Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಬೆಂಗಳೂರು
  3. ಉಡುಪಿಯ ಧರ್ಮ ಸಂಸದ್ ಕೋಮುವಾದಿಗಳ...

ಉಡುಪಿಯ ಧರ್ಮ ಸಂಸದ್ ಕೋಮುವಾದಿಗಳ ಸಮ್ಮೇಳನ: ಮಾವಳ್ಳಿ ಶಂಕರ್

ಪೇಜಾವರ ಶ್ರೀ ಪ್ರತಿಕೃತಿ ದಹಿಸಿ ದಲಿತ ಸಂಘಟನೆಗಳ ಆಕ್ರೋಶ

ವಾರ್ತಾಭಾರತಿವಾರ್ತಾಭಾರತಿ29 Nov 2017 7:02 PM IST
share
ಉಡುಪಿಯ ಧರ್ಮ ಸಂಸದ್ ಕೋಮುವಾದಿಗಳ ಸಮ್ಮೇಳನ: ಮಾವಳ್ಳಿ ಶಂಕರ್

ಬೆಂಗಳೂರು, ನ. 29: ‘ಧರ್ಮಸಂಸದ್’ನಲ್ಲಿ ಸಂವಿಧಾನ ವಿರೋಧಿ ಹೇಳಿಕೆ ನೀಡಿದ್ದಾರೆಂದು ಆರೋಪಿಸಿ ಉಡುಪಿಯ ಪೇಜಾವರ ಮಠದ ವಿಶ್ವೇಶ ತೀರ್ಥ ಸ್ವಾಮೀಜಿ ವಿರುದ್ಧ ಪ್ರತಿಭಟನೆ ನಡೆಸಿದ ಕರ್ನಾಟಕ ರಾಜ್ಯ ದಲಿತ ಸಂಘಟನೆಗಳ ಒಕ್ಕೂಟದ ಕಾರ್ಯಕರ್ತರು, ಪೇಜಾವರ ಶ್ರೀಯವರ ಪ್ರತಿಕೃತಿ ದಹಿಸಿ  ಆಕ್ರೋಶ ವ್ಯಕ್ತಪಡಿಸಿದ್ದಾರೆ.

‘ಕೋಮುವಾದಿಗಳನ್ನು ಪ್ರಚೋದಿಸಿ ದೇಶದಲ್ಲಿ ಅಶಾಂತಿಯ ವಾತಾವರಣ ಸೃಷ್ಟಿಸುತ್ತಿದ್ದು, ಜಾತ್ಯಾತೀತ ವ್ಯವಸ್ಥೆಯನ್ನು ಟೀಕಿಸಿ ಏಕರೂಪ ನಾಗರಿಕ ಸಂಹಿತೆ ಜಾರಿಗೆ ಆಗ್ರಹಿಸುತ್ತಿರುವ ಪೇಜಾವರ ಮಠದ ವಿಶ್ವೇಶ ತೀರ್ಥ ಸ್ವಾಮಿಯನ್ನು ಬಂಧಿಸಬೇಕು’ ಎಂದು ಪ್ರತಿಭಟನಕಾರರು ಒತ್ತಾಯಿಸಿದರು.

ಈ ವೇಳೆ ಮಾತನಾಡಿದ ವಿಚಾರವಾದಿ, ನಟ ಪ್ರೊ.ಜಿ.ಕೆ.ಗೋವಿಂದರಾವ್, ‘ಖಾವಿ ಹಾಕಿಕೊಂಡರೆ ಪೂರ್ಣ ಜ್ಞಾನಿ ಎಂದು ಸಂಭ್ರಮಿಸುವ ಉಡುಪಿಯ ಪೇಜಾವರ ಮಠದ ವಿಶ್ವೇಶ ತೀರ್ಥ ಸ್ವಾಮೀಜಿ ಓರ್ವ ಅಜ್ಞಾನಿ’ ಎಂದು ಟೀಕಿಸಿದರು.

