Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಸಾವಯವ ಬೆಳೆ-ಸಿರಿಧಾನ್ಯಗಳು ಆರೋಗ್ಯಕ್ಕೆ...

ಸಾವಯವ ಬೆಳೆ-ಸಿರಿಧಾನ್ಯಗಳು ಆರೋಗ್ಯಕ್ಕೆ ಉತ್ತಮ: ಸಚಿವ ಕೃಷ್ಣ ಭೈರೇಗೌಡ

ವಾರ್ತಾಭಾರತಿವಾರ್ತಾಭಾರತಿ27 Nov 2017 8:18 PM IST
share
ಸಾವಯವ ಬೆಳೆ-ಸಿರಿಧಾನ್ಯಗಳು ಆರೋಗ್ಯಕ್ಕೆ ಉತ್ತಮ: ಸಚಿವ ಕೃಷ್ಣ ಭೈರೇಗೌಡ

ಬೆಳಗಾವಿ, ನ.27: ಸಾವಯವ ಬೆಳೆಗಳು ಹಾಗೂ ಸಿರಿಧಾನ್ಯಗಳನ್ನು ನಾವು ಆಹಾರಕ್ಕಾಗಿ ಹೆಚ್ಚಾಗಿ ಬಳಕೆ ಮಾಡುವುದರಿಂದ ಆರೋಗ್ಯವನ್ನು ಉತ್ತಮವಾಗಿಟ್ಟು ಕೊಳ್ಳಲು ಸಾಧ್ಯವಾಗುತ್ತದೆ ಎಂದು ಕೃಷಿ ಸಚಿವ ಕೃಷ್ಣ ಭೈರೇಗೌಡ ಹೇಳಿದ್ದಾರೆ.

ಇಲ್ಲಿನ ಶಿವಬಸವ ನಗರದ ಎಸ್.ಜಿ.ಬಾಳೇಕುಂದ್ರಿ ತಾಂತ್ರಿಕ ಮಹಾವಿದ್ಯಾಲಯದ ಆವರಣದಲ್ಲಿ ಜಿಲ್ಲಾ ಪಂಚಾಯತ್ ಹಾಗೂ ಬೆಳಗಾವಿ, ಬಾಗಲಕೋಟೆ, ವಿಜಯಪುರ, ಉತ್ತರ ಕನ್ನಡ ಜಿಲ್ಲೆಗಳ ಕೃಷಿ ಇಲಾಖೆ ಮತ್ತು ಜಿಲ್ಲಾ ಪ್ರಾಂತೀಯ ಸಹಕಾರ ಕೃಷಿಕರ ಸಂಘಗಳ ಆಶ್ರಯದಲ್ಲಿ ಆಯೋಜಿಸಿದ್ದ 'ಸಾವಯವ ಮತ್ತು ಸಿರಿಧಾನ್ಯಗಳ ವಾಣಿಜ್ಯ ಮೇಳ'ವನ್ನು ಉದ್ಘಾಟಿಸಿ ಅವರು ಮಾತನಾಡಿದರು.

ರೈತರು ಸಾವಯವ ಬೆಳೆಗಳನ್ನು ಹೆಚ್ಚಾಗಿ ಬೆಳೆಯುವುದರಿಂದ ಪರಿಸರ ಸಂರಕ್ಷಣೆ ಹಾಗೂ ಮಣ್ಣಿನ ಗುಣಮಟ್ಟವನ್ನು ಕಾಪಾಡಬಹುದು. ಸಾವಯವ ಬೆಳೆಗಳಿಗೆ ಮಾರುಕಟ್ಟೆಯಲ್ಲಿ ಬೇಡಿಕೆ ಇದೆ. ಆದರೆ, ಬೆಳೆದ ಬೆಳೆಗಳನ್ನು ರೈತರೆ ಮುತುವರ್ಜಿ ವಹಿಸಿ ಮಾರಾಟ ಮಾಡಬೇಕಾಗಿದೆ ಎಂದು ಅವರು ಸಲಹೆ ನೀಡಿದರು.

ಎಚ್.ಕೆ.ಪಾಟೀಲ್ ಕೃಷಿ ಸಚಿವರಾಗಿದ್ದಾಗ ರಾಜ್ಯದಲ್ಲಿ ಸಾವಯವ ನೀತಿಯನ್ನು ಜಾರಿಗೆ ತರಲಾಗಿತ್ತು. ಸದ್ಯ ಸಾವಯವ ಕೃಷಿಯನ್ನು ಹೆಚ್ಚಿನ ಪ್ರಮಾಣದಲ್ಲಿ ಕೈಗೊಳ್ಳುವ ರಾಜ್ಯಗಳಲ್ಲಿ ಕರ್ನಾಟಕ 3ನೆ ಸ್ಥಾನದಲ್ಲಿದೆ ಎಂದರು.

ಬೆಳೆದ ಸಾವಯವ ಬೆಳಗಳನ್ನು ರೈತರೆ ಕ್ರೋಢೀಕರಿಸಿ ನೇರವಾಗಿ ಕಂಪೆನಿಗಳಿಗೆ ಮಾರಾಟ ಮಾಡುವ ವ್ಯವಸ್ಥೆಯನ್ನು ರಾಜ್ಯ ಸರಕಾರ ಮಾಡಿಕೊಟ್ಟಿದೆ. ರಾಜ್ಯದಲ್ಲಿ 14 ಸಾವಯವ ಬೆಳೆಗಾರರ ಪ್ರಾಂತೀಯ ಒಕ್ಕೂಟಗಳನ್ನು ರಚಿಸಲಾಗಿದ್ದು, ಕಂಪೆನಿಗಳು ಹಾಗೂ ರೈತರನ್ನು ಬೆಸೆಯುವ ಕೆಲಸ ಮಾಡಲಾಗಿದೆ. ಇದರಿಂದ ರೈತರಿಗೆ ಅತ್ಯಂತ ಅನುಕೂಲವಾಗುತ್ತಿದೆ ಎಂದು ಹೇಳಿದರು.

