Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಬಸವ ವಸತಿ ಯೋಜನೆಯ ಮನೆ ನಿರ್ಮಾಣದಲ್ಲಿ...

ಬಸವ ವಸತಿ ಯೋಜನೆಯ ಮನೆ ನಿರ್ಮಾಣದಲ್ಲಿ ಹಿನ್ನಡೆ : ಕೆಡಿಪಿ ಸಭೆಯಲ್ಲಿ ಶಾಸಕ ವಿನಯ ಕುಮಾರ್ ಸೊರಕೆ ಅಸಮಾಧಾನ

ವಾರ್ತಾಭಾರತಿವಾರ್ತಾಭಾರತಿ29 Nov 2017 9:19 PM IST
share
ಬಸವ ವಸತಿ ಯೋಜನೆಯ ಮನೆ ನಿರ್ಮಾಣದಲ್ಲಿ ಹಿನ್ನಡೆ : ಕೆಡಿಪಿ ಸಭೆಯಲ್ಲಿ ಶಾಸಕ ವಿನಯ ಕುಮಾರ್ ಸೊರಕೆ ಅಸಮಾಧಾನ

ಉಡುಪಿ, ನ.29: ಬಸವ ವಸತಿ ಯೋಜನೆಯಡಿ ಉಡುಪಿ ಜಿಲ್ಲೆಗೆ ಮಂಜೂರಾಗಿರುವ ಮನೆಗಳ ನಿರ್ಮಾಣದಲ್ಲಿ ಹಿನ್ನಡೆಯಾಗಿರುವ ಕುರಿತು ಕಾಪು ಶಾಸಕ ವಿನಯ ಕುಮಾರ್ ಸೊರಕೆ ಇಂದು ಉಡುಪಿ ತಾಪಂ ಸಭಾಂಗಣ ದಲ್ಲಿ ನಡೆದ ಉಡುಪಿ ತಾಲೂಕು ಮಟ್ಟದ ವಿವಿಧ ಇಲಾಖೆಗಳ ಪ್ರಗತಿ ಪರಿ ಶೀಲನಾ ಸಭೆಯಲ್ಲಿ ಅಸಮಾಧಾನ ವ್ಯಕ್ತಪಡಿಸಿದರು.

2013-14ನೆ ಸಾಲಿನಲ್ಲಿ ಮಂಜೂರಾದ ಮನೆಗಳು ಇನ್ನೂ ನಿರ್ಮಾಣ ವಾಗದೆ ಬಾಕಿ ಇವೆ. ಹೀಗಾಗಿ ಇನ್ನು ಹೆಚ್ಚಿನ ಮನೆಗಳ ಬೇಡಿಕೆಯನ್ನು ಸಲ್ಲಿಸಲು ಸಾಧ್ಯವಿಲ್ಲ. ಕಾಪು ಕ್ಷೇತ್ರಕ್ಕೆ 6000 ಮನೆಗಳ ಬೇಡಿಕೆ ಇಡಲಾಗಿದೆ. ಜಿಲ್ಲೆಗೆ ಮಂಜೂರಾದ 8266 ಮನೆಗಳ ಪೈಕಿ 1227 ಮನೆಗಳ ನಿರ್ಮಾಣ ಬಾಕಿ ಇದ್ದು, ಇವುಗಳ ಕಾರ್ಯ ಶೀಘ್ರವಾಗಿ ನಡೆಸಬೇಕು ಎಂದು ಅವರು ಅಧಿಕಾರಿ ಗಳಿಗೆ ಸೂಚಿಸಿದರು.

 94ಸಿ ಕಾಯಿದೆಯಡಿ ಅನ್ವಯ ಉಡುಪಿಯಲ್ಲಿ 3,397 ಅರ್ಜಿಗಳು ಸಲ್ಲಿಕೆ ಯಾಗಿದ್ದು, ಅದರಲ್ಲಿ 1323 ಅರ್ಜಿಗಳನ್ನು ವಿಲೇವಾರಿ ಮಾಡಿ ಹಕ್ಕುಪತ್ರ ಗಳನ್ನು ವಿತರಿಸಲಾಗಿದೆ. ಬ್ರಹ್ಮಾವರದಲ್ಲಿ 5228 ಅರ್ಜಿ ಬಂದಿದ್ದು 800 ಹಕ್ಕು ಪತ್ರ ನೀಡಲಾಗಿದೆ. ನಗರದ ಪ್ರದೇಶದಲ್ಲಿ ಅಕ್ರಮ ಸಕ್ರಮದಡಿ ಒಟ್ಟು 5 ಸಾವಿರ ಅರ್ಜಿ ಬಂದಿದ್ದರೂ ಕೇವಲ 450 ಮಂದಿಗೆ ಮಾತ್ರ ಹಕ್ಕು ಪತ್ರ ನೀಡಲಾಗಿದೆ ಎಂದು ತಹಶೀಲ್ದಾರ್ ಪ್ರದೀಪ್ ಕುರ್ಡೆಕರ್ ತಿಳಿಸಿದರು. ಬಾಕಿ ಉಳಿದಿರುವ ಅರ್ಜಿಗಳ ತ್ವರಿತ ವಿಲೇವಾರಿ ಮಾಡಬೇಕು ಎಂದು ಸೊರಕೆ ಹೇಳಿದರು.

