Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಮಣಿಪಾಲ: ವಿವಿಧ ಕ್ರೀಡೆಗಳಲ್ಲಿ ಪದಕ...

ಮಣಿಪಾಲ: ವಿವಿಧ ಕ್ರೀಡೆಗಳಲ್ಲಿ ಪದಕ ಜಯಿಸಿದ ವಿಶೇಷ ಮಕ್ಕಳಿಗೆ ಸನ್ಮಾನ

ವಾರ್ತಾಭಾರತಿವಾರ್ತಾಭಾರತಿ30 Nov 2017 9:30 PM IST
share
ಮಣಿಪಾಲ: ವಿವಿಧ ಕ್ರೀಡೆಗಳಲ್ಲಿ ಪದಕ ಜಯಿಸಿದ ವಿಶೇಷ ಮಕ್ಕಳಿಗೆ ಸನ್ಮಾನ

ಮಣಿಪಾಲ, ನ.30: ವಿಶೇಷ ಮಕ್ಕಳಿಗೆ ಪ್ರೋತ್ಸಾಹ ನೀಡುವ ನಿಟ್ಟಿನಲ್ಲಿ ಹಾಗೂ ಅವರ ಸಮಸ್ಯೆಗಳನ್ನು ಬಗೆಹರಿಸುವ ಸಲುವಾಗಿ ಶೀಘ್ರವೇ ಬೆಂಗಳೂರಿ ನಲ್ಲಿ ಅಧಿಕಾರಿಗಳು ಹಾಗೂ ವಿಶೇಷ ಮಕ್ಕಳ ಕ್ರೀಡಾ ಚಟುವಟಿಕೆಗಳಿಗಾಗಿ ಶ್ರಮಿಸುತ್ತಿರುವ ಸಂಸ್ಥೆಗಳ ಪದಾಧಿಕಾರಿಗಳೊಂದಿಗೆ ಸಭೆ ನಡೆಸಲಾಗುವುದು ಎಂದು ರಾಜ್ಯ ಯುವಜನ ಸಬಲೀಕರಣ ಹಾಗೂ ಕ್ರೀಡಾ ಸಚಿವ ಪ್ರಮೋದ್ ಮಧ್ವರಾಜ್ ಹೇಳಿದ್ದಾರೆ.

2016ರ ಮಾರ್ಚ್ ತಿಂಗಳಿನಿಂದ ಇತ್ತೀಚಿನವರೆಗೆ ವಿವಿಧ ರಾಜ್ಯಗಳಿಗೆ ತೆರಳಿ ಸ್ಪೆಷಲ್ ಒಲಿಂಪಿಕ್ಸ್‌ನ ವಿವಿಧ ಕ್ರೀಡಾ ವಿಭಾಗಗಳಲ್ಲಿ ಭಾಗವಹಿಸಿ ಪದಕ ಜಯಿಸಿದ ರಾಜ್ಯದ ವಿಶೇಷ ಕ್ರೀಡಾಪಟುಗಳಿಗೆ ಸ್ಪೆಷಲ್ ಒಲಿಂಪಿಕ್ಸ್ ರಾಜ್ಯ ಸಂಸ್ಥೆಯ (ಎಸ್‌ಒಬಿಕೆ) ವತಿಯಿಂದ ಮಣಿಪಾಲದ ಕೆಎಂಸಿ ಗ್ರೀನ್ಸ್‌ನಲ್ಲಿ ಗುರುವಾರ ಏರ್ಪಡಿಸಿದ್ದ ಸನ್ಮಾನ ಕಾರ್ಯಕ್ರಮದಲ್ಲಿ ಭಾಗವಹಿಸಿ ವಿಶೇಷ ಕ್ರೀಡಾಪಟುಗಳನ್ನು ಸನ್ಮಾನಿಸಿ ಅವರು ಮಾತನಾಡುತಿದ್ದರು.

