Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಕರ್ತವ್ಯ ನಿರ್ವಹಣೆಯಲ್ಲಿ ಲೋಪ ಎಸಗಿದರೆ...

ಕರ್ತವ್ಯ ನಿರ್ವಹಣೆಯಲ್ಲಿ ಲೋಪ ಎಸಗಿದರೆ ಕಠಿಣ ಕ್ರಮ : ವಾರ್ಡನ್‍ಗಳಿಗೆ ಡಿಸಿ-ಸಿಇಓ ಎಚ್ಚರಿಕೆ

ಶಿವಮೊಗ್ಗ-ತೀರ್ಥಹಳ್ಳಿ-ಭದ್ರಾವತಿ ತಾಲೂಕುಗಳು ಸರ್ಕಾರಿ ಹಾಸ್ಟೆಲ್ ಮುಖ್ಯಸ್ಥರ ಸಭೆ

ವಾರ್ತಾಭಾರತಿವಾರ್ತಾಭಾರತಿ26 Nov 2017 7:15 PM IST
share
ಕರ್ತವ್ಯ ನಿರ್ವಹಣೆಯಲ್ಲಿ ಲೋಪ ಎಸಗಿದರೆ ಕಠಿಣ ಕ್ರಮ : ವಾರ್ಡನ್‍ಗಳಿಗೆ ಡಿಸಿ-ಸಿಇಓ ಎಚ್ಚರಿಕೆ

ಶಿವಮೊಗ್ಗ, ನ. 26: ನಗರದ ತಾಲೂಕು ಕಚೇರಿ ಸಭಾಂಗಣದಲ್ಲಿ ಜಿಲ್ಲಾಧಿಕಾರಿ ಡಾ. ಎಂ. ಲೋಕೇಶ್ ಹಾಗೂ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಡಾ. ಕೆ. ರಾಕೇಶ್‍ಕುಮಾರ್‍ರವರು ಶಿವಮೊಗ್ಗ, ತೀರ್ಥಹಳ್ಳಿ ಹಾಗೂ ಭದ್ರಾವತಿ ತಾಲೂಕು ವ್ಯಾಪ್ತಿಯ ಸರ್ಕಾರಿ ಹಾಸ್ಟೆಲ್ ವಾರ್ಡನ್‍ಗಳ ಸಭೆ  ನಡೆಸಿದರು.

'ಕಳೆದ ತಿಂಗಳು ಉನ್ನತ ಅಧಿಕಾರಿಗಳ ತಂಡವು ಕೆಲ ಹಾಸ್ಟೆಲ್‍ಗಳಿಗೆ ದಿಢೀರ್ ಭೇಟಿಯಿತ್ತು ಪರಿಶೀಲನೆ ನಡೆಸಿದ ವೇಳೆ ದಾಸ್ತಾನು ಪುಸ್ತಕ, ಆಹಾರ ಸಾಮಗ್ರಿಗಳ ದಾಸ್ತಾನು ವಿವರ ಸಮರ್ಪಕವಾಗಿ ನಿರ್ವಹಣೆ ಮಾಡದಿರುವುದು ಬೆಳಕಿಗೆ ಬಂದಿತ್ತು. ಈ ಕುರಿತಂತೆ 41 ವಾರ್ಡನ್‍ಗಳಿಗೆ ನೋಟೀಸ್ ಜಾರಿಗೊಳಿಸಲಾಗಿದೆ. ಈರ್ವರನ್ನು ಅಮಾನತ್ತುಗೊಳಿಸಲಾಗಿದೆ.

ವಾರ್ಡನ್‍ಗಳು ಯಾವುದೇ ಗೊಂದಲ - ಗಡಿಬಿಡಿಗೆ ಆಸ್ಪದವಾಗದಂತೆ, ಅತ್ಯಂತ ಎಚ್ಚರಿಕೆಯಿಂದ ಕಾರ್ಯನಿರ್ವಹಣೆ ಮಾಡಬೇಕು. ಕರ್ತವ್ಯ ಲೋಪ ಎಸಗುವವರ ಮೇಲೆ ಕಾನೂನು ರೀತ್ಯ ಕ್ರಮ ಜರುಗಿಸಲಾಗುವುದು. ಹಾಗೆಯೇ ಹಾಸ್ಟೆಲ್‍ಗಳ ದಾಸ್ತಾನು ವಿವರದಲ್ಲಿ ಏರುಪೇರು ಕಂಡುಬಂದರೆ ಸಂಬಂಧಿಸಿದ ವಿಸ್ತರಣಾಧಿಕಾರಿಗಳ ವಿರುದ್ದ ಶಿಸ್ತುಕ್ರಮ ಜರುಗಿಸಲಾಗುವುದು' ಎಂದು ಡಿ.ಸಿ. - ಸಿಇಓ ಎಚ್ಚರಿಕೆ ನೀಡಿದ್ದಾರೆ.

ಎಲ್ಲ ವಿದ್ಯಾರ್ಥಿ ನಿಲಯಗಳಲ್ಲಿ ಗ್ರಂಥಾಲಯ ವ್ಯವಸ್ಥೆಯಿಲ್ಲದಿರುವುದು ಗಮನಕ್ಕೆ ಬಂದಿದ್ದು, ಕೂಡಲೇ ಗ್ರಂಥಾಲಯ ವ್ಯವಸ್ಥೆ ಕಲ್ಪಿಸಬೇಕು. ವಿದ್ಯಾರ್ಥಿಗಳು, ದಾಸ್ತಾನು ವಿವರ ಸೇರಿದಂತೆ ಸಂಬಂಧಪಟ್ಟ 28 ದಾಖಲಾತಿ ಪುಸ್ತಕಗಳನ್ನು ವ್ಯವಸ್ಥಿತವಾಗಿ ನಿರ್ವಹಣೆ ಮಾಡಬೇಕು.ಹಾಸ್ಟೆಲ್‍ಗಳಲ್ಲಿ ಅಡುಗೆ ತಯಾರು ಮಾಡುವ ಸಿಬ್ಬಂದಿಗಳು ಪಾಲಿಸಬೇಕಾದ ಸೂಚೆಯ ಅನುಷ್ಠಾನ ಕುರಿತು ವಿಚಾರಣೆ ಮಾಡಬೇಕು.

