Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ತಮಿಳುನಾಡು: ಚಂಡಮಾರುತದ ಹಾವಳಿಗೆ...

ತಮಿಳುನಾಡು: ಚಂಡಮಾರುತದ ಹಾವಳಿಗೆ ನಾಲ್ವರು ಬಲಿ

ಜನಜೀವನ ಅಸ್ತವ್ಯಸ್ತ

ವಾರ್ತಾಭಾರತಿವಾರ್ತಾಭಾರತಿ30 Nov 2017 7:53 PM IST
share
ತಮಿಳುನಾಡು: ಚಂಡಮಾರುತದ ಹಾವಳಿಗೆ ನಾಲ್ವರು ಬಲಿ

 ಚೆನ್ನೈ, ನ.30: ತಮಿಳುನಾಡಿನಲ್ಲಿ ‘ಒಕ್ಹಿ’ ಚಂಡಮಾರುತದ ಪ್ರತಾಪಕ್ಕೆ ನಾಲ್ವರು ಬಲಿಯಾಗಿದ್ದು, ರೈಲು ಸಂಚಾರವನ್ನು ಭಾಗಶಃ ರದ್ದುಪಡಿಸಲಾಗಿದೆ . ಬಿರುಗಾಳಿಯೊಂದಿಗೆ ಸುರಿದ ಭಾರೀ ಮಳೆಯಿಂದ ಜನಜೀವನ ಅಸ್ತವ್ಯಸ್ತವಾಗಿದೆ ಎಂದು ಸರಕಾರದ ಮೂಲಗಳು ತಿಳಿಸಿವೆ.

 ಗುರುವಾರ ಬೆಳಿಗ್ಗೆ ಕನ್ಯಾಕುಮಾರಿಯನ್ನು ಪ್ರವೇಶಿಸಿದ ಒಕ್ಹಿ ಚಂಡಮಾರುತದಿಂದಾಗಿ ತಮಿಳುನಾಡು ಮತ್ತು ಕೇರಳದಲ್ಲಿ ಭಾರೀ ಗಾಳಿ ಸಹಿತ ಮಳೆಯಾಗಿದ್ದು ತಮಿಳುನಾಡಿನ ಕನ್ಯಾಕುಮಾರಿಯಲ್ಲಿ ಮರ ಉರುಳಿ ಓರ್ವ ಮಹಿಳೆಯೂ ಸೇರಿ ನಾಲ್ವರು ಮೃತಪಟ್ಟಿದ್ದಾರೆ.

 ರಾಜೇಂದ್ರನ್, ಕುಮಾರಸನ್ ಸಿ.ಸರಸ್ವತಿ ಮತ್ತು ಅಲೆಕ್ಸಾಂಡರ್ ಮೃತಪಟ್ಟವರು . ರಾಜ್ಯದ ಕರಾವಳಿ ಪ್ರದೇಶದಲ್ಲಿ ಭಾರೀ ಮಳೆಯಾಗಿದೆ. ಗಂಟೆಗೆ ಸುಮಾರು 150 ಕಿ.ಮೀ. ವೇಗದಲ್ಲಿ ಚಂಡಮಾರುತ ಲಕ್ಷದ್ವೀಪದತ್ತ ಸಾಗಲಿದೆ ಎಂದು ಹವಾಮಾನ ಇಲಾಖಾಧಿಕಾರಿಗಳು ತಿಳಿಸಿದ್ದು, ಸಮುದ್ರಕ್ಕೆ ಇಳಿಯದಂತೆ ಮೀನುಗಾರರಿಗೆ ಎಚ್ಚರಿಕೆ ನೀಡಲಾಗಿದೆ.

ಕೇರಳ ರಾಜ್ಯದ ತಿರುವನಂತಪುರದ ವಿಜಿಂಜಮ್ ಎಂಬಲ್ಲಿ ಸಮುದ್ರಕ್ಕೆ ಇಳಿದ ಎಂಟು ಮಂದಿ ನಾಪತ್ತೆಯಾಗಿರುವುದಾಗಿ ಸ್ಥಳೀಯ ಮೀನುಗಾರರು ತಿಳಿಸಿದ್ದಾರೆ. ಹಲವೆಡೆ ಭೂಕುಸಿತ ಕೂಡಾ ಉಂಟಾಗಿದೆ . ತೀವ್ರ ಎಚ್ಚರಿಕೆ ಸ್ಥಿತಿ ಕಾಯ್ದುಕೊಳ್ಳುವಂತೆ ರಾಜ್ಯ ಸರಕಾರ ವಿಪತ್ತು ನಿರ್ವಹಣಾ ಸಮಿತಿ ಹಾಗೂ ನಗರಾಡಳಿತಕ್ಕೆ ಸೂಚಿಸಿದೆ.