ಸಿರಿಧಾನ್ಯಗಳಲ್ಲಿ ಹೆಚ್ಚಿನ ಪೌಷ್ಠಿಕಾಂಶ ಇರುತ್ತದೆ ಹಾಗೂ ಸಿರಿಧಾನ್ಯಗಳು ಆರೋಗ್ಯಕ್ಕೂ ಉತ್ತಮ. ಆದುದರಿಂದ, ರೈತರು ಸಿರಿಧಾನ್ಯಗಳನ್ನು ಹೆಚ್ಚಾಗಿ ಬೆಳೆಯಬೇಕು ಹಾಗೂ ಸಾರ್ವಜನಿಕರು ಸಿರಿಧಾನ್ಯಗಳಿಂದ ತಯಾರಿಸಿದ ಆಹಾರ ಪದಾರ್ಥಗಳನ್ನು ಹೆಚ್ಚು ಉಪಯೋಗಿಸಬೇಕು ಎಂದು ಸಲಹೆ ನೀಡಿದರು.

ರಾಜ್ಯದ ಸಾವಯವ ಬೆಳೆಗಳು ಹಾಗೂ ಸಿರಿಧಾನ್ಯಗಳನ್ನು ಇತರರಿಗೆ ಪರಿಚಯಿಸುವ ನಿಟ್ಟಿನಲ್ಲಿ ಬೆಂಗಳೂರಿನಲ್ಲಿ ಜನವರಿ ತಿಂಗಳಲ್ಲಿ ಅಂತಾರಾಷ್ಟ್ರೀಯ ಮಟ್ಟದ ಸಾವಯವ ಹಾಗೂ ಸಿರಿಧಾನ್ಯಗಳ ಮೇಳವನ್ನು ಆಯೋಜಿಸಲಾಗುತ್ತಿದೆ. ದೇಶ, ವಿದೇಶದ 300 ದೊಡ್ಡ ಕಂಪೆನಿಗಳು ಈ ಮೇಳದಲ್ಲಿ ಭಾಗವಹಿಸಲಿವೆ ಎಂದು ಮಾಹಿತಿ ನೀಡಿದರು.

ರಾಜ್ಯವನ್ನು ದೇಶದಲ್ಲೇ ಸಾವಯವ ಮತ್ತು ಸಿರಿಧಾನ್ಯಗಳ ಮುಖ್ಯ ಕೇಂದ್ರವನ್ನಾಗಿಸಬೇಕು. ರಾಜ್ಯದಲ್ಲಿ ಉತ್ಪಾದನೆಯಾಗುವ ಸಾವಯವ ಬೆಳೆ ಮತ್ತು ಸಿರಿಧಾನ್ಯಗಳನ್ನು ಬೇರೆ ರಾಜ್ಯಗಳಿಗೆ ಹಾಗೂ ವಿದೇಶಕ್ಕೆ ರಪ್ತು ಮಾಡಬೇಕೆಂಬುದು ರಾಜ್ಯ ಸರಕಾರದ ಉದ್ದೇಶವಾಗಿದೆ ಎಂದು ಕೃಷ್ಣಭೈರೇಗೌಡ ವಿವರಿಸಿದರು.

ವಿಧಾನ ಪರಿಷತ್ ಸದಸ್ಯ ಮಹಾಂತೇಶ ಕವಟಗಿಮಠ ಮಾತನಾಡಿ, ಆರೋಗ್ಯಯುತ ಸಮಾಜ ನಿರ್ಮಾಣಕ್ಕೆ ಸಾವಯವ ಬೆಳೆ ಹಾಗೂ ಸಿರಿಧಾನ್ಯಗಳ ಸೇವನೆ ಅತ್ಯಂತ ಅವಶ್ಯಕವಾಗಿದೆ. ಸಾವಯವ ಬೆಳೆಗಳನ್ನು ಬೆಳೆಯುವ ರೈತರಿಗೆ ಉತ್ತಮ ಮಾರುಕಟ್ಟೆ ದೊರೆತರೆ ಲಾಭವಾಗುತ್ತದೆ. ಸಾವಯವ ಕೃಷಿ ಉತ್ತಮ ಕೃಷಿ ವ್ಯವಸ್ಥೆಗೆ ನಾಂದಿಯಾಗಲಿ ಹಾಗೂ ಯುವಜನಾಂಗಕ್ಕೆ ಮಾದರಿಯಾಗಲಿ ಎಂದು ಹಾರೈಸಿದರು.

ಕಾರ್ಯಕ್ರಮದಲ್ಲಿ ಕೃಷಿ ಇಲಾಖೆಯ ಅಧಿಕಾರಿಗಳಾದ ಅಶೋಕ ತುಬಚಿ ಹಾಗೂ ಬಿ.ಸೋಮಶೇಖರ, ಜಿಲ್ಲಾ ಜಂಟಿ ಕೃಷಿ ನಿರ್ದೇಶಕ ವಿ.ಜೆ.ಪಾಟೀಲ್, ಕೃಷಿ ಇಲಾಖೆಯ ಆಯುಕ್ತ ಸತೀಶ್, ನಿರ್ದೇಶಕ ಬಿ.ವೈ.ಶ್ರೀನಿವಾಸ್, ಧಾರವಾಡದ ಕೃಷಿ ವಿಶ್ವವಿದ್ಯಾನಿಲಯದ ವಿಸ್ತರಣಾಧಿಕಾರಿ ಡಾ.ಬಸಪ್ಪಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X