Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಬೆಂಗಳೂರು
  3. ಕುವೆಂಪು ಸಾಹಿತ್ಯ ಬ್ರಹ್ಮ ಸಮಾಜದ...

ಕುವೆಂಪು ಸಾಹಿತ್ಯ ಬ್ರಹ್ಮ ಸಮಾಜದ ಪ್ರೇರಣೆ ಪಡೆದಿದೆ: ಮಲ್ಲೇಪುರಂ ಜಿ.ವೆಂಕಟೇಶ್

ವಾರ್ತಾಭಾರತಿವಾರ್ತಾಭಾರತಿ27 Nov 2017 7:51 PM IST
share

ಬೆಂಗಳೂರು, ನ.27: ಕುವೆಂಪು ಸಾಹಿತ್ಯವು ಬ್ರಹ್ಮ ಸಮಾಜದ ಪ್ರೇರಣೆ ಪಡೆದಿದೆ. ಹೀಗಾಗಿ ಬ್ರಹ್ಮ ಸಮಾಜದ ಸಿದ್ಧಾಂತದಡಿ ಅವರ ಸಾಹಿತ್ಯವನ್ನು ವಿಶ್ಲೇಷಿಸಿದರೆ ಹೊಸ ಹೊಳಹುಗಳು ದೊರಕಬಹುದೆಂದು ಕರ್ನಾಟಕ ಸಂಸ್ಕೃತ ವಿವಿ ವಿಶ್ರಾಂತ ಕುಲಪತಿ ಮಲ್ಲೇಪುರಂ ಜಿ. ವೆಂಕಟೇಶ್ ಅಭಿಪ್ರಾಯಪಟ್ಟಿದ್ದಾರೆ.

ಸೋಮವಾರ ಶೇಷಾದ್ರಿಪುರಂ ಶಿಕ್ಷಣ ಸಂಸ್ಥೆ ಹಾಗೂ ಬೆಂಗಳೂರು ಬ್ರಹ್ಮ ಸಮಾಜ ಸಂಸ್ಥೆಯ ಸಹಯೋಗದಲ್ಲಿ ಶೇಷಾದ್ರಿಪುರಂ ಕಾಲೇಜಿನಲ್ಲಿ ನಡೆದ ಸರ್.ಆರ್. ವೆಂಕಟರತ್ನಂ ನಾಯ್ಡು ಅವರ ಸಾಮಾಜಿಕ ಕೆಲಸಗಳ ಸಮಗ್ರ ಕೃತಿಯ 3 ಸಂಪುಟಗಳ ಲೋಕಾರ್ಪಣೆ ಕಾರ್ಯಕ್ರಮದಲ್ಲಿ ಭಾಗವಹಿಸಿ ಅವರು ಮಾತನಾಡಿದರು.

ಕುವೆಂಪು ಸಾಹಿತ್ಯದಲ್ಲಿ ಆನಂದ, ಚೈತನ್ಯ ಹಾಗೂ ಲೀಲೆಗಳ ಅಂಶಗಳನ್ನು ಗಮನಿಸಬಹುದು. ಇದು ರವೀಂದ್ರನಾಥ ಠಾಕೂರ್ ಅವರಿಂದ ಪ್ರೇರಿತವಾದ ಅಂಶಗಳು. ಅಲ್ಲದೆ ಜಡತ್ವ ಎಂಬುದು ಸುಳ್ಳು ಎಂಬ ಅವರ ಪರಿಕಲ್ಪನೆ ಸಿಕ್ಕಿದ್ದು ಕಲ್ಕತ್ತದ ಬ್ರಹ್ಮ ಸಮಾಜದ ಮೂಲಕವೇ ಆಗಿದೆ. ರವೀಂದ್ರನಾಥ ಠಾಕೂರ್ ಅವರ ಗೀತಾಂಜಲಿಯಲ್ಲಿ ಆನಂದ, ಸಂತೋಷದ ವಿಷಯಗಳನ್ನು ತಿಳಿಯಬಹುಪು ಅದು. ಆದರೆ ಕುವೆಂಪುರನ್ನು ಬ್ರಹ್ಮ ಸಮಾಜದ ಹಿನ್ನೆಲೆಯಲ್ಲಿ ಇನ್ನೂ ಅಧ್ಯಯನಗಳು ನಡೆದಿಲ್ಲ. ಈ ಬಗ್ಗೆ ವಿಮರ್ಶಕರು ಹೆಚ್ಚಿನ ಗಮನ ಕೊಡಬೇಕು ಎಂದು ಹೇಳಿದರು.

