ಅಸಭ್ಯ ವರ್ತನೆ: ಎಸಿಬಿ ವಿರುದ್ಧ ಯುವತಿ ದೂರು
ಬೆಂಗಳೂರು, ನ.27: ದೌರ್ಜನ್ಯ ಪ್ರಕರಣದ ಸಂಬಂಧ ವಿಚಾರಣೆ ನಡೆಸುತ್ತಿದ್ದ ಯಶವಂತಪುರ ಉಪಭಾಗದ ಎಸಿಪಿ ರವಿ ಪ್ರಸಾದ್ ಅನುಚಿತವಾಗಿ ವರ್ತಿಸಿದ್ದಾರೆ ಎಂದು ಯುವತಿಯೊಬ್ಬರು ನಗರ ಪೊಲೀಸ್ ಆಯುಕ್ತರಿಗೆ ದೂರು ನೀಡಿದ್ದಾರೆ.
ದೂರನ್ನು ಸ್ವೀಕರಿಸಿರುವ ಆಯುಕ್ತ ಸುನೀಲ್ ಕುಮಾರ್, ಅವರು ಯುವತಿಯ ದೂರಿನ ಬಗ್ಗೆ ತನಿಖೆ ನಡೆಸಿ ವರದಿ ನೀಡುವಂತೆ ಉತ್ತರ ವಲಯ ಡಿಸಿಪಿ ಚೇತನ್ ಸಿಂಗ್ ರಾಥೋಡ್ ಅವರಿಗೆ ಸೂಚನೆ ನೀಡಿದ್ದಾರೆ.
ನಾಲ್ಕು ದಿನಗಳ ಹಿಂದೆ ಹನುಮಂತ, ರವಿ ಎಂಬವರು ನನ್ನ ಮೈಕೈ ಮುಟ್ಟಿ ಅಸಭ್ಯವಾಗಿ ವರ್ತಿಸಿದ್ದು, ಈ ಸಂಬಂಧ ಸೋಲದೇವನಹಳ್ಳಿ ಠಾಣೆಯಲ್ಲಿ ದೂರು ದಾಖಲಿಸಲು ಯುವತಿ ತೆರಳಿದ ವೇಳೆ ವಿಚಾರಣೆ ನೆಪದಲ್ಲಿ ಎಸಿಬಿ ಅಸಭ್ಯವಾಗಿ ವರ್ತಿಸಿರುವುದಾಗಿ ತಿಳಿದು ಬಂದಿದೆ.
ತನಿಖೆ: ಯಶವಂತಪುರ ಎಸಿಪಿ ವಿರುದ್ಧ ಬಂದಿರುವ ಆರೋಪದ ಬಗ್ಗೆ ತನಿಖೆ ನಡೆಸಲಾಗುತ್ತಿದೆ. ಈ ಸಂಬಂಧ ತನಿಖೆ ನಡೆಸಿ ಪೊಲೀಸ್ ಆಯುಕ್ತರಿಗೆ ವರದಿ ನೀಡಲಾಗುವುದು ಎಂದು ಉಪ ವಿಭಾಗದ ಡಿಸಿಪಿ ಚೇತನ್ ಸಿಂಗ್ ರಾಥೋಡ್ ತಿಳಿಸಿದ್ದಾರೆ.
Next Story





