Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಉಪ್ಪಳಿಗೆ ಸರಕಾರಿ ಪ್ರೌಢ ಶಾಲೆಯಲ್ಲಿ...

ಉಪ್ಪಳಿಗೆ ಸರಕಾರಿ ಪ್ರೌಢ ಶಾಲೆಯಲ್ಲಿ "ಉತ್ತುಂಗ" ಸಭಾಭವನದ ಉದ್ಘಾಟನೆ

ಶಿಕ್ಷಕರು ಶಾಲೆಯನ್ನು ಉಳಿಸುವಲ್ಲಿ ಪ್ರಯತ್ನಿಸಬೇಕು - ಸಂಸದ ನಳಿನ್

ವಾರ್ತಾಭಾರತಿವಾರ್ತಾಭಾರತಿ29 Nov 2017 7:46 PM IST
share
ಉಪ್ಪಳಿಗೆ ಸರಕಾರಿ ಪ್ರೌಢ ಶಾಲೆಯಲ್ಲಿ ಉತ್ತುಂಗ ಸಭಾಭವನದ ಉದ್ಘಾಟನೆ

ಪುತ್ತೂರು,ನ.29: ಸರ್ಕಾರಿ ಶಾಲೆಗಳಲ್ಲಿ ಉತ್ತಮ ಸೌಲಭ್ಯಗಳು ಹಾಗೂ ವ್ಯವಸ್ಥೆಗಳಿದ್ದು ಮಕ್ಕಳ ಸಂಖ್ಯೆ ಕುಂಟಿತಗೊಳ್ಳುತ್ತಿದೆ. ಸರ್ಕಾರಿ ಶಾಲೆಗಳನ್ನು ಉಳಿಸಿ ಬೆಳೆಸುವಲ್ಲಿ ಶಿಕ್ಷಕರು ಪೂರ್ಣ ಮನಸ್ಸಿನಿಂದ ಪ್ರಯತ್ನ ನಡೆಸಬೇಕು ಎಂದು ಸಂಸದ ನಳಿನ್ ಕುಮಾರ್ ಕಟೀಲ್ ಹೇಳಿದರು. 
ಅವರು ಬುಧವಾರ ಪುತ್ತೂರು ತಾಲೂಕಿನ ಉಪ್ಪಳಿಗೆ ಸರಕಾರಿ ಪ್ರೌಢ ಶಾಲೆಯಲ್ಲಿ ನೂತನವಾಗಿ ನಿರ್ಮಿಸಿದ `ಉತ್ತುಂಗ' ಸಭಾಭವನದ ಉದ್ಘಾಟನಾ ಸಮಾರಂಭದಲ್ಲಿ ಭಾಗವಹಿಸಿ ಮಾತನಾಡಿದರು.

ಉಪ್ಪಳಿಗೆ ಸರಕಾರಿ ಪ್ರೌಢ ಶಾಲೆ ಎಸ್ ಎಸ್ ಎಲ್ ಸಿ ಪರೀಕ್ಷೆಯಲ್ಲಿ ಮೂರನೇ ಸತತ ಮೂರನೇ ಬಾರಿ ಶೇ. 100 ಪಲಿತಾಂಶ ಪಡೆದಿದೆ ಇದಕ್ಕೆ ಶಿಕ್ಷಕರೇ ಕಾರಣರಾಗಿದ್ದಾರೆ. ಮಕ್ಕಳಿಗೆ ಉತ್ತಮ ರೀತಿಯಲ್ಲಿ ಶಿಕ್ಷಣವನ್ನು ನೀಡಿದರೆ ಮಕ್ಕಳು ಉತ್ತಮ ಪಲಿತಾಂಶವನ್ನು ತಂದುಕೊಡುತ್ತಾರೆ ಎಂಬುದಕ್ಕೆ ಇದೊಂದು ಉತ್ತಮ ಉದಾಹರಣೆಯಗಿದೆ. ಶಾಲೆಗಳ ಅಭಿವೃದ್ದಿಗೆ ಊರಿನ ಜನರ ಸಹಕಾರ ಅತೀ ಅಗತ್ಯವಾಗಿದೆ ಎಲ್ಲವನ್ನೂ ಸರಕಾರ ಮಾಡಲು ಸಾಧ್ಯವಿಲ್ಲ.

