹೆಚ್ಚಿನ ಸಂಖ್ಯೆಯಲ್ಲಿ ಸೇರುವ ನಿರೀಕ್ಷೆಯಿದೆ.
ಈ ಸಂದರ್ಭದಲ್ಲಿ ಪ್ರವಾಸಿ ತಾಣಗಳಾದ ಮುಳಯ್ಯನಗಿರಿ, ಸೀತಾಳಯ್ಯನಗಿರಿ ಮತ್ತು ಬಾಬಾ ಬುಡನ್‌ಗಿರಿ ಬೆಟ್ಟಗಳಿಗೆ ಪ್ರವಾಸಿಗರು ಆಗಮಿಸಿದರೆ ವಾಹನ ದಟ್ಟಣೆ ಹೆಚ್ಚಾಗುವುದರಿಂದ ಸುಗಮ ಸಂಚಾರಕ್ಕೆ ತೊಂದರೆಯಾಗುವ ದೃಷ್ಟಿಯಿಂದ ಡಿ.1ರಿಂದ ಡಿ.4ರವರೆಗೆ ಈ ಮಾರ್ಗಗಳಲ್ಲಿ ಸಂಚರಿಸುವ ಎಲ್ಲಾ ರೀತಿಯ ಪ್ರವಾಸಿ ವಾಹನಗಳ ಸಂಚಾರವನ್ನು ಹಾಗೂ ಯಾವುದೇ ಪ್ರವಾಸಿಗರು, ಯಾತ್ರಿಗಳು ಭೆೇಟಿ ನೀಡುವುದನ್ನು ತಾತ್ಕಾಲಿಕವಾಗಿ ನಿಷೇಧಿಸಲಾಗಿದೆ ಎಂದು ಡಿಸಿ ಎಂ.ಕೆ. ಶ್ರೀರಂಗಯ್ಯ ಪ್ರಕಟನೆಯಲ್ಲಿ ತಿಳಿಸಿದ್ದಾರೆ.
Next Story





