Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಆಧಾರ್ ಜೋಡಣೆ ಅಂತಿಮ ದಿನಾಂಕ ವಿಸ್ತರಣೆಗೆ...

ಆಧಾರ್ ಜೋಡಣೆ ಅಂತಿಮ ದಿನಾಂಕ ವಿಸ್ತರಣೆಗೆ ಸಿದ್ಧ: ಕೇಂದ್ರ ಸರಕಾರ

ವಾರ್ತಾಭಾರತಿವಾರ್ತಾಭಾರತಿ27 Nov 2017 6:57 PM IST
share
ಆಧಾರ್ ಜೋಡಣೆ ಅಂತಿಮ ದಿನಾಂಕ ವಿಸ್ತರಣೆಗೆ ಸಿದ್ಧ: ಕೇಂದ್ರ ಸರಕಾರ

ಹೊಸದಿಲ್ಲಿ, ನ.27: ಸರಕಾರದ ವಿವಿಧ ಯೋಜನೆಗಳ ಪ್ರಯೋಜನ ಪಡೆಯಲು ಆಧಾರ್ ಸಂಖ್ಯೆ ಜೋಡಣೆಗೆ ಅಂತಿಮ ದಿನಾಂಕವನ್ನು 2018ರ ಮಾರ್ಚ್ 31ರವರೆಗೆ ವಿಸ್ತರಿಸಲು ಬಯಸಿರುವುದಾಗಿ ಕೇಂದ್ರ ಸರಕಾರ ಸುಪ್ರೀಂಕೋರ್ಟ್‌ಗೆ ತಿಳಿಸಿದೆ. ಈಗಆಧಾರ್ ಸಂಖ್ಯೆ ಜೋಡಿಸಲು ಡಿ.31 ಅಂತಿಮ ದಿನಾಂಕವಾಗಿದೆ.

 ಸಮಾಜಕಲ್ಯಾಣ ಯೋಜನೆಗಳ ಪ್ರಯೋಜನ ಪಡೆಯಲು ಆಧಾರ್ ಕಡ್ಡಾಯಗೊಳಿಸಿರುವ ಸರಕಾರದ ನಿರ್ಧಾರಕ್ಕೆ ಮಧ್ಯಂತರ ತಡೆಯಾಜ್ಞೆ ನೀಡಬೇಕೆಂದು ಕೋರಿ ಸುಪ್ರೀಂಕೋರ್ಟ್‌ನಲ್ಲಿ ಸಲ್ಲಿಸಿರುವ ಅರ್ಜಿ ವಿಚಾರಣೆ ನಡೆಸಿದ ಮುಖ್ಯ ನ್ಯಾಯಮೂರ್ತಿ ದೀಪಕ್ ಮಿಶ್ರ ನೇತೃತ್ವದ ನ್ಯಾಯಪೀಠವು, ಈ ವಿಷಯದಲ್ಲಿ ಸಂವಿಧಾನ ಪೀಠ ಮಾತ್ರ ಮಧ್ಯಂತರ ಆದೇಶ ಹೊರಡಿಸಬಹುದು. ಆದ್ದರಿಂದ ಆಧಾರ್ ಜೋಡಣೆ ಕಡ್ಡಾಯದ ಆದೇಶಕ್ಕೆ ತಡೆಯಾಜ್ಞೆ ನೀಡುವ ಉದ್ದೇಶದಿಂದ ಸಂವಿಧಾನ ಪೀಠವೊಂದನ್ನು ರಚಿಸುವ ಬಗ್ಗೆ ಮುಂದಿನ ವಾರ ನಿರ್ಧರಿಸಲಾಗುವುದು ಎಂದು ತಿಳಿಸಿದೆ.

ನ್ಯಾಯಮೂರ್ತಿ ಶ್ರೀಕೃಷ್ಣ ಆಯೋಗವು ದತ್ತಾಂಶ ಸುರಕ್ಷತೆ ಬಗ್ಗೆ ಶ್ವೇತಪತ್ರ ಹೊರಡಿಸಿದ್ದು, ಇದರಲ್ಲಿ ಕೆಲವು ಸಲಹೆಗಳಿರಬಹುದು. ಇದನ್ನು ಪರಿಶೀಲಿಸಲು ಸಮಯಾವಕಾಶದ ಅಗತ್ಯವಿದೆ. ಆದ್ದರಿಂದ ಪ್ರಕರಣದ ವಿಚಾರಣೆಯನ್ನು ಮುಂದಿನ ವರ್ಷದ ಫೆಬ್ರವರಿಗೆ ನಿಗದಿಗೊಳಿಸುವಂತೆ ಸರಕಾರವನ್ನು ಪ್ರತಿನಿಧಿಸಿದ ಅಟಾರ್ನಿ ಜನರಲ್ ಕೆ.ಕೆ.ವೇಣುಗೋಪಾಲ್ ಕೋರಿದರು.

ಈ ಸಂದರ್ಭ ಮಾತನಾಡಿದ ಅರ್ಜಿದಾರರ ಪರ ವಕೀಲ ಶ್ಯಾಮ್ ದಿವಾನ್, ಫೆಬ್ರವರಿಯವರೆಗೆ ಸಮಯಾವಕಾಶ ನೀಡುವ ಬಗ್ಗೆ ತಮ್ಮದೇನೂ ಅಭ್ಯಂತರವಿಲ್ಲ. ಆದರೆ ಅದುವರೆಗೆ ಆಧಾರ್ ಕಡ್ಡಾಯಗೊಳಿಸುವ ನಿರ್ಧಾರಕ್ಕೆ ಮಧ್ಯಂತರ ತಡೆಯಾಜ್ಞೆ ನೀಡಬೇಕು ಎಂದು ನ್ಯಾಯಾಲಯವನ್ನು ಒತ್ತಾಯಿಸಿದರು.

ಸಂವಿಧಾನ ಪೀಠವು ದಿಲ್ಲಿ-ಕೇಂದ್ರ ಸರಕಾರ ಪ್ರಕರಣದಲ್ಲಿ ಆಧಾರ್ ಜೋಡಣೆ ಕುರಿತ ವಿಚಾರಣೆ ನಡೆಸುತ್ತಿದ್ದು ವಿಚಾರಣೆ ಪೂರ್ಣಗೊಂಡ ಬಳಿಕ ಆಧಾರ್ ಜೋಡಣೆ ಕುರಿತ ಅರ್ಜಿಯ ವಿಚಾರಣೆ ನಡೆಸುವುದಾಗಿ ಸುಪ್ರೀಂಕೋರ್ಟ್ ತಿಳಿಸಿತು. ಪ್ರಸಕ್ತ ಬ್ಯಾಂಕ್ ಖಾತೆಗಳಿಗೆ ಆಧಾರ್ ಜೋಡಣೆಗೆ ಈ ವರ್ಷದ ಡಿಸೆಂಬರ್ 31 ಅಂತಿಮ ದಿನವಾಗಿದ್ದರೆ, ಮೊಬೈಲ್ ನಂಬರ್‌ಗೆ ಆಧಾರ್ ಜೋಡಣೆಗೆ 2018ರ ಫೆಬ್ರವರಿ 6 ಅಂತಿಮ ದಿನವಾಗಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X