ಶಿಕ್ಷಕರ ನೇಮಕಾತಿ, ಪೀಠೋಪಕರಣ ಮತ್ತು ಕಟ್ಟಡವನ್ನು ಸರಕಾರ ನಿರ್ಮಿಸಿ ಕೊಡುವುದು ಕಡ್ಡಾಯ ಅದೇ ರೀತಿಯಾಗಿ ಶಾಲೆಯಲ್ಲಿ ಉತ್ತಮ ವಾತಾವರಣ ಮೂಡುವಂತೆ ಗ್ರಾಮಸ್ಥರು ಮತ್ತು ಶಿಕ್ಷಕರು ಒಂದಾಗಿ ಕೆಲಸ ಮಾಡಬೇಕು.ಖಾಸಗಿ ಶಾಲೆಯಲ್ಲಿ ಕಲಿತರೆ ಮಾತ್ರ ಮಕ್ಕಳು ಉನ್ನತ ಸ್ಥಾನಕ್ಕೆ ಬರುತ್ತಾರೆ ಎಂಬುದು ತಪ್ಪು ಈ ದೇಶದಲ್ಲಿ ಮಹಾನ್ ವ್ಯಕ್ತಿಗಳಾದವರು ಸರಕಾರಿ ಶಾಲೆಯಲ್ಲೇ ಕಲಿತವರು ಪ್ರಧಾನಿ ನರೇಂದ್ರ ಮೋದಿವಯವರು ಸರಕಾರಿ ಶಾಲೆಯ ವಿದ್ಯಾರ್ಥಿ ಎಂದು ಹೇಳಿದರು. ಉಪ್ಪಳಿಗೆ ಸರಕಾರಿ ಶಾಲೆಗೆ ಅಗತ್ಯವಾಗಿ ಬೇಕಾದ ಕಾಮಗಾರಿಗೆ ಅನುದಾನವನ್ನು ನೀಡುವುದಾಗಿ ವರು ಈ ಸಂದರ್ಭದಲ್ಲಿ ಭರವಸೆ ನೀಡಿದರು.

ಶಾಸಕಿ ಶಕುಂತಳಾ ಶೆಟ್ಟಿ ನೂತನ ಸಭಾಭವನ ಲೋಕಾರ್ಪಣೆ ಮಾಡಿ ಶುಭ ಹಾರೈಸಿದರು. ಜಿ.ಪಂ. ಅಧ್ಯಕ್ಷೆ ಮೀನಾಕ್ಷಿ ಶಾಂತಿಗೋಡು ಸಭಾ ಕಾರ್ಯಕ್ರಮ ಉದ್ಘಾಟಿಸಿದರು. ತಾಪಂ ಅಧ್ಯಕ್ಷೆ ಭವಾನಿ ಚಿದಾನಂದ ಅಧ್ಯಕ್ಷತೆ ವಹಿಸಿದ್ದರು.ಶಾಲಾ ಕಟ್ಟಡ ನಿರ್ಮಾಣಕ್ಕೆ ಸಹಕರಿಸಿದ ದಾನಿಗಳಿಗೆ ಸನ್ಮಾನ ಮಾಡಲಾಯಿತು.

