ತಾನು ಜಯಲಲಿತಾ ಪುತ್ರಿ ಎಂದ ಮಹಿಳೆ ಸಲ್ಲಿಸಿದ ಮನವಿ ತಿರಸ್ಕರಿಸಿದ ಸುಪ್ರೀಂ

ಹೊಸದಿಲ್ಲಿ, ನ. 27: ತಮಿಳುನಾಡಿನ ಮುಖ್ಯಮಂತ್ರಿ ದಿವಂಗತ ಜೆ. ಜಯಲಲಿತಾ ಅವರ ಪುತ್ರಿ ತಾನೆಂದು ಪ್ರತಿಪಾದಿಸಿ ಮಹಿಳೆಯೋರ್ವರು ಸಲ್ಲಿಸಿದ್ದ ಮನವಿಯನ್ನು ಸುಪ್ರೀಂ ಕೋರ್ಟ್ ಸೋಮವಾರ ತಿರಸ್ಕರಿಸಿದೆ.
ಜೆ. ಜಯಲಲಿತಾ ತನ್ನ ತಾಯಿ ಎಂದು ಸಾಬೀತುಪಡಿಸಲು ಡಿಎನ್‌ಎ ಪರೀಕ್ಷೆ ನಡೆಸುವಂತೆ ಕೋರಿ ಬೆಂಗಳೂರಿನ 37 ವರ್ಷದ ಮಹಿಳೆ ಮನವಿ ಸಲ್ಲಿಸಿದ್ದರು.
ಆದಾಗ್ಯೂ, ಮುಖ್ಯ ನ್ಯಾಯಮೂರ್ತಿಗಳಾದ ಎಂ.ಬಿ. ಲೋಕುರು ಹಾಗೂ ದೀಪಕ್ ಗುಪ್ತಾ ಅವರನ್ನೊಳಗೊಂಡ ಪೀಠ ಡಿಎನ್‌ಎ ಪರೀಕ್ಷೆಯ ಮನವಿಯನ್ನು ಕೂಡ ತಳ್ಳಿ ಹಾಕಿದೆ.
ದೂರುದಾರಳು ಉಚ್ಚ ನ್ಯಾಯಾಲಯ ಸಂಪರ್ಕಿಸುವ ಸ್ವಾತಂತ್ರ್ಯ ಇದೆ ಎಂದು ನ್ಯಾಯಾಲಯ ಹೇಳಿದೆ. ಮಹಿಳೆ ನವೆಂಬರ್ 22ರಂದು ಸುಪ್ರೀಂ ಕೋರ್ಟ್‌ಗೆ ಈ ಬಗ್ಗೆ ಮನವಿ ಸಲ್ಲಿಸಿದ್ದರು.
Next Story