ಡೀಮ್ಡ್ ಫಾರೆಸ್ಟ್‌ನಲ್ಲಿ ವಾಸವಾಗಿರುವವರಿಗೆ ಹಕ್ಕುಪತ್ರ ನೀಡುವ ಬಗ್ಗೆ ಸಚಿವ ಸಂಪುಟದಲ್ಲಿ ಅನುಮೋದನೆ ಪಡೆದು ನಂತರ ಸುಪ್ರೀಂ ಕೋರ್ಟ್‌ಗೆ ಅಫಿದವಿತ್ ಸಲ್ಲಿಸಬೇಕಾಗಿದೆ. ನಂತರ ಅವರಿಗೆ ಹಕ್ಕುಪತ್ರ ನೀಡಲು ಅವಕಾಶ ಇರುತ್ತದೆ. ಆದುದರಿಂದ ಸರಕಾರ ಆ ಪ್ರಕ್ರಿಯೆಯನ್ನು ನಡೆಸುತ್ತಿದೆ ಎಂದು ಶಾಸಕರು ಸಭೆಗೆ ತಿಳಿಸಿದರು.

ಮಲೇರಿಯಾದ ಬಗ್ಗೆ ಈಗಾಗಲೇ ಹಲವಾರು ಮುಂಜಾಗೃತಾ ಕ್ರಮಗಳನ್ನು ಇಲಾಖೆ ತೆಗೆದುಕೊಂಡಿದ್ದು, ಇದರಿಂದಾಗಿ ಈ ಬಾರಿ ಮಲೇರಿಯಾ ಪ್ರಕರಣ ಗಳು ಇಳಿಮುಖವಾಗಿವೆ. ಅದೇ ರೀತಿ ಮಲೇರಿಯಾ ಕಾಯಿಲೆ ಬಗ್ಗೆ ಜನರಲ್ಲಿ ಅರಿವು ಮೂಡಿಸುವ ಕೆಲಸ ಮಾಡಲಾಗುತ್ತಿದೆ ಎಂದು ತಾಲೂಕು ಆರೋಗ್ಯಾ ಧಿಕಾರಿ ಡಾ.ನಾಗರತ್ನ ಹೇಳಿದರು.

ಅಕೇಶಿಯಾ ಮರಗಳನ್ನು ಕಡಿಯುವ ಬಗ್ಗೆ ಅರಣ್ಯ ಅಧಿಕಾರಗಳ ಅಸಮ ರ್ಪಕ ಉತ್ತರಕ್ಕೆ ಅಸಮಾದಾನ ವ್ಯಕ್ತಪಡಿಸಿದ ಸೊರಕೆ, ಸರಿಯಾದ ಮಾಹಿತಿ ಇಲ್ಲದೇ ಸಭೆಗೆ ಹಾಜರಾಗಬಾರದು. ಮೂರು ತಿಂಗಳಿಗೊಮ್ಮೆ ನಡೆಯುವ ಈ ಸಭೆಗೆ ಸರಿಯಾಗಿ ಮಾಹಿತಿ ಪಡೆದುಕೊಂಡು ಬರಬೇಕು ಎಂದು ಸೂಚಿಸಿ ದರು. ಸಣ್ಣ ನೀರಾವರಿ ಯೋಜನೆಯಡಿಯಲ್ಲಿ ಕಿಂಡಿ ಅಣೆಕಟ್ಟು ನಿರ್ಮಾಣ ಕಾಮಗಾರಿ ಪ್ರಗತಿಯಲ್ಲಿದ್ದು, ಹಳೆಯ ಮತ್ತು ಹೊಸ ಯೋಜನೆಗಳು ಸೇರಿ ಒಟ್ಟು 24 ಕಡೆ ಕಾಮಗಾರಿ ನಡೆಯುತ್ತಿದೆ. ಡಿ.15ರ ಒಳಗೆ ಎಲ್ಲ ಕಾಮಗಾರಿ ಗಳನ್ನು ಪೂರ್ಣಗೊಳಿಸಲಾಗುವುದು ಎಂದು ಸಣ್ಣ ನೀರಾವರಿ ಇಲಾಖೆಯ ಅಧಿಕಾರಿ ಸಭೆಗೆ ತಿಳಿಸಿದರು.

 ಸಭೆಯಲ್ಲಿ ತಾಪಂ ಅಧ್ಯಕ್ಷೆ ನಳಿನಿ ಪ್ರದೀಪ್ ರಾವ್, ಉಪಾಧ್ಯಕ್ಷ ರಾಜೇಂದ್ರ ಪಂದುಬೆಟ್ಟು, ಸ್ಥಾಯಿ ಸಮಿತಿಯ ಅಧ್ಯಕ್ಷೆ ನೀತಾ ಗುರುರಾಜ್, ಕಾರ್ಯನಿರ್ವ ಹಣಾಧಿಕಾರಿ ಮೋಹನ್‌ರಾಜ್, ಜಿಪಂ ಸದಸ್ಯ ವಿಲ್ಸನ್ ರೋಡಿಗ್ರಸ್ ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X