ದತ್ತ ಜಯಂತಿ: ಪ್ರವಾಸಿಗರ ವಾಹನ-ಭಕ್ತರ ಭೇಟಿಗೆ ನಿರ್ಬಂಧ
ಬೆಂಗಳೂರು, ನ. 30: ಚಿಕ್ಕಮಗಳೂರಿನ ಗುರುದತ್ತಾತ್ರೇಯ ಬಾಬಾಬುಡನ್ ಸ್ವಾಮಿ ದರ್ಗಾ ಪೀಠದಲ್ಲಿ ಹಾಗೂ ಚಿಕ್ಕಮಗಳೂರು ಜಿಲ್ಲೆಯಾದ್ಯಂತ ದತ್ತ ಜಯಂತಿ ಆಚರಣೆ ಹಿನ್ನೆಲೆಯಲ್ಲಿ ಮುಳ್ಳಯ್ಯನಗಿರಿ, ಸೀತಾಳಯ್ಯನಗಿರಿ ಮತ್ತು ಬಾಬಾಬುಡನ್ ಸ್ವಾಮಿ ದರ್ಗಾಕ್ಕೆ ಬರುವ ಪ್ರವಾಸಿ ವಾಹನಗಳ ಸಂಚಾರ ಹಾಗೂ ಪ್ರವಾಸಿಗರ ಭೇಟಿ ನೀಡುವುದನ್ನು ನಿರ್ಬಂಧಿಸಲಾಗಿದೆ.
ಡಿ.1ರಿಂದ 3ರ ವರೆಗೆ ತಾತ್ಕಾಲಿಕವಾಗಿ ಪ್ರವಾಸಿಗರ ಭೇಟಿಯನ್ನು ನಿರ್ಬಂಧಿಸಿ ಚಿಕ್ಕಮಗಳೂರು ಜಿಲ್ಲಾಧಿಕಾರಿ ಅಧಿಕೃತ ಆದೇಶ ಹೊರಡಿಸಿದ್ದಾರೆ.
Next Story





