Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಡಿ.3,4: ಮಂಚಿ-ಕೊಳ್ನಾಡು ಗೋಪಾಲಕೃಷ್ಣ...

ಡಿ.3,4: ಮಂಚಿ-ಕೊಳ್ನಾಡು ಗೋಪಾಲಕೃಷ್ಣ ದೇವಸ್ಥಾನದ ಗರ್ಭಗುಡಿಗೆ ಶಿಲಾನ್ಯಾಸ ಸಮಾರಂಭ

ವಾರ್ತಾಭಾರತಿವಾರ್ತಾಭಾರತಿ29 Nov 2017 8:15 PM IST
share

ಬಂಟ್ವಾಳ, ನ. 29:ತಾಲೂಕಿನ ಮಂಚಿ-ಕೊಳ್ನಾಡು ಗೋಪಾಲಕೃಷ್ಣ ದೇವಸ್ಥಾನದ ಜೀರ್ಣೋದ್ಧಾರ ಕಾರ್ಯ ಭರದಿಂದ ಸಾಗುತ್ತಿದ್ದು, ಗೋಪಾಲಕೃಷ್ಣ ಗರ್ಭಗುಡಿಗೆ ಶಿಲಾನ್ಯಾಸ ಸಮಾರಂಭ ಹಾಗೂ ದೈವಗಳ ಪ್ರತಿಷ್ಠೆ, ನೇಮೋತ್ಸವ ಡಿ.3,4ರಂದು ನಡೆಯಲಿದೆ ಎಂದು ದೇವಳದ ವ್ಯವಸ್ಥಾಪನಾ ಸಮಿತಿಯ ಅಧ್ಯಕ್ಷ ಕೈಯ್ಯೂರು ನಾರಾಯಣ ಭಟ್ ತಿಳಿಸಿದ್ದಾರೆ.

ಬುಧವಾರ ಬಂಟ್ವಾಳ ಪ್ರೆಸ್‍ಕ್ಲಬ್‍ನಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಮಂಕುಡೆ ರಾಮಣ್ಣ ಆಚಾರ್ ಅವರ ಉಪಸ್ಥಿತಿಯಲ್ಲಿ ಬ್ರಹ್ಮಶ್ರೀ ಕೆಮ್ಮಿಂಜೆ ನಾಗೇಶ್ ತಂತ್ರಿ ಅವರ ನೇತೃತ್ವದಲ್ಲಿ ಡಿ.4ರಂದು ಬೆಳಿಗ್ಗೆ ವಿವಿಧ ಧಾರ್ಮಿಕ ವಿಧಿವಿಧಾನಗಳ ಬಳಿಕ ಗೋಪಾಲಕೃಷ್ಣ ದೇವರ ಗರ್ಭಗುಡಿಗೆ ಶಿಲಾನ್ಯಾಸ ನೆರವೇರಲಿದೆ ಎಂದರು.

ಇದೇ ವೇಳೆ ಕೊಡಮಣಿತ್ತಾಯಿ, ರಕ್ತೇಶ್ವರೀ, ಗುಳಿಗಾ, ಕೊರತಿ ದೈವಗಳ ಪ್ರತಿಷ್ಠೆ ಹಾಗೂ ಬ್ರಹ್ಮಕಲಾಶಾಭಿಷೇಕ, ತಂಬಿಲ ಸೇವೆ ನಡೆಯಲಿದ್ದು, ನಂತರ ನಡೆಯುವ ಧಾರ್ಮಿಕ ಸಭೆಯಲ್ಲಿ ಎಡನೀರು ಮಠದ ಮಠಾಧೀಶರಾದ ಕೇಶವಾನಂದ ಭಾರತಿ ಮಹಾಸ್ವಾಮಿ ಅವರು ಆಶೀರ್ವಚನ ನೀಡಲಿದ್ದಾರೆ. ಕರ್ನಾಟಕ ಲೋಕಸೇವಾ ಆಯೋಗದ ಅಧ್ಯಕ್ಷ ಟಿ.ಶ್ಯಾಮ್ ಭಟ್, ಸಚಿವ ರಮಾನಾಥ ರೈ ಸಹಿತ ಹಲವಾರು ಗಣ್ಯರು ಭಾಗವಹಿಸಲಿದ್ದಾರೆ. ಸಂಜೆ ಪ್ರಸಿದ್ಧ ಕಲಾವಿದರ ಕೂಡುವಿಕೆಯಲ್ಲಿ ಯಕ್ಷಗಾನ ತಾಳಮದ್ದಳೆ, ರಾತ್ರಿ ದೇವರಿಗೆ ರಂಗಪೂಜೆಯ ಬಳಿಕ ದೈವಗಳ ನೇಮೋತ್ಸವ ನಡೆಯಲಿದೆ ಎಂದು ವಿವರಿಸಿದರು.

ದೇವಳದ ಸುತ್ತುಗೋಪುರ, ಪ್ರಧಾನ ಗರ್ಭಗುಡಿ, ಐದು ಉಪಗುಡಿ, ತೀರ್ಥ ಬಾವಿ, ತೀರ್ಥ ಮಂಟಪ, ಪುಷ್ಕರಿಣಿ, ಸಭಾಭವನ, ಶೌಚಾಲಯ ಸೇರಿದಂತೆ ವಿವಿಧ ಅಭಿವೃದ್ಧಿ ಕಾರ್ಯಗಳನ್ನು ಸುಮಾರು 3.25 ಕೋಟಿ ರೂ. ವೆಚ್ಚದಲ್ಲಿ ನಿರ್ಮಿಸಲು ಉದ್ದೇಶಿಸಲಾಗಿದ್ದು, ಈಗಾಗಲೇ ಶೇ.50ರಷ್ಟು ಕಾಮಗಾರಿಗಳು ಪೂರ್ಣಗೊಂಡಿದ್ದು, ಮುಂದಿನ ಎಪ್ರಿಲ್‍ನಲ್ಲಿ ಬ್ರಹ್ಮಕಲಶೋತ್ಸವನ್ನು ಆಚರಿಸಲು ಸಮಿತಿ ಸಂಕಲ್ಪಿಸಿದೆ ಎಂದು ಸುದ್ದಿಗೋಷ್ಠಿಯಲ್ಲಿದ್ದ ಸಮಿತಿ ಕಾರ್ಯಾಧ್ಯಕ್ಷ ಸುಭಾಸ್ ಚಂದ್ರ ಶೆಟ್ಟಿ ಕುಳಾಲ್ ತಿಳಿಸಿದರು.

ಸಮಿತಿ ಪದಾಧಿಕಾರಿಗಳಾದ ವಿಜಯ ಶೆಟ್ಟಿ ಸಾಲೆತ್ತೂರು, ವಿಶ್ವನಾಥ ಬಂಗೇರಾ, ರಾಮಕೃಷ್ಣ ನಾಯಕ್ ಮತ್ತಿತರರು ಇದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X