 ತಮಿಳುನಾಡಿನ ತೂತುಕುಡಿ, ತಿರುನೆಲ್ವೇಲಿ, ರಾಮನಾಥಪುರಂ, ಕನ್ಯಾಕುಮಾರಿಯಲ್ಲಿ ಹಾಗೂ ನಾಗಪಟ್ಟಿಣಂ, ತಿರುವರೂರು ಮತ್ತು ತಂಜಾವೂರಿನ ಕೆಲವು ಭಾಗಗಳಲ್ಲಿ ಮಳೆಯಾಗಿದೆ ಎಂದು ಇಲಾಖೆ ತಿಳಿಸಿದೆ. ಕನ್ಯಾಕುಮಾರಿಯಲ್ಲಿ ಮುಸಲಧಾರೆ ಮಳೆಯೊಂದಿಗೆ ಬೀಸಿದ ಬಿರುಗಾಳಿಗೆ ಹಲವಾರು ಮರಗಳು ಬುಡಮೇಲಾಗಿದ್ದು ನಾಲ್ವರು ಮೃತಪಟ್ಟಿದ್ದಾರೆ.

ಜನಜೀವನ ಅಸ್ತವ್ಯಸ್ತವಾಗಿದ್ದು ಮನೆಯಿಂದ ಹೊರಗೆ ಬಾರದಂತೆ ಜನತೆಗೆ ಸೂಚನೆ ನೀಡಲಾಗಿದೆ. ಕನ್ಯಾಕುಮಾರಿ ಜಿಲ್ಲೆಯಲ್ಲಿ ಗಾಳಿಯಿಂದಾಗಿ ವಿದ್ಯುತ್ ಸಂಚಾರ ಮೊಟಕುಗೊಂಡಿದ್ದು ಶಿಕ್ಷಣ ಸಂಸ್ಥೆಗಳಿಗೆ ರಜೆ ಘೋಷಿಸಲಾಗಿದೆ. ಕನ್ಯಾಕುಮಾರಿಯ ಮೂಲಕ ಸಾಗುವ ಕೆಲವು ರೈಲುಗಳ ಸಂಚಾರವನ್ನು ರದ್ದುಪಡಿಸಲಾಗಿದ್ದರೆ ಕೆಲವು ರೈಲುಗಳ ಸಂಚಾರವನ್ನು ವಿಳಂಬಿಸಲಾಗಿದೆ.

ಅಲ್ಲದೆ ಭಾರೀ ಮರಗಳು ಉರುಳಿ ಬಿದ್ದಿರುವ ಕಾರಣ ವಾಹನ ಸಂಚಾರಕ್ಕೂ ತೊಂದರೆಯಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ದಕ್ಷಿಣ ತಮಿಳುನಾಡಿನ ತಿರುನೆಲ್ವೇಲಿ ಮತ್ತು ಟ್ಯುಟಿಕೋರಿನ್‌ನಲ್ಲೂ ಭಾರೀ ಗಾಳಿಯ ಜೊತೆಗೆ ಮಳೆ ಸುರಿದಿದ್ದು ಕಡಲ ತೀರದಲ್ಲಿ ನಿಲ್ಲಿಸಲಾಗಿದ್ದ ದೋಣಿಗಳಿಗೆ ಹಾನಿಯಾಗಿದೆ.ದಕ್ಷಿಣ ತಮಿಳುನಾಡಿನ ಜಿಲ್ಲೆಗಳ ಶಿಕ್ಷಣ ಸಂಸ್ಥೆಗಳಿಗೆ ರಜೆ ಘೋಷಿಸಲಾಗಿದೆ.

 ಮುಂದಿನ 24 ಗಂಟೆಗಳಲ್ಲಿ ದಕ್ಷಿಣ ತಮಿಳುನಾಡು, ದಕ್ಷಿಣ ಕೇರಳದಲ್ಲಿ ಸಾಧಾರಣದಿಂದ ಭಾರೀ ಮಳೆಯಾಗುವ ಮುನ್ಸೂಚನೆ ನೀಡಲಾಗಿದೆ. ಚಂಡಮಾರುತ ಲಕ್ಷದ್ವೀಪದತ್ತ ಸಾಗಲಿದ್ದು ಶುಕ್ರವಾರ ಅರಬ್ಬಿ ಸಮುದ್ರದ ದಕ್ಷಿಣ ಭಾಗದಲ್ಲಿ ಭಾರೀ ಗಾಳಿ ಸಹಿತ ಮಳೆಯಾಗಲಿದೆ. ಡಿಸೆಂಬರ್ 2ರಂದು ಚಂಡಮಾರುತ ಲಕ್ಷದ್ವೀಪವನ್ನು ಪ್ರವೇಶಿಸುವ ನಿರೀಕ್ಷೆಯಿದೆ ಎಂದು ಭೂವಿಜ್ಞಾನ ಇಲಾಖೆಯ ಅಧಿಕಾರಿಯೋರ್ವರು ತಿಳಿಸಿದ್ದಾರೆ. ಈ ಚಂಡಮಾರುತಕ್ಕೆ ಒಕ್ಹಿ ಎಂಬ ಹೆಸರನ್ನು ಬಾಂಗ್ಲಾದೇಶ ನೀಡಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X