Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ರಾಷ್ಟ್ರೀಯ ಹಾಲು ಉತ್ಪಾದಕರ ದಿನಾಚರಣೆ

ರಾಷ್ಟ್ರೀಯ ಹಾಲು ಉತ್ಪಾದಕರ ದಿನಾಚರಣೆ

ವಾರ್ತಾಭಾರತಿವಾರ್ತಾಭಾರತಿ26 Nov 2017 8:39 PM IST
share
ರಾಷ್ಟ್ರೀಯ ಹಾಲು ಉತ್ಪಾದಕರ ದಿನಾಚರಣೆ

ಮಂಗಳೂರು, ನ.26: ಕ್ಷೀರ ಕ್ರಾಂತಿಯನ್ನು ಆರಂಭಿಸಿದ ಡಾ. ವರ್ಗೀಸ್ ಕುರಿಯನ್ ದೇಶದ ಸಾಮಾನ್ಯ ನಾಗರಿಕರ ಆಶಾಕಿರಣವಾಗಿದ್ದರು. ಅವರ ಸಾಧನೆಗೆ ಅಂದಿನ ಪ್ರಧಾನಿ ಶಾಸಿ ಅವರೇ ಮೆಚ್ಚುಗೆ ವ್ಯಕ್ತಪಡಿಸಿದ್ದರು. ಕುರಿಯನ್‌ರ ಆದರ್ಶದಂತೆ ನಡೆದಿರುವ ದ.ಕ.ಹಾಲು ಒಕ್ಕೂಟವು ಇಂದು ದೇಶದ ಅತ್ಯುನ್ನತ ಒಕ್ಕೂಟವಾಗಿ ಗುರುತಿಸಿಕೊಂಡಿದೆ ಎಂದು ಮಣಿಪಾಲ ಭಾರತೀಯ ವಿಕಾಸ ಟ್ರಸ್ಟ್‌ನ ಮ್ಯಾನೇಜಿಂಗ್ ಟ್ರಸ್ಟಿ ಕೆ.ಎಂ.ಉಡುಪ ಮೆಚ್ಚುಗೆ ವ್ಯಕ್ತಪಡಿಸಿದರು.

ನಗರದ ಎಸ್‌ಸಿಡಿಸಿಸಿ ಬ್ಯಾಂಕ್ ಸಭಾಂಗಣದಲ್ಲಿ ರಾಷ್ಟ್ರೀಯ ಹಾಲು ಉತ್ಪಾದಕರ ದಿನದ ಅಂಗವಾಗಿ ದ.ಕ. ಸಹಕಾರಿ ಹಾಲು ಉತ್ಪಾದಕರ ಒಕ್ಕೂಟದ ವತಿಯಿಂದ ರವಿವಾರ ನಡೆದ ಡಾ. ವರ್ಗೀಸ್ ಕುರಿಯನ್ ಕುರಿತ ಪುಸ್ತಕ ಬಿಡುಗಡೆ ಹಾಗೂ ಒಕ್ಕೂಟವು ರಾಷ್ಟ್ರೀಯ ಡೈರಿ ಎಕ್ಸಲೆನ್ಸ್ ಪ್ರಶಸ್ತಿ ಪಡೆದ ಹಿನ್ನೆಲೆಯಲ್ಲಿ ಹಾಲು ಉತ್ಪಾದಕರ ಸಂಘಗಳ ಅಧ್ಯಕ್ಷರು ಮತ್ತು ಕಾರ್ಯದರ್ಶಿಗಳಿಗೆ ಅಭಿನಂದನಾ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಅವರು ಮಾತನಾಡಿದರು.

