Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಕೌಶಲ್ಯಾಭಿವೃದ್ಧಿಗೆ 15 ಕೋಟಿ ರೂ....

ಕೌಶಲ್ಯಾಭಿವೃದ್ಧಿಗೆ 15 ಕೋಟಿ ರೂ. ಅನುದಾನ: ಸಚಿವ ಪ್ರಮೋದ್

ಮೂರು ದಿನಗಳ ರಾಜ್ಯಮಟ್ಟದ ಯುವಜನೋತ್ಸವ ಉದ್ಘಾಟನೆ

ವಾರ್ತಾಭಾರತಿವಾರ್ತಾಭಾರತಿ30 Nov 2017 11:09 PM IST
share
ಕೌಶಲ್ಯಾಭಿವೃದ್ಧಿಗೆ 15 ಕೋಟಿ ರೂ. ಅನುದಾನ: ಸಚಿವ ಪ್ರಮೋದ್

ಉಡುಪಿ, ನ.30: ಯುವಕರ ಅಭಿರುಚಿಗೆ ತಕ್ಕಂತೆ ಸ್ಪಂದಿಸುವುದು ಸರಕಾರ ಹಾಗೂ ಇಲಾಖೆ ಜವಾಬ್ದಾರಿಯಾಗಿದೆ. ಹೀಗಾಗಿ ಈ ವರ್ಷದ ಬಜೆಟ್‌ನಲ್ಲಿ ರಾಜ್ಯ ಸರಕಾರ ಕೌಶಲ್ಯ ಅಭಿವೃದ್ಧಿಗಾಗಿ ಹೆಚ್ಚು ಒತ್ತು ನೀಡಿ ಯುವಸಬಲೀಕರಣ ಇಲಾಖೆಗೆ 15 ಕೋಟಿ ರೂ. ಅನುದಾನವನ್ನು ನೀಡಿದೆ ಎಂದು ರಾಜ್ಯ ಮೀನುಗಾರಿಕೆ, ಯುವಜನ ಸಬಲೀಕರಣ ಮತ್ತು ಕ್ರೀಡೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಪ್ರಮೋದ್ ಮಧ್ವರಾಜ್ ತಿಳಿಸಿದ್ದಾರೆ.

ಉಡುಪಿ ಜಿಲ್ಲಾಡಳಿತ, ಜಿಪಂ, ಉಡುಪಿ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ಕರ್ನಾಟಕ ರಾಜ್ಯ ಯುವ ಸಂಘಗಳ ಒಕ್ಕೂಟ ಹಾಗೂ ಜಿಲ್ಲಾ ಯುವ ಸಂಘಗಳ ಒಕ್ಕೂಟದ ಸಂಯುಕ್ತ ಆಶ್ರಯದಲ್ಲಿ ಉಡುಪಿ ಅಜ್ಜರ ಕಾಡು ಒಳಾಂಗಣ ಕ್ರೀಡಾಂಗಣದ ಆವರಣದಲ್ಲಿ ಹಮ್ಮಿಕೊಳ್ಳಲಾದ 2017- 18ನೆ ಸಾಲಿನ ಮೂರು ದಿನಗಳ ರಾಜ್ಯಮಟ್ಟದ ಯುವಜನೋತ್ಸವವನ್ನು ಗುರುವಾರ ಉದ್ಘಾಟಿಸಿ ಅವರು ಮಾತನಾಡುತಿದ್ದರು.

ಇಂದು ಯುವಕರ ಮಿತೃತ್ವ ಹಾಗೂ ಭಾತೃತ್ವಕ್ಕೆ ಅಡಚಣೆಯಾಗುವ ಕೆಲಸ ನಡೆಯುತ್ತಿದೆ. ಕೆಲವೇ ಕೆಲವು ಜಾತಿ, ಧರ್ಮದವರು ಸೇರಿಸಿ ನಡೆಸುವ ಕಾರ್ಯಕ್ರಮಕ್ಕೆ ಭಾತೃತ್ವ ಅಂತಹ ಹೇಳುವುದಿಲ್ಲ. ಅದು ಯುವಕರನ್ನು ಪ್ರತ್ಯೇಕಿ ಸುವ ಕೆಲಸ ಮಾಡುತ್ತದೆ. ಆದರೆ ನಾವು ಯುವಕರನ್ನು ಜೋಡಿಸುವ ಕೆಲಸ ಹೆಚ್ಚು ಹೆಚ್ಚು ನಡೆಸಬೇಕು ಎಂದರು.