‘ಸಂವಿಧಾನ ಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ್ ಅವರ ಜೀವನ ಮತ್ತು ಸಾಧನೆಯನ್ನು ಸರಿಯಾಗಿ ಓದದೆ ಅಂಬೇಡ್ಕರ್ ಅವರ ಬಗ್ಗೆ ಮಾತನಾಡುವುದು ತಪ್ಪು. ನಮ್ಮ ದೇಶಕ್ಕಿರುವುದು ಒಂದು ಧರ್ಮ ಅದು ‘ಪ್ರಜಾತಂತ್ರ’, ದೇಶಕ್ಕಿರುವುದು ಒಂದೇ ಧರ್ಮಗ್ರಂಥ ಅದು ‘ಸಂವಿಧಾನ’ ಎಂದು ಹೇಳಿದರು.

‘ಮೈಸೂರಿನಲ್ಲಿ ನಡೆಸಿದ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದಲ್ಲಿ ಪ್ರೊ. ಚಂದ್ರಶೇಖರ್ ಪಾಟೀಲ(ಚಂಪಾ) ಅವರ ಭಾಷಣ ರಾಜಕೀಯ ಎನ್ನುವುದಾದರೆ, ಉಡುಪಿಯಲ್ಲಿ ನಡೆದ ಧರ್ಮ ಸಂಸದ್ ಸಮಾವೇಶದಲ್ಲಿ ಸಂಘ ಪರಿವಾರದ ಪರವಾಗಿ ಮಾತನಾಡಿದ ಪೇಜಾವರ ಶ್ರೀಗಳದ್ದು ರಾಜಕೀಯ ಭಾಷಣವಲ್ಲವೇ? ಎಂದು ಅವರು ಪ್ರಶ್ನಿಸಿದರು.

ರಾಜ್ಯದಲ್ಲಿ ಬಿಜೆಪಿ ಸರಕಾರವನ್ನು ಅಧಿಕಾರಕ್ಕೆ ತರುವುದು ವಿಶ್ವೇಶ ತೀರ್ಥ ಸ್ವಾಮೀಜಿಯವರ ಹುನ್ನಾರ ಎಂದು ಆರೋಪಿಸಿದ ಗೋವಿಂದರಾವ್, ಕಾನೂನಿಗೆ ವಿರುದ್ಧವಾಗಿ ಮನೆಗಳಲ್ಲಿ ಆಯುಧಗಳನ್ನಿಟ್ಟುಕೊಳ್ಳಬೇಕೆಂದು ಹೇಳುವವರನ್ನು ಕೂಡಲೇ ಬಂಧಿಸಬೇಕು ಎಂದು ಒತ್ತಾಯಿಸಿದರು.

ದಸಂಸ ಪ್ರಧಾನ ಸಂಚಾಲಕ ಮಾವಳ್ಳಿ ಶಂಕರ್ ಮಾತನಾಡಿ, ಗೋ.ಮಧುಸೂದನ್ ಹೇಳಿಕೆ ಬಳಿಕ ಪೇಜಾವರ ಶ್ರೀಯವರು ಸಂವಿಧಾನ ವಿರೋಧಿ ಹೇಳಿಕೆ ನೀಡಿದ್ದಾರೆ. ಇತ್ತೀಚೆಗೆ ಉಡುಪಿಯಲ್ಲಿ ನಡೆದ ಧರ್ಮ ಸಂಸದ್ ಎಂಬುದು ವಾಸ್ತವದಲ್ಲಿ ‘ಕೋಮುವಾದಿಗಳ ಸಮ್ಮೇಳನ’ ಎಂದು ವ್ಯಂಗ್ಯವಾಡಿದರು.