ಕಲ್ಕತ್ತಾದಲ್ಲಾದ ಸಂಪೂರ್ಣ ಪುನರುತ್ಥಾನದ ಕ್ರಾಂತಿಯು ಆಂಧ್ರ ಹಾಗೂ ಕರ್ನಾಟಕಕ್ಕೆ ಹಬ್ಬಿತು. ಕುವೆಂಪು ಅವರ ಬರವಣಿಗೆಯಲ್ಲಿ ಆನಂದ, ಚೈತನ್ಯ ಹಾಗೂ ಲೀಲೆಗಳ ವಿಚಾರಗಳನ್ನು ಕಾಣಬಹುದಾಗಿದ್ದು, ಇದು ಬ್ರಹ್ಮ ಸಮಾಜದ ಪರಿಕಲ್ಪನೆ. ಆದರೆ ಮೂಲತಃ ಇವೆಲ್ಲವೂ ಉಪನಿಷತ್‌ನಿಂದ ಹಾಗೂ ಕಲ್ಕತ್ತದ ಬ್ರಹ್ಮ ಸಮಾಜದ ಮೂಲಕ ಪ್ರೇರಿತವಾದ ಅಂಶಗಳು. ಕುವೆಂಪು ಅವರ ಬರವಣಿಗೆ, ಭಾವಗಳು ಬ್ರಹ್ಮ ಸಮಾಜದ ಪರಿಕಲ್ಪನೆಯನ್ನು ಪರೋಕ್ಷವಾಗಿ ಕಾಣಬಹುದು ಎಂದು ತಿಳಿಸಿದರು.

ಸುಪ್ರೀಂ ಕೋರ್ಟ್ ನಿವೃತ್ತ ಮುಖ್ಯ ನ್ಯಾಯಮೂರ್ತಿ ಎಂ.ಎನ್.ವೆಂಕಟಚಾಲಯ್ಯ ಮಾತನಾಡಿ, ಸಾಮಾಜಿಕ ಚಳವಳಿಗಳಲ್ಲಿ ಘರ್ಷಣೆಯೇ ಪ್ರಧಾನವಾಗಿದ್ದ ಕಾಲದಲ್ಲಿ ಆನಂದ, ಚೈತನ್ಯ ಮುಖ್ಯ ಎಂದು ವೆಂಕಟರತ್ನಂ ಪ್ರತಿಪಾದಿಸಿದರು. ವೆಂಕಟರತ್ನಂ ತಮ್ಮ ಬರವಣಿಗೆಗಳಲ್ಲಿ ಆನಂದವನ್ನು ಅನುಭವಿಸಿದರು ಎಂಬ ಸಂಗತಿ ಅವರ ಕೃತಿಗಳ ಮೂಲಕ ತಿಳಿಯುತ್ತದೆ. ವೆಂಕಟರತ್ನಂಗೆ ಆಗಿರುವ ಆನಂದ ಅವರ ಭಾಷೆಯಲ್ಲಿ ಪ್ರತೀತಗೊಳ್ಳುತ್ತಿದೆ ಎಂದರು.

ಶೇಷಾದ್ರಿಪುರಂ ಕಾಲೇಜಿನ ಗೌರವ ಕಾರ್ಯದರ್ಶಿ ಡಾ. ವೂಡೆ.ಪಿ. ಕೃಷ್ಣ ಮಾತನಾಡಿ, ಸಾಮಾಜಿಕ ಹೋರಾಟಗಾರ ಆರ್.ವೆಂಕಟರತ್ನಂ ನಾಯ್ಡು ಅಂದಿನ ಕಾಲದಲ್ಲಿ ಸಾಮಾಜಿಕ ಪಿಡುಗುಗಳ ವಿರುದ್ಧ ಧ್ವನಿ ಎತ್ತಿದವರು ಹಾಗೂ ಸಾರ್ವಜನಿಕ ಜೀವನದಲ್ಲಿ ಪರಿಶುದ್ಧ ಜೀವನ ಶೈಲಿ ಹೇಗೆ ಸಾಧ್ಯ ಎಂಬುದನ್ನು ತೋರಿಸಿಕೊಟ್ಟವರು. ಹೀಗಾಗಿ ಇಂದಿನ ಯುವ ಜನತೆ ವೆಂಕಟರತ್ನಂ ಜೀವನ ಚರಿತ್ರೆುಂದ ತಿಳಿದುಕೊಳ್ಳಬೇಕಿದೆ ಎಂದು ಅಭೊಪ್ರಾಯಿಸಿದರು.

ಕಾರ್ಯಕ್ರಮದಲ್ಲಿ ಬೆಂಗಳೂರು ಬ್ರಹ್ಮ ಸಮಾಜದ ಕಾರ್ಯದರ್ಶಿ ಡಬ್ಲು.ಎಚ್.ದೇವಕುಮಾರ್, ಕರ್ನಾಟಕ ಸಂಸ್ಕೃತಿ ವಿವಿ ಸಹಾಯಕ ಪ್ರಾಧ್ಯಾಪಕ ಡಾ.ವಿನಯ್, ಕಾಲೇಜು ಪ್ರಾಂಶುಪಾಲೆ ಡಾ.ಅನುರಾಧ ರಾಯ್ ಮತ್ತಿತರರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X