ಮಂಡ್ಯ: ನದಿಯಲ್ಲಿ ಮುಳುಗಿ ವಿದ್ಯಾರ್ಥಿ ಮೃತ್ಯು

ಮಂಡ್ಯ, ನ.30: ಪ್ರವಾಸಕ್ಕೆಂದು ಬಂದಿದ್ದ ಯುವಕ ಕಾವೇರಿ ನದಿಯಲ್ಲಿ ಈಜಲು ಹೋಗಿ ಮುಳುಗಿ ಮೃತಪಟ್ಟಿರುವ ಘಟನೆ ಮಳವಳ್ಳಿ ತಾಲೂಕಿನ ಮುತ್ತತ್ತಿ ಬಳಿ ಬುಧವಾರ ಸಂಜೆ ನಡೆದಿದೆ.
ಚಾಮರಾಜನಗರ ಜಿಲ್ಲೆ ಹರದನಹಳ್ಳಿಯ ಪ್ರಕಾಶ್ ಅವರ ಪುತ್ರ ಶ್ರೀನಿಧಿ (16) ಮೃತಪಟ್ಟವ ಎಂದು ಗುರುತಿಸಲಾಗಿದೆ.
ಈತ ಚಾಮರಾಜನಗರದ ಜಿಪಿಟಿ ಕಾಲೇಜಿನ ಡಿಪ್ಲೊಮಾ ವಿದ್ಯಾರ್ಥಿಯಾಗಿದ್ದು, 13 ಜನರ ಗೆಳೆಯರ ಜತೆ ಪ್ರವಾಸಕ್ಕೆ ಬಂದಿದ್ದಾಗ ಈ ಘಟನೆ ನಡೆದಿದೆ ಎನ್ನಲಾಗಿದೆ.
ಗುರುವಾರ ಮಧ್ಯಾಹ್ನ ಶ್ರೀನಿಧಿ ಶವ ಪತ್ತೆಹಚ್ಚಿದ ಪೊಲೀಸರು ಶವವನ್ನು ಪೋಷಕರ ವಶಕ್ಕೆ ಒಪ್ಪಿಸಿದ್ದಾರೆ.
ಪಿಎಸ್ಸೈ ಶ್ರೀಧರ್ ಪ್ರಕರಣ ದಾಖಲಿಸಿಕೊಂಡಿದ್ದಾರೆ.
Next Story