ಜಿಲ್ಲೆಯ ಹಾಲು ಒಕ್ಕೂಟಕ್ಕೆ ಸಂಬಂಧಪಟ್ಟಂತೆ ಡಾ. ಟಿ.ಎ.ಪೈ ನೆನಪಾಗುತ್ತಾರೆ. ಅವರು ಕೆನರಾ ಹಾಲು ಉತ್ಪಾದಕರ ಒಕ್ಕೂಟದ ಮೂಲಕ ಜಿಲ್ಲೆಯ ಹಾಲು ಉತ್ಪಾದನೆಗೆ ನಾಂದಿ ಹಾಡಿದ್ದರು. ಹೀಗಾಗಿ ಡಾ ಟಿ.ಎ.ಪೈಗಳ ಸೇವೆಯನ್ನೂ ಸ್ಮರಿಸಬೇಕು ಎಂದು ಕೆ.ಎಂ.ಉಡುಪ ನುಡಿದರು.
ಸಂಘಟಿತ ಪ್ರಯತ್ನದಿಂದ ದ.ಕ.ಹಾಲು ಒಕ್ಕೂಟಕ್ಕೆ ರಾಷ್ಟ್ರ ಪ್ರಶಸ್ತಿ ದೊರೆತಿದೆ. ಈ ಪ್ರಶಸ್ತಿಯನ್ನು ಒಕ್ಕೂಟದ ವ್ಯಾಪ್ತಿಯ ಎಲ್ಲ ಸಂಘಗಳಿಗೆ ಸಮರ್ಪಿಸಲಾಗುತ್ತಿದ್ದು, ಅದನ್ನು ಕಾಯ್ದುಕೊಳ್ಳುವ ಜವಾಬ್ದಾರಿ ಎಲ್ಲರ ಮೇಲಿದೆ ಎಂದು ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಒಕ್ಕೂಟದ ಅಧ್ಯಕ್ಷ ಕೆ.ರವಿರಾಜ್ ಹೆಗ್ಡೆ ಹೇಳಿದರು.

ಈ ಸಂದರ್ಭ ನಂದಿನಿ ಉತ್ತಮ ಡೀಲರ್‌ಗಳಿಗೆ ಬಹುಮಾನ, ಡೀಲರ್‌ಗಳ ಮಕ್ಕಳಿಗೆ ಪ್ರತಿಭಾ ಪುರಸ್ಕಾರ ನೀಡಲಾಯಿತು. ಡಾ. ವರ್ಗೀಸ್ ಕುರಿಯನ್ ಕುರಿತ ಕನ್ನಡ ಪುಸ್ತಕ ಬರೆದ ಡಾ. ಮಹಾಬಲೇಶ್ವರ ರಾವ್ ಅವರನ್ನು ಸನ್ಮಾನಿಸಲಾಯಿತು.

ವೇದಿಕೆಯಲ್ಲಿ ಒಕ್ಕೂಟದ ನಿರ್ದೇಶಕರಾದ ಸವಣೂರು ಕೆ.ಸೀತಾರಾಮ ರೈ, ಬಿ.ನಿರಂಜನ್, ನವೀನ್‌ಚಂದ್ರ ಜೈನ್, ಜಾನಕಿ ಹಂದೆ, ಟಿ.ಸೂರ್ಯ ಶೆಟ್ಟಿ, ನಾರಾಯಣಪ್ರಕಾಶ್ ಕೆ, ಅಶೋಕ್‌ಕುಮಾರ್ ಶೆಟ್ಟಿ, ಪದ್ಮನಾಭ ಶೆಟ್ಟಿ, ಡಾ. ಕೃಷ್ಣ ಭಟ್, ಸಹಕಾರ ಸಂಘಗಳ ಉಪನಿಬಂಧಕ ಬಿ.ಕೆ.ಸಲೀಂ ಉಪಸ್ಥಿತರಿದ್ದರು. ಒಕ್ಕೂಟದ ಮಾರುಕಟ್ಟೆ ವಿಭಾಗದ ಡಾ.ಹೇಮಶೇಖರ್ ಪುರಸ್ಕೃತರ ವಿವರ ವಾಚಿಸಿದರು. ವ್ಯವಸ್ಥಾಪಕ ನಿರ್ದೇಶಕ ಡಾ. ಬಿ.ವಿ.ಸತ್ಯನಾರಾಯಣ ಸ್ವಾಗತಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X