Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಹೆದ್ದಾರಿ ದುರಸ್ತಿಗೆ ಒತ್ತಾಯಿಸಿ...

ಹೆದ್ದಾರಿ ದುರಸ್ತಿಗೆ ಒತ್ತಾಯಿಸಿ ಹೊನ್ನಕಟ್ಟೆಯಲ್ಲಿ ಪ್ರತಿಭಟನೆ

ಟೋಲ್ ಸ್ಥಗಿತಗೊಳಿಸಲು ಯುವ ಕಾಂಗ್ರೆಸ್ ಆಗ್ರಹ

ವಾರ್ತಾಭಾರತಿವಾರ್ತಾಭಾರತಿ27 Nov 2017 10:38 PM IST
share
ಹೆದ್ದಾರಿ ದುರಸ್ತಿಗೆ ಒತ್ತಾಯಿಸಿ ಹೊನ್ನಕಟ್ಟೆಯಲ್ಲಿ ಪ್ರತಿಭಟನೆ

ಮಂಗಳೂರು, ನ.27: ರಾ.ಹೆ. 66ರಲ್ಲಿ ಹೆದ್ದಾರಿ ಪ್ರಾಧಿಕಾರದ ಕಾನೂನಿನಂತೆ ಯಾವುದೇ ಸೌಲಭ್ಯಗಳಿಲ್ಲ. ಹೆದ್ದಾರಿ ಹದಗೆಟ್ಟು ಪ್ರಾಣ ಹಾನಿ ಸಂಭವಿಸುತ್ತಿದೆ. ಹೀಗಿರುವಾಗ ಮೂರು ಕಡೆಗಳಲ್ಲಿ ಟೋಲ್ ಪಡೆಯುತ್ತಿರುವುದು ಸರಿಯಲ್ಲ. ಹಾಗಾಗಿ ತಕ್ಷಣ ಸುರತ್ಕಲ್, ಬಂಟ್ವಾಳ, ಟೋಲ್ ಕೇಂದ್ರವನ್ನು ಮುಚ್ಚಬೇಕು ಶಾಸಕ ಮೊಯ್ದಿನ್ ಬಾವಾ ಆಗ್ರಹಿಸಿದರು.

ರಾ.ಹೆ.66ರ ಹೊನ್ನಕಟ್ಟೆ, ಬೈಕಂಪಾಡಿ, ಕೂಳೂರು ಮತ್ತಿತರೆಡೆ ಹೊಂಡದಿಂದ ತುಂಬಿರುವ ಹೆದ್ದಾರಿಯನ್ನು ದುರಸ್ತಿಪಡಿಸುವಂತೆ ಆಗ್ರಹಿಸಿ ಮಂಗಳೂರು ಉತ್ತರ ಯುವ ಕಾಂಗ್ರೆಸ್ ಅಧ್ಯಕ್ಷ ಗಿರೀಶ್ ಆಳ್ವ ನೇತೃತ್ವದಲ್ಲಿ ಹೊನ್ನಕಟ್ಟೆಯಲ್ಲಿ ಸೋಮವಾರ ನಡೆದ ಪ್ರತಿಭಟನೆಯಲ್ಲಿ ಭಾಗವಹಿಸಿ ಅವರು ಮಾತನಾಡಿದರು.

ರಸ್ತೆಯನ್ನು ಅವೈಜ್ಞಾನಿಕವಾಗಿ ನಿರ್ಮಿಸಲಾಗಿದೆ. ಹೆದ್ದಾರಿಯಲ್ಲಿ 12 ಕಿ.ಮೀ ಇರುವ ಮಂಗಳೂರು ತಲುಪಲು ಒಂದೆರಡು ಗಂಟೆ ಪಡೆಯುತ್ತದೆ ಎಂದಾದರೆ ವೇಗದ ಹೆದ್ದಾರಿಗಳು ಇರುವುದು ಯಾಕೆ? ಮಳೆ ನಿಂತು ಇಷ್ಟು ದಿನವಾದರೂ ಹೊಂಡ ಮುಚ್ಚುವಲ್ಲಿ ಇಲಾಖೆ ವಿಫಲವಾಗಿದೆ. ಕೇಂದ್ರ ಸರಕಾರ ಹಾಗು ಸಂಸದರ ನಿರ್ಲಕ್ಷ ಇದರಲ್ಲಿ ಎದ್ದು ಕಾಣುತ್ತದೆ ಎಂದು ಶಾಸಕ ಮೊಯ್ದಿನ್ ಬಾವಾ ಆರೋಪಿಸಿದರು.