ಎಲ್ಲ ಅಂಗಾಂಗಗಳು ಸರಿ ಇದ್ದವರು ಸಾಧನೆ ಮಾಡುವುದು ದೊಡ್ಡ ವಿಷಯವಲ್ಲ. ಆದರೆ ಅಂಗವೈಕಲ್ಯತೆ ಇರುವವರು ಸಾಧನೆ ಮಾಡುವುದು ಸಾಮಾನ್ಯದ ವಿಷಯವಲ್ಲ. ಅದು ಮಹಾನ್ ಸಾಧನೆಯೇ ಸರಿ. ಇಂಥಾ ಮಕ್ಕಳನ್ನು ತರಬೇತಿಗೊಳಿಸುವವರು ಕೂಡ ನಿಜವಾದ ಸಾಧಕರು ಎಂದರು.
ವಿಶೇಷ ಮಕ್ಕಳ ಪ್ರತಿಭೆಯನ್ನು ಗುರುತಿಸಿ ಪ್ರೋತ್ಸಾಹಿಸುವುದು ಅತ್ಯಗತ್ಯ. ಈ ನಿಟ್ಟಿನಲ್ಲಿ ಸ್ಪೆಷಲ್ ಒಲಿಂಪಿಕ್ಸ್ ಸಂಸ್ಥೆಯ ಕಾರ್ಯ ಶ್ಲಾಘನೀಯವಾದುದು. ಪ್ಯಾರಾ ಒಲಿಂಪಿಕ್ಸ್ ಸಾಧನೆ ಮಾಡಿದ ಕ್ರೀಡಾಪಟುಗಳಿಗೆ ಪ್ರೋತ್ಸಾಹ ನೀಡುವ ಸಲುವಾಗಿ ಬಜೆಟ್‌ನಲ್ಲಿ 4 ಕೋಟಿ ರೂ. ಅನುದಾನ ಮೀಲಿಡಲಾಗಿದೆ ಎಂದವರು ನುಡಿದರು.

ಇದೇ ಸಂದರ್ಭದಲ್ಲಿ ರಾಷ್ಟ್ರಮಟ್ಟದ ಸ್ಪರ್ಧೆಗಳಲ್ಲಿ ಭಾಗವಹಿಸಿ ಪದಕ ಪಡೆದ 76 ಮತ್ತು ರಾಜ್ಯಮಟ್ಟದ ಸ್ಪರ್ಧೆಗಳಲ್ಲಿ ಭಾಗವಹಿಸಿ ಪದಕ ಗಳಿಸಿದ 81 ವಿಶೇಷ ಕ್ರೀಡಾಪಟುಗಳನ್ನು ಹಾಗೂ 24 ತರಬೇತುದಾರರನ್ನು ಸನ್ಮಾನಿಸಲಾಯಿತು. ಚಿನ್ನದ ಪದಕಗಳನ್ನು ಪಡೆದ ಅರ್ಚನಾ ಜೈವಿಠಲ್, ಅಸ್ಮಿತ್ ಶೆಟ್ಟಿ, ಪ್ರಜ್ವಲ್ ಲೋಬೊ, ಬೆಳ್ಳಿ ಪದಕ ಪಡೆದ ರೋಹಿತ್ ಕೆ., ಎಸ್.ದಾಸ್‌ರನ್ನು ಗೌರವಿ ಸಲಾಯಿತು. ಇವರೊಂದಿಗೆ ಮಣಿಪಾಲ ಜೈವಿಠಲ್ ಕುಟುಂಬವನ್ನು ಸಚಿವರು ವಿಶೇಷವಾಗಿ ಗೌರವಿಸಿದರು.

ಮಣಿಪಾಲ ವಿವಿಯ ಪ್ರೊ ಚಾನ್ಸಲರ್ ಡಾ.ಎಚ್.ಎಸ್.ಬಲ್ಲಾಳ್, ಸಿಂಡಿಕೇಟ್ ಬ್ಯಾಂಕ್‌ನ ಮಹಾಪ್ರಬಂಧಕ ಸತೀಶ್ ಕಾಮತ್, ಉದ್ಯಮಿ ಪುರುಷೋತ್ತಮ ಶೆಟ್ಟಿ, ಎಸ್‌ಒಬಿಕೆಯ ಪದಾಧಿಕಾರಿಗಳಾದ ಮಹಾಬಲ ಮಾರ್ಲ, ಮಹಮ್ಮದ್ ಬಶೀರ್, ಜಗದೀಶ್ ಶೆಟ್ಟಿ, ಆಗ್ನೇಶ್ ಕುಂದರ್, ಸಿಸ್ಟರ್ ಮರಿಯಾ ಶ್ರುತಿ ಉಪಸ್ಥಿತರಿದ್ದರು.ಎಸ್‌ಒಬಿಕೆಯ ಸಂಸ್ಥೆಯ ವಲಯ ನಿರ್ದೇಶಕ ವಸಂತ್ ಕುಮಾರ್ ಶೆಟ್ಟಿ ಪ್ರಾಸ್ತಾವಿಕವಾಗಿ ಮಾತನಾಡಿದರು. ಕಾರ್ಯಕ್ರಮದ ಸಂಚಾಲಕ ಕೆ.ಎಸ್. ಜೈವಿಠಲ್ ಸ್ವಾಗತಿಸಿದರು. ಕಾಂತಿ ಹರೀಶ್ ಕಾರ್ಯಕ್ರಮ ನಿರೂಪಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X