ಯುವಜನೋತ್ಸವದ ಬಗ್ಗೆ ಯುವಕರಲ್ಲಿ ಆಸಕ್ತಿ ಕಡಿಮೆ ಆಗುತ್ತಿರುವುದು ದುರಾದೃಷ್ಟಕರ. ಈಗಿನ ಯುವಕರ ಅಭಿರುಚಿಗಳು ಇಂದು ವಾಟ್ಸಾಪ್ ಫೇಸ್ ಬುಕ್‌ನಂತಹ ಸಾಮಾಜಿಕ ಜಾಲತಾಣಗಳ ಕಡೆ ವಾಲುತ್ತಿದೆ. ಯುವಕರು ತಮ್ಮ ಪ್ರತಿಭೆಗಳನ್ನು ವೇದಿಕೆಗಳಲ್ಲಿ ತೋರಿಸುವ ಪ್ರವೃತಿ ಕಡಿಮೆಯಾಗಿದೆ. ಈ ಮನೋಭಾವವು ಹತೋಟಿಗೆ ತರದಿದ್ದರೆ ಮುಂದಿನ 30ವರ್ಷಗಳಲ್ಲಿ ಇಂತಹ ಯುವಜನೋತ್ಸವಗಳು ಕಣ್ಮರೆಯಾಗುವ ಸಾಧ್ಯತೆಗಳಿವೆ ಎಂದು ಅವರು ಆತಂಕ ವ್ಯಕ್ತಪಡಿಸಿದರು.

ಅಧ್ಯಕ್ಷತೆಯನ್ನು ಜಿಪಂ ಅಧ್ಯಕ್ಷ ದಿನಕರ ಬಾಬು ವಹಿಸಿದ್ದರು. ಮುಖ್ಯ ಅತಿಥಿ ಗಳಾಗಿ ಜಿಪಂ ಉಪಾಧ್ಯಕ್ಷೆ ಶೀಲಾ ಕೆ.ಶೆಟ್ಟಿ, ತಾಪಂ ಅಧ್ಯಕ್ಷೆ ನಳಿನಿ ಪ್ರದೀಪ್ ರಾವ್, ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ನರಸಿಂಹಮೂರ್ತಿ, ರಾಜ್ಯ ಒಕ್ಕೂಟದ ಅಧ್ಯಕ್ಷ ಡಾ.ಬಾಲಾಜಿ, ಜಿಲ್ಲಾ ಮಾಜಿ ಅಧ್ಯಕ್ಷ ಮನೋಹರ್ ಕುಂದರ್, ಜಿಲ್ಲಾ ಪೊಲೀಸ್ ಅಧೀಕ್ಷಕ ಡಾ.ಸಂಜೀವ ಎಂ.ಪಾಟೀಲ್, ಅಪರ ಜಿಲ್ಲಾಧಿಕಾರಿ ಅನುರಾಧ, ಉಪಕಾರ್ಯದರ್ಶಿ ನಾಗೇಶ್ ರಾಯ್ಕರ್, ಇಲಾಖೆಯ ಜಂಟಿ ನಿರ್ದೇಶಕ ಅಭಿಜಿನ್, ಉಪನಿರ್ದೇಶಕ ರಂಗಯ್ಯ, ಅಜ್ಜರ ಕಾಡು ಮಹಿಳಾ ಪದವಿ ಕಾಲೇಜಿನ ಪ್ರಾಂಶುಪಾಲ ಪೆ್ರೂ.ಜಗದೀಶ್ ರಾವ್ ಉಪಸ್ಥಿತರಿದ್ದರು.

ಯುವಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಸಹಾಯಕ ನಿರ್ದೇಶಕ ಡಾ.ರೋಶನ್ ಕುಮಾರ್ ಶೆಟ್ಟಿ ಸ್ವಾಗತಿಸಿ ಪ್ರಾಸ್ತಾವಿಕವಾಗಿ ಮಾತನಾಡಿದರು. ಪ್ರಕಾಶ್ ಕ್ರಮಧಾರಿ ವಂದಿಸಿದರು. ಪ್ರಶಾಂತ್ ಶೆಟ್ಟಿ ಹಾವಂಜೆ ಕಾರ್ಯಕ್ರಮನಿರೂಪಿಸಿದರು.

ಇದಕ್ಕೂ ಮುನ್ನಾ ಬೆಂಗಳೂರಿನ ಆನಂದ ವಿಕ್ರಮ ನೇತೃತ್ವದ ಶೈಲೂಶಂ ತಂಡದಿಂದ ನೃತ್ಯ ದರ್ಪಣ ಕಾರ್ಯಕ್ರಮ ಮತ್ತು ಸಮಾರಂಭದ ಬಳಿಕ ಸಾಯಿದೀಪ ಕಲಾತಂಡ ಶಿವಮೊಗ್ಗ ಇವರಿಂದ ಸುಗಮ ಸಂಗೀತ ಕಾರ್ಯಕ್ರಮ ಜರಗಿತು.

ಮೂರು ದಿನಗಳ ಈ ಉತ್ಸವದಲ್ಲಿ ಯುವಕ/ಯುವತಿಯರಿಗೆ ಜನಪದ ನೃತ್ಯ, ಜನಪದ ಹಾಡು, