ಟೆಸ್ಟ್‌ನಲ್ಲಿ ಕೊಹ್ಲಿ 19ನೇ ಶತಕ

ನಾಗ್ಪುರ, ನ.26: ಭಾರತದ ಕ್ರಿಕೆಟ್ ತಂಡದ ನಾಯಕ ವಿರಾಟ್ ಕೊಹ್ಲಿ ಅವರು ಶ್ರೀಲಂಕಾ ವಿರುದ್ಧದ ಎರಡನೇ ಕ್ರಿಕೆಟ್ ಟೆಸ್ಟ್‌ನಲ್ಲಿ ಶತಕ ದಾಖಲಿಸಿದ್ದಾರೆ.
ಟೆಸ್ಟ್‌ನ ಮೂರನೆ ದಿನವಾಗಿರುವ ರವಿವಾರ ಕೊಹ್ಲಿ ಅವರು ಮೊದಲ ಇನಿಂಗ್ಸ್‌ನಲ್ಲಿ 130ಎಸೆತಗಳಲ್ಲಿ 10 ಬೌಂಡರಿಗಳ ಸಹಾಯದಿಂದ ಶತಕ ತಲುಪಿದರು. ಇದು ಅವರ 19ನೇ ಟೆಸ್ಟ್ ಶತಕವಾಗಿದೆ. 62ನೇ ಟೆಸ್ಟ್‌ನಲ್ಲಿ ಶತಕ ದಾಖಲಿಸಿರುವ ಕೊಹ್ಲಿ ಶ್ರೀಲಂಕಾ ವಿರುದ್ಧದ ಮೊದಲ ಟೆಸ್ಟ್ ಪಂದ್ಯದಲ್ಲೂ ಶತಕ ಬಾರಿಸಿದ್ದರು.
ಶನಿವಾರ ದಿನದಾಟದಂತ್ಯಕ್ಕೆ ಭಾರತ 98 ಓವರ್‌ಗಳಲ್ಲಿ 2 ವಿಕೆಟ್ ನಷ್ಟದಲ್ಲಿ 312 ರನ್ ಗಳಿಸಿತ್ತು. 121 ರನ್ ಗಳಿಸಿರುವ ಚೇತೇಶ್ವರ ಪೂಜಾರ ಮತ್ತು 54 ರನ್ ಗಳಿಸಿರುವ ನಾಯಕ ವಿರಾಟ್ ಕೊಹ್ಲಿ ಔಟಾಗದೆ ಕ್ರೀಸ್‌ನಲ್ಲಿದ್ದರು.
Next Story