ಜಿಲ್ಲಾ ಯುವ ಕಾಂಗ್ರೆಸ್ ಅಧ್ಯಕ್ಷ ಮಿಥುನ್ ರೈ ಮತ್ತು ರಾಜ್ಯ ಕಾಂಗ್ರೆಸ್ ಮಹಿಳಾ ಕಾರ್ಯದರ್ಶಿ ಪ್ರತಿಭಾ ಕುಳಾಯಿ ಮಾತನಾಡಿ ಸಂಸದ ನಳಿನ್ ಕುಮಾರ್ ಕಟೀಲ್ ನಂಬರ್ ಒನ್ ಸಂಸದ ಎಂದುಕೊಳ್ಳುತ್ತಾರೆ. ಆದರೆ ಅವರ ಕ್ಷೇತ್ರದ ಹೆದ್ದಾರಿ ದುರವಸ್ಥೆ ಗಮನಿಸಿದಾಗ ಆ ಸ್ಥಾನ ಸಿಕ್ಕಿದ ಬಗ್ಗೆ ಸಂಶಯ ಕಾಡುತ್ತದೆ. ಇನ್ನು ಮಾತನಾಡಿದರೆ ಬೆಂಕಿ ಕೊಡುತ್ತೇವೆ ಎಂದು ಹೇಳುತ್ತಾರೆ. ಇದರ ಬದಲು ರಸ್ತೆ ದುರಸ್ತಿಗೆ ಶ್ರಮ ವಹಿಸಿ ಸಾರ್ವಜನಿಕರಿಗೆ ಉಪಕಾರ ಮಾಡಿದರೆ ಮತ ಹಾಕಿದ ಮತದಾರನಿಗೂ ನೆಮ್ಮದಿಯಾಗುತ್ತದೆ ಎಂದು ವ್ಯಂಗ್ಯವಾಡಿದರು.

ಈ ಸಂದರ್ಭ ಕಾಮಗಾರಿ ಪೂರ್ಣವಾಗುವವರೆಗೆ ಟೋಲ್ ರದ್ದು ಪಡಿಸಲು ಒತ್ತಾಯಿಸಿ ಯುವ ಕಾಂಗ್ರೆಸ್ ಮನವಿ ಸಲ್ಲಿಸಿತಲ್ಲದೆ ಇಲಾಖೆ ಕ್ರಮ ಕೈಗೊಳ್ಳದಿದ್ದರೆ ಟೋಲ್ ಮುಂಭಾಗ ಪ್ರತಿಭಟನೆಯ ಎಚ್ಚರಿಕೆಯನ್ನು ನೀಡಿತು.

ಪ್ರತಿಭಟನೆಯಲ್ಲಿ ಮುಖಂಡರಾದ ಉತ್ತಮ್ ಆಳ್ವ, ಹಬೀಬ್, ಸುಹೈಲ್, ಶೊಯಿಬ್, ರವಿಶ್ರೀಯಾನ್, ಶಕುಂತಳಾ ಕಾಮತ್, ಪುರುಷೋತ್ತಮ್ ಚಿತ್ರಾಪುರ, ಕುಮಾರ್ ಮೆಂಡನ್, ಗುಲ್ಜಾರ್ ಬಾನು, ಜೈಸನ್, ಅಕ್ಬರ್ ಮುಕ್ಕ, ಪುರುಷೋತ್ತಮ್ ಮುಕ್ಕ, ಇಲ್ಯಾಸ್, ಹರೀಶ್ ಬಂಗೇರ, ರಾಜೇಶ್ ಕುಳಾಯಿ, ಸಚಿನ್ ಅಡಪ, ಅಶ್ರಫ್ ಅಡ್ಯಾರ್,ಅದ್ದು ಜಲೀಲ್, ಮಲ್ಲಿಕಾರ್ಜುನ್, ಶ್ರೀಧರ್ ಪಂಜ, ರೂಪೇಶ್ ರೈ, ವರುಣ್ ಅಂಬಟ್, ಆನಂದ್ ಅಮೀನ್, ರೆಹಮಾನ್ ಕುಂಜತ್ತಬೈಲ್, ಆಲಿ ಕೂಳೂರು ಮತ್ತಿತರರು ಉಪಸ್ಥಿತರಿದ್ದರು.

ಹೆದ್ದಾರಿ ತಡೆ ನಡೆಸಿದ ಪಕ್ಷದ ಕಾರ್ಯಕರ್ತರು ಕ್ರಿಕೆಟ್ ಆಡುವ ಮೂಲಕ ತಮ್ಮ ಆಕ್ರೋಶ ವ್ಯಕ್ತ ಪಡಿಸಿದರು. ಹೆದ್ದಾರಿ ಅಧಿಕಾರಿಗಳು ಸ್ಥಳಕ್ಕೆ ಆಗಮಿಸುವವರೆಗೆ ಪ್ರತಿಭಟನೆ ನಡೆಸಲಾಯಿತು. ಹೆದ್ದಾರಿ ಇಲಾಖೆಯ ಇಂಜಿನಿಯರ್ ಅಜಿತ್ ಸ್ಥಳಕ್ಕೆ ಆಗಮಿಸಿ ರಸ್ತೆ ದುರಸ್ತಿಗೆ 8 ಕೋ.ರೂ ಬಿಡುಗಡೆಯಾಗಿ ಟೆಂಡರ್ ಆಗಿದ್ದು ಡಿ.15ರ ಒಳಗಾಗಿ ಗುತ್ತಿಗೆದಾರರು ಕಾಮಗಾರಿ ಆರಂಭಿಸಲಿದ್ದಾರೆ ಎಂದು ಭರವಸೆ ನೀಡಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X