Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಭಯೋತ್ಪಾದನೆ ತಡೆಯಲು ಮಾನವೀಯ ಶಕ್ತಿಗಳು...

ಭಯೋತ್ಪಾದನೆ ತಡೆಯಲು ಮಾನವೀಯ ಶಕ್ತಿಗಳು ಒಗ್ಗಟ್ಟಾಗಬೇಕು

ಮನ್ ಕಿ ಬಾತ್ ನಲ್ಲಿ ಪ್ರಧಾನಿ ಮೋದಿ

ವಾರ್ತಾಭಾರತಿವಾರ್ತಾಭಾರತಿ26 Nov 2017 7:30 PM IST
share
ಭಯೋತ್ಪಾದನೆ ತಡೆಯಲು ಮಾನವೀಯ ಶಕ್ತಿಗಳು ಒಗ್ಗಟ್ಟಾಗಬೇಕು

ಹೊಸದಿಲ್ಲಿ, ನ.26: ಭಯೋತ್ಪಾದನೆಯ ಉಪಟಳವನ್ನು ನಿಲ್ಲಿಸಲು ಮಾನವೀಯ ಶಕ್ತಿಗಳು ಒಗ್ಗಟ್ಟಾಗಿ ಹೋರಾಟ ನಡೆಸಬೇಕು ಎಂದು ರವಿವಾರದಂದು ಪ್ರಧಾನ ಮಂತ್ರಿ ನರೇಂದ್ರ ಮೋದಿ ತಿಳಿಸಿದರು.

38ನೆ ಮನ್ ಕಿ ಬಾತ್ ಕಾರ್ಯಕ್ರಮದಲ್ಲಿ ಮಾತನಾಡುತ್ತಿದ್ದ ಅವರು, ಉಗ್ರವಾದ ಜಗತ್ತಿನಾದ್ಯಂತ ಮಾನವತೆಗೆ ಅಪಾಯ ಮತ್ತು ಸವಾಲನ್ನು ಒಡ್ಡಿದೆ ಮತ್ತು ಅದು ಹೇಗಾದರೂ ಮಾಡಿ ಮಾನವೀಯ ಶಕ್ತಿಗಳನ್ನು ಸೋಲಿಸಲು ಪಣ ತೊಟ್ಟಿದೆ. ಹಾಗಾಗಿ ಕೇವಲ ಭಾರತ ಮಾತ್ರವಲ್ಲ ಜಗತ್ತಿನಾದ್ಯಂತ ಇರುವ ಎಲ್ಲ ಮಾನವೀಯ ಶಕ್ತಿಗಳು ಒಗ್ಗಟ್ಟಾಗಿ ಹೋರಾಡುವ ಮೂಲಕ ಉಗ್ರವಾದದ ಉಪಟಳವನ್ನು ನಿಲ್ಲಿಸಬೇಕು ಎಂದು ಹೇಳಿದರು.

ಇದೇ ವೇಳೆ 26/11ರ ಮುಂಬೈ ದಾಳಿ ನಡೆದು ಒಂಬತ್ತು ವರ್ಷಗಳು ಕಳೆದ ಸಂದರ್ಭದಲ್ಲಿ ಮೋದಿ ಆ ದುರ್ಘಟನೆಯ ಸಂತ್ರಸ್ತರನ್ನು ನೆನಪಿಸಿಕೊಂಡರು.

ಆ ಭೀಕರ ಘಟನೆಯಲ್ಲಿ ತಮ್ಮ ಜೀವವನ್ನು ಕಳೆದುಕೊಂಡ ಧೈರ್ಯಶಾಲಿ ನಾಗರಿಕರು, ಪೊಲೀಸರು, ಭದ್ರತಾ ಪಡೆಯ ಸಿಬ್ಬಂದಿಯನ್ನು ನಾವು ಸ್ಮರಿಸುತ್ತೇವೆ ಮತ್ತು ಗೌರವ ಸಲ್ಲಿಸುತ್ತೇವೆ. ಅವರ ಬಲಿದಾನವನ್ನು ನಾವೆಂದೂ ಮರೆಯುವುದಿಲ್ಲ ಎಂದು ಪ್ರಧಾನಿ ತಿಳಿಸಿದರು.

ಭಯೋತ್ಪಾದನೆ ಮಾನವತೆಗೆ ಎದುರಾಗಿರುವ ಅಪಾಯ ಎಂದು ಒತ್ತಿ ಹೇಳಿದ ಮೋದಿ ಈಗ ಜಗತ್ತಿಗೆ ಭಯೋತ್ಪಾದನೆಯ ವಿನಾಶಕಾರಿ ಆಯಾಮ ಅರಿವಿಗೆ ಬರುತ್ತಿದೆ ಎಂದು ಹೇಳಿದರು. ಕಳೆದ ನಾಲ್ಕು ದಶಕಗಳಿಂದ ಭಾರತ ಉಗ್ರವಾದದ ಸಮಸ್ಯೆಯ ಬಗ್ಗೆ ಮಾತನಾಡುತ್ತಲೇ ಬಂದಿದೆ. ಆರಂಭದಲ್ಲಿ ಜಗತ್ತು ನಮ್ಮನ್ನು ಗಂಭೀರವಾಗಿ ಪರಿಗಣಿಸಿರಲಿಲ್ಲ ಆದರೆ ಈಗ ಜಗತ್ತಿಗೂ ಭಯೋತ್ಪಾದನೆಯ ವಿನಾಶಕಾರಿ ಆಯಾಮದ ಅರಿವಾಗಿದೆ. ಇಂದು ನಾವು ಅದನ್ನು ಅತಿದೊಡ್ಡ ಸವಾಲಾಗಿ ಸ್ವೀಕರಿಸಿದ್ದೇವೆ ಎಂದು ಮೋದಿ ಹೇಳಿದರು.

ಪ್ರಧಾನ ಮಂತ್ರಿಯ ಚಾಯ್‌ವಾಲಾ ಹಿನ್ನೆಲೆಯನ್ನು ವ್ಯಂಗ್ಯ ಮಾಡಿದ್ದ ಕಾಂಗ್ರೆಸ್‌ನ ಟ್ವೀಟ್‌ವೊಂದಕ್ಕೆ ಉತ್ತರವಾಗಿ ಚುನಾವಣೆಯ ಹೊಸ್ತ್ಲಿಲ್ಲಿರುವ ಗುಜರಾತ್‌ನಲ್ಲಿ ಅಮಿತ್ ಶಾ ಮತ್ತು ಅರುಣ್ ಜೇಟ್ಲಿ ಸೇರಿದಂತೆ ಬಿಜೆಪಿಯ ಹಲವು ನಾಯಕರು ಜನರೊಂದಿಗೆ ಚಹಾ ಸೇವಿಸುತ್ತಾ ಮನ್ ಕಿ ಬಾತ್ ಆಲಿಸಿದರು. ಗುಜರಾತ್‌ನ 182 ವಿಧಾನಸಭಾ ಕ್ಷೇತ್ರಗಳ 50,128 ಚುನಾವಣಾ ಬೂತ್‌ಗಳಲ್ಲಿ ನಡೆದ ಈ ಕಾರ್ಯಕ್ರಮಕ್ಕೆ ಮನ್ ಕಿಬಾತ್-ಚಾಯ್ ಕೆ ಸಾಥ್ ಎಂದು ಹೆಸರಿಡಲಾಗಿತ್ತು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X