ದಸಂಸ ಸಂಚಾಲಕ ಲಕ್ಷ್ಮಿ ನಾರಾಯಣ ನಾಗವಾರ ಮಾತನಾಡಿ, ‘ನಾವೆಲ್ಲ ಹಿಂದೂಗಳು ನಾವೆಲ್ಲ ಒಂದು ಎಂದು ಹೇಳುವ ಪೇಜಾವರ ಶ್ರೀಯವರು, ಅಸ್ಪೃಶ್ಯತೆ ನಿವಾರಣೆಯಾಗಬೇಕೆಂದು ಹೇಳುತ್ತಾರೆ. ಮತ್ತೊಂದು ಕಡೆ ಅಂಬೇಡ್ಕರ್ ಬರೆದ ಸಂವಿಧಾನವನ್ನು ಬದಲಾವಣೆ ಮಾಡಬೇಕು ಎನ್ನುತ್ತಾರೆ. ಶ್ರೀಗಳ ದ್ವಂದ್ವ ಮತ್ತು ಢೋಂಗಿ ಮಾತುಗಳನ್ನು ಕೂಡಲೇ ನಿಲ್ಲಿಸಬೇಕು’ ಎಂದು ತಾಕೀತು ಮಾಡಿದರು.

ಅಸ್ಪೃಶ್ಯರ ಬಗ್ಗೆ ಪೇಜಾವರ ಮಠದ ವಿಶ್ವೇಶ ತೀರ್ಥ ಸ್ವಾಮಿಯವರಿಗೆ ಕಳಕಳಿ ಇದ್ದರೆ ಉಡುಪಿಯ ಅಷ್ಟ ಮಠಗಳಿಗೆ ಅಸ್ಪೃಶ್ಯರನ್ನು ಮಠಾಧಿಪತಿಯನ್ನಾಗಿ ನೇಮಿಸಿ. ಅದು ಬಿಟ್ಟು, ಹೋದಲ್ಲಿ-ಬಂದಲ್ಲಿ ಅಸ್ಪೃಶ್ಯತೆ ನಿವಾರಣೆ ಬಗ್ಗೆ ಮಾತನಾಡುವುದನ್ನು ನಿಲ್ಲಿಸಿ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಭಾರತದ ಪ್ರಜಾಪ್ರಭುತ್ವ ಹಾಗೂ ಒಕ್ಕೂಟ ವ್ಯವಸ್ಥೆಗೆ ಭಂಗವನ್ನುಂಟು ಮಾಡುವ ಮಾತುಗಳನ್ನು ಆಡುವ ಪೇಜಾವರ ಶ್ರೀಯವರು, ದೇಶದ ಬಹುಸಂಸ್ಕೃತಿ ಮತ್ತು ಜಾತಿಗಳನ್ನು ವಿಭಜಿಸುವ ಮೂಲಕ ಹಿಂದುತ್ವ ಪ್ರತಿಪಾದಿಸುವ ಸಂವಿಧಾನ ವಿರೋಧಿ ಹೇಳಿಕೆ ಸಲ್ಲ ಎಂದು ಅವರು ಆಕ್ಷೇಪಿಸಿದರು.

ಪ್ರತಿಭಟನೆಯಲ್ಲಿ ಮುಖಂಡರಾದ ಅಣ್ಣಯ್ಯ, ಚನ್ನಕೃಷ್ಣಪ್ಪ, ಪ್ರೊ.ನರಸಿಂಹಯ್ಯ, ವಿ.ನಾಗರಾಜ್, ಎನ್.ಮೂರ್ತಿ, ಸಿದ್ದಲಿಂಗಯ್ಯ, ಅನಂತನಾಯ್ಕೊ, ಜೀವನಹಳ್ಳಿ ವೆಂಕಟೇಶ್, ಕ್ಯಾಲಸನಹಳ್ಳಿ ಶ್ರೀನಿವಾಸ್, ಕಮಲಾ, ಸಿದ್ದಾಪುರ ಮಂಜು ಸೇರಿದಂತೆ ಇನ್ನಿತರರು ಪಾಲ್ಗೊಂಡಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X