ತಾಪಂ ಸದಸ್ಯೆ ಮೀನಾಕ್ಷಿ ಮಂಜುನಾಥ್, ಬೆಟ್ಟಂಪಾಡಿ ಗ್ರಾಪಂ ಅಧ್ಯಕ್ಷೆ ಉಮಾವತಿ ಸುಬ್ಬಪ್ಪ ಮಣಿಯಾಣಿ, ಉಪಾಧ್ಯಕ್ಷೆ ಭವಾನಿ ಗಣೇಶ್ ನಾಯ್ಕ, ಕ್ಷೇತ್ರ ಶಿಕ್ಷಣಾಕಾರಿ ಸುಕ್ನಯ, ಶ್ರೀ ಕ್ಷೇತ್ರ ಧರ್ಮಸ್ಥಳ ಸಂಪೂರ್ಣ ಸುರಕ್ಷಾ ಅನುಷ್ಠಾಣಾಕಾರಿ ಗಣೇಶ್ ಭಟ್, ಎಂಆರ್‍ಪಿಎಲ್ ನ ಸೀತಾರಾಮ ರೈ ಕೈಕಾರ, ನ್ಯಾಯವಾದಿ ಬಿಆರ್ ಶ್ರೀನಿವಾಸ ಗೌಡ, ಉದ್ಯಮಿ ಯತೀಶ್ ರೈ ಚೆಲ್ಯಡ್ಕ, ಪ್ರಗತಿಪರ ಕೃಷಿಕ ಸುಧಾಮಾ ಕಕ್ಕಾಜೆ ಸುಳ್ಯ, ದೇವಪ್ಪ ಗೌಡ ರಂಗಯ್ಯನ ಕಟ್ಟೆ, ಗ್ರಾಪಂ ಸದಸ್ಯರಾದ ಪ್ರಕಾಶ್ ರೈ ಬೈಲಾಡಿ, ಪುಷ್ಪಾವತಿ, ಮಹಮ್ಮದ್ ಹಾಜಿ ಪೇರಲ್ತಡ್ಕ, ಮಹಮ್ಮದ್ ಹಾಜಿ ಕುಕ್ಕುವಳ್ಳಿ, ಬ್ರೈಟ್ ವೇ ನಿರ್ದೇಶಕ ಮನಮೋಹನ್ ರೈ ಚೆಲ್ಯಡ್ಕ, ಡಿಸಿಸಿ ಬ್ಯಾಂಕ್ ನಿರ್ದೇಶಕ ಶಶಿಕುಮಾರ್ ರಐ ಬಾಲ್ಯೊಟ್ಟು, ತಾಪಂ ಸದಸ್ಯ ರಾಧಾಕೃಷ್ಣ ಬೋರ್ಕರ್, ದೈಹಿಕ ಶಿಕ್ಷಣ ಪರಿವೀಕ್ಷಕ ಸುಂದರ ಗೌಡ, ಮಹಮ್ಮದ್ ಬಡಗನ್ನೂರು, ನ್ಯಾಯವಾದಿ ಶಂಭುಭಟ್ ಬೆಟ್ಟಂಪಾಡಿ, ಅಮ್ಮಣ್ಣ ರೈ ಪಾಪೆಮಜಲು ಉಪಸ್ಥಿತರಿದ್ದರು.
ಶಾಲಾಅಭಿವೃದ್ದಿ ಸಮಿತಿ ಉಪಾಧ್ಯಕ್ಷರಾದ ಕೃಷ್ಣಪ್ರಸಾದ್ ಆಳ್ವ ರವರು ಪ್ರಸ್ತಾವಿಕವಾಗಿ ಮಾತನಾಡಿದರು. ಮುಖ್ಯ ಶಿಕ್ಷಕ ನಾರಾಯಣ ಕೆ ಸ್ವಾಗತಿಸಿದರು. ದೈಹಿಕ ಶಿಕ್ಷ ರಾಮಕೃಷ್ಣ ಪಡುಮಲೆ ವಂದಿಸಿದರು. ಸಹ ಶಿಕ್ಷಕಿ ಗೀತಾ ಕಾರ್ಯಕ್ರಮ ನಿರೂಪಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X