Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ವಿಚಾರ
  3. ವಿಶೇಷ-ವರದಿಗಳು
  4. ಈ ನಗರಕ್ಕೆ ಬರುವವರಿಗೆ ಈ ಸರಕಾರ...

ಈ ನಗರಕ್ಕೆ ಬರುವವರಿಗೆ ಈ ಸರಕಾರ ನೀಡುತ್ತದೆ 38.7 ಲಕ್ಷ ರೂ.!

ಹಣ ಬೇಕಾದರೆ ಇಲ್ಲಿಗೆ ಹೋಗಿ...

ವಾರ್ತಾಭಾರತಿವಾರ್ತಾಭಾರತಿ26 Nov 2017 5:25 PM IST
share
ಈ ನಗರಕ್ಕೆ ಬರುವವರಿಗೆ ಈ ಸರಕಾರ ನೀಡುತ್ತದೆ 38.7 ಲಕ್ಷ ರೂ.!

ನಂಬಿದರೆ ನಂಬಿ, ಬಿಟ್ಟರೆ ಬಿಡಿ.....ಸ್ವಿಟ್ಜರ್‌ಲ್ಯಾಂಡ್‌ನ ಈ ಪ್ರಕೃತಿ ಮನೋಹರ ಪಟ್ಟಣಕ್ಕೆ ವಲಸೆ ಬರುವವರಿಗೆ ಅಲ್ಲಿಯ ಸರಕಾರವೇ 60,000 ಡಾ.(ಸುಮಾರು 38.7 ಲ.ರೂ.) ನೀಡುತ್ತದೆ!

ಸರಕಾರದ ಈ ಕೊಡುಗೆಗೆ ಕಾರಣವಿದೆ. ಈ ಪಟ್ಟಣದಲ್ಲಿ ಜನಸಂಖ್ಯೆ ದಿನೇ ದಿನೇ ಕ್ಷೀಣಿಸುತ್ತಿದೆ.

ಈ ಆಸಕ್ತಿಪೂರ್ಣ ಪಟ್ಟಣದ ಬಗ್ಗೆ ವಿವರಗಳಿಲ್ಲಿವೆ.

ಅಲ್ಬಿನೆನ್ ಈ ಪಟ್ಟಣದ ಹೆಸರು. ಸಮುದ್ರ ಮಟ್ಟದಿಂದ 4265 ಅಡಿ ಎತ್ತರದಲ್ಲಿ ರಮಣೀಯ ಕಣಿವೆಯಲ್ಲಿದೆ. ಇದು ಪರ್ವತ ನಗರವಾಗಿದ್ದು, ತನ್ನದೇ ಆದ ಚರ್ಚ್ ಹೊಂದಿದೆ. ಇಲ್ಲಿ ಎಲ್ಲೆಲ್ಲಿಯೂ ಸಾಂಪ್ರದಾಯಿಕ ವಾಲೈಸ್ ವಾಸ್ತು ಸೌಂದರ್ಯ ರಾರಾಜಿಸುತ್ತಿದೆ.

ಈ ಪಟ್ಟಣವು ಪ್ರಶಾಂತ ವಾತಾವರಣ, ಅದ್ಭುತ ನೈಸರ್ಗಿಕ ದೃಶ್ಯಗಳು, ಶುದ್ಧ ಗಾಳಿ ಮತ್ತು ವರ್ಷದ ಹೆಚ್ಚಿನ ಸಮಯ ಹದವಾದ ಬಿಸಿಲಿನಿಂದ ಕೂಡಿದೆ. ಆದರೆ ಇಲ್ಲಿಯ ನಿವಾಸಿಗಳೆಲ್ಲ ವಾಸಕ್ಕಾಗಿ ದೊಡ್ಡ ನಗರಗಳಿಗೆ ತೆರಳುತ್ತಿರುವುದರಿಂದ ಇನ್ನು ಕೆಲವೇ ವರ್ಷಗಳಲ್ಲಿ ಇಲ್ಲಿ ಜನಸಂಖ್ಯೆಯಿಲ್ಲದೆ ಇಡೀ ಪಟ್ಟಣವೇ ಬಿಕೋ ಎನ್ನುವ ಬೆದರಿಕೆ ಸರಕಾರವನ್ನು ಕಾಡುತ್ತಿದೆ.

ಸದ್ಯ ಈ ಪಟ್ಟಣದಲ್ಲಿ ಕೇವಲ 240 ಜನರು ವಾಸವಾಗಿದ್ದಾರೆ. ಇವರ ಪೈಕಿ ಮಕ್ಕಳ ಸಂಖ್ಯೆ ಹೇಗೆ ಎಣಿಸಿದರೂ ಏಳನ್ನು ಮೀರುವುದಿಲ್ಲ. ಹೆಚ್ಚಿನ ಕುಟುಂಬಗಳೆಲ್ಲ ದೊಡ್ಡ ನಗರಗಳಿಗೆ ವಲಸೆ ಹೋದ ಬಳಿಕ ಈ ಊರಿನ ಶಾಲೆಯು ಬಾಗಿಲು ಹಾಕಿಕೊಂಡಿದ್ದರಿಂದ ಈ ಮಕ್ಕಳು ಬಸ್‌ನಲ್ಲಿ ಸಮೀಪದ ಪಟ್ಟಣದ ಶಾಲೆಗೆ ಹೋಗುತ್ತಾರೆ.

ಈ ಸುಂದರವಾದ ತಾಣದಲ್ಲಿ ವಾಸವಾಗಲು ಬರುವವರಿಗೆ 60,000 ಡಾ.ಗಳ ಕೊಡುಗೆಯನ್ನು ಸರಕಾರವು ಘೋಷಿಸಿದೆ. ಇದರಿಂದಾಗಿ ಅವರು ಇಲ್ಲಿ ತಮ್ಮದೇ ಆದ ಮನೆಗಳನ್ನು ಖರೀದಿಸಬಹುದಾಗಿದೆ. 45 ವರ್ಷದೊಳಗಿನ, ಎರಡು ಮಕ್ಕಳಿರುವ ದಂಪತಿಗಳಿಗೆ ಮಾತ್ರ ಈ ಕೊಡುಗೆ ಮುಕ್ತವಾಗಿದೆ.

ಅಂದ ಹಾಗೆ ಈ ಕೊಡುಗೆಯೊಂದಿಗೆ ಒಂದು ಷರತ್ತೂ ಇದೆ. 60,000 ಡಾ.ಗಳನ್ನು ಪಡೆದುಕೊಂಡು ಇಲ್ಲಿ ನೆಲೆಸುವ ದಂಪತಿಗಳು ಈ ಊರನ್ನು ತೊರೆಯಲು ನಿರ್ಧರಿಸಿದರೆ ಸರಕಾರಕ್ಕೆ ಅಷ್ಟೂ ಹಣವನ್ನು ಹಿಂದಿರುಗಿಸಬೇಕಾಗುತ್ತದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X