ಅಡುಗೆ ತಯಾರು ಮಾಡುವ ಸಮಯದಲ್ಲಿ ಸಿಬ್ಬಂದಿಗಳು ಏಫ್ರಾನ್‍ಗಳು, ಕೈಗವಸು ಸೇರಿದಂತೆ ಅಗತ್ಯ ಸುರಕ್ಷಾ ಕ್ರಮಗಳ ಪಾಲನೆ ಮಾಡುತ್ತಿದ್ದಾರೆಯೇ ಇಲ್ಲವೇ ಎಂಬುವುದನ್ನು ಗಮನಿಸಬೇಕು. ಹಾಸ್ಟೆಲ್‍ಗಳಲ್ಲಿ ಅಳವಡಿಸಿರುವ ಸಿಸಿಟಿವಿ ಕಾರ್ಯ ನಿರ್ವಹಿಸುತ್ತಿವೆಯೇ ಎಂಬುವುದನ್ನು ಪರಿಶೀಲಿಸಬೇಕು ಎಂದು ವಾರ್ಡನ್‍ಗಳಿಗೆ ಸೂಚಿಸಿದ್ದಾರೆ.

ಕಟ್ಟಡಗಳು ದುರಸ್ತಿಗೆ ಬಂದಿದ್ದಲ್ಲಿ ತತ್‍ಕ್ಷಣವೇ ಜಿಲ್ಲಾಡಳಿತಕ್ಕೆ ಪ್ರಸ್ತಾವನೆ ಕಳುಹಿಸಿ ಕೊಡಬೇಕು. ರಿಪೇರಿ ಕೆಲಗಳಿದ್ದರೆ ಉನ್ನತಾಧಿಕಾರಿಗಳಿಗೆ ಲಿಖಿತವಾಗಿ ಗಮನಕ್ಕೆ ತರಬೇಕು. ಅನಾರೋಗ್ಯಕ್ಕೆ ಒಳಗಾದ ವಿದ್ಯಾರ್ಥಿಗಳಿಗೆ ಸಮೀಪದ ಸರ್ಕಾರಿ ಆಸ್ಪತ್ರೆಗಳಿಗೆ ದಾಖಲು ಮಾಡಬೇಕು. ಹೆಚ್ಚಿನ ಚಿಕಿತ್ಸೆಯ ಅವಶ್ಯಕತೆಯಿದ್ದಲ್ಲಿ ಕೂಡಲೇ ಮೇಲಾಧಿಕಾರಿಗಳ ಗಮನಕ್ಕೆ ತರಬೇಕು. ಹಾಸ್ಟೆಲ್‍ಗಳಲ್ಲಿ ಸ್ವಚ್ಚತೆ ಕಾಯ್ದುಕೊಳ್ಳಬೇಕು ಎಂದು ಸಲಹೆ ನೀಡಿದ್ದಾರೆ.

ವಿದ್ಯಾರ್ಥಿ ನಿಲಯಗಳಲ್ಲಿ ಕಳಪೆ ಗುಣಮಟ್ಟದ ಆಹಾರ ಪದಾರ್ಥಗಳ ಬಳಕೆ ಮಾಡಲಾಗುತ್ತಿರುವ ಕುರಿತಂತೆ ಸಾಕಷ್ಟು ದೂರುಗಳು ಕೇಳಿಬರುತ್ತಿವೆ. ವಿದ್ಯಾರ್ಥಿಗಳಿಗೆ ಗುಣಮಟ್ಟದ ಆಹಾರ ಪೂರೈಕೆ ಮಾಡಬೇಕು. ಅಡುಗೆಯಲ್ಲಿ ತಾಜಾ ತರಕಾರಿಗಳ ಉಪಯೋಗಿಸಬೇಕು. ಆಹಾರ ಸಾಮಾಗ್ರಿಗಳು ಕಳಪೆ ಗುಣಮಟ್ಟದ್ದಾಗಿದ್ದರೆ ಹಿರಿಯ ಅಧಿಕಾರಿಗಳ ಗಮನಕ್ಕೆ ತರಬೇಕು ಎಂದು ಡಿಸಿ ಹಾಗೂ ಸಿಇಓರವರು ವಾರ್ಡನ್‍ಗಳಿಗೆ ಸೂಚಿಸಿದ್ದಾರೆ. 
ಸಭೆಯಲ್ಲಿ ಆಡಳಿತ ಕಾರ್ಯದರ್ಶಿಗಳು, ಸಮಾಜ ಕಲ್ಯಾಣ ಇಲಾಖೆಯ ಉಪ ನಿರ್ದೇಶಕರು, ಸಹಾಯಕ ನಿರ್ದೇಶಕರು, ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಉಪ ನಿರ್ದೇಶಕರು, ವಿಸ್ತರಣಾಧಿಕಾರಿಗಳು, ಶಿವಮೊಗ್ಗ, ತೀರ್ಥಹಳ್ಳಿ ಹಾಗೂ ಭದ್ರಾವತಿ ತಾಲೂಕುಗಳ ವಾರ್ಡನ್‍ಗಳು ಉಪಸ್ಥಿತರಿದ್ದರು. 

share
ವಾರ್ತಾಭಾರತಿ
ವಾರ್ತಾಭಾರತಿ
Next Story
X