ಬೆಂಗಳೂರು: ಪೇಜಾವರ ಶ್ರೀ ವಿರುದ್ಧ ದೂರು ದಾಖಲು

ಬೆಂಗಳೂರು, ನ.26: ಶನಿವಾರ ಉಡುಪಿಯಲ್ಲಿ ನಡೆದ ಧರ್ಮಸಂಸದ್ ನಲ್ಲಿ ಸಂವಿಧಾನವನ್ನು ಅಂಬೇಡ್ಕರ್ ಒಬ್ಬರೇ ರಚಿಸಿದ್ದಲ್ಲ ಎನ್ನುವ ಹೇಳಿಕೆ ನೀಡಿದ್ದಾರೆ ಎಂದು ಆರೋಪಿಸಿ ಉಡುಪಿ ಮಠದ ಪೇಜಾವರಶ್ರೀ ವಿರುದ್ಧ ನಗರದ ಜ್ಞಾನಭಾರತಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.
ಸಂವಿಧಾನವನ್ನು ಅಂಬೇಡ್ಕರ್ ಒಬ್ಬರೇ ಮಾಡಿದ್ದಲ್ಲ, ಸಂವಿಧಾನದಲ್ಲಿ ಅಲ್ಪಸಂಖ್ಯಾತರಿಗೆ ಒಂದು ಕಾನೂನು, ಬಹುಸಂಖ್ಯಾತರಿಗೆ ಒಂದು ಕಾನೂನಿದೆ ಅದ್ದರಿಂದ ಸಂವಿಧಾನವನ್ನು ತಿದ್ದುಪಡಿ ಮಾಡಿದರೆ ತಪ್ಪೇನಿಲ್ಲ ಎಂದು ಪೇಜಾವರ ಶ್ರೀ ಹೇಳಿಕೆ ನೀಡಿದ್ದರು ಎನ್ನಲಾಗಿದೆ.
ಈ ಹೇಳಿಕೆಯನ್ನು ಖಂಡಿಸಿ ಬೆಂಗಳೂರು ಸ್ನಾತಕೋತ್ತರ ವಿವಿ ವಿದ್ಯಾರ್ಥಿಗಳು, ಜ್ಞಾನಭಾರತಿ ಪೊಲೀಸ್ ಠಾಣೆಯಲ್ಲಿ ದೂರು ನೀಡಿ ಪೇಜಾವರ ಶ್ರೀಗಳ ವಿರುದ್ಧ ಕಠಿಣ ಕಾನೂನು ಕ್ರಮ ಕೈಗೊಳ್ಳಬೇಕೆಂದು ಒತ್ತಾಯಿಸಿ ಪ್ರತಿಭಟನೆ ನಡೆಸಿದರು.
Next Story





