ಗಾಂಜಾ ಮಾರಾಟ: ಮೂರು ಮಂದಿ ಸೆರೆ
ಮಂಗಳೂರು, ಅ.26: ಗಾಂಜಾ ಮಾರಾಟ ಪ್ರಕರಣಕ್ಕೆ ಸಂಬಂಧಿಸಿ ಓರ್ವನನ್ನು ಕೊಣಾಜೆ ಠಾಣಾ ಪೊಲೀಸರು ಬಂಧಿಸಿದ್ದಾರೆ.
ಬೆಳ್ಮ ಗ್ರಾಮದ ರೆಂಜಾಡಿ ಮನೆ ನಿವಾಸಿ ಯು.ಎಂ.ಅನ್ಸಾರ್ ಎಂಬಾತ ಬಂಧಿತ ಆರೋಪಿ. ಬೆಳ್ಮ ಗ್ರಾಮದ ಬೆಳ್ಮದೋಟ ಎಂಬಲ್ಲಿ ಸ್ಥಳೀಯರಿಗೆ ಮಾರಾಟ ಮಾಡಲೆಂದು ಗಾಂಜಾವನ್ನು ಕೊಂಡೊಯುತ್ತಿದ್ದಾಗ ಪೊಲೀಸರು ಬಂಧಿಸಿದ್ದಾರೆ.
ಬಂಧಿತನಿಂದ 1.100 ಕೆ.ಜಿ. ತೂಕದ ಗಾಂಜಾ ಪ್ಯಾಕೆಟ್‌ಗಳನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ. ಆರೋಪಿಯ ವಿರುದ್ಧ ಈ ಹಿಂದೆ ಕೊಣಾಜೆ ಮತ್ತು ಬಂದರ್ ಪೊಲೀಸ್ ಠಾಣೆಯಲ್ಲಿ ಗಾಂಜಾ ಸಾಗಾಟಕ್ಕೆ ಸಂಬಂಧಿಸಿ ಪ್ರಕರಣ ದಾಖಲಾಗಿದೆ.
ಗಾಂಜಾ ಸೇವನೆ: ಇಬ್ಬರ ಸೆರೆ
ಇನ್ನೊಂದು ಪ್ರಕರಣದಲ್ಲಿ ಗಾಂಜಾ ಸೇವನೆ ಆರೋಪದಲ್ಲಿ ಕೊಣಾಜೆ ಠಾಣಾ ಪೊಲೀಸರು ಇಬ್ಬರನ್ನು ಬಂಧಿಸಿದ್ದಾರೆ. ಬಂಧಿತರನ್ನು ಕಸ್ಬಾ ಬೆಂಗ್ರೆಯ ನಿವಾಸಿ ಮುಹಮ್ಮದ್ ಅಶ್ರಫ್ ಮತ್ತು ಮುಹಮ್ಮದ್ ಎಂದು ಗುರುತಿಸಲಾಗಿದೆ.
ಬೆಳ್ಮ ಗ್ರಾಮದ ಗ್ರೀನ್‌ಗ್ರೌಂಡ್ ಎಂಬಲ್ಲಿ ಗಾಂಜಾ ಸೇವನೆ ಮಾಡುತ್ತಿದ್ದಾಗ ಇಬ್ಬರು ಆರೋಪಿಗಳನ್ನು ವಶಕ್ಕೆ ಪಡೆದು ವೈದ್ಯಕೀಯ ಪರೀಕ್ಷೆ ಗೊಳಪಡಿಸಿ ದಾಗ ಗಾಂಜಾ ಸೇವನೆ ದೃಢಪಟ್ಟಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಕೊಣಾಜೆ ಪೊಲೀಸ್ ನಿರೀಕ್ಷಕ ಅಶೋಕ್ ಪಿ., ಪಿಎಸ್‌ಐ ರವಿ ಪೀರುಪವಾರ್, ವೆಂಕಟೇಶ್ ಮತ್ತು ಸಿಬ್ಬಂದಿಗಳಾದ ಅಶೋಕ್, ನಾಗರಾಜ್, ಭಾಸ್ಕರ, ವಿಜಯ್, ಕರಣಸಿದ್ದ ಒಡೆಯರ್, ಗಿರೀಶ್ ಕಾರ್ಯಾಚರಣೆಯಲ್ಲಿ ಪಾಲ್ಗೊಂಡಿದ್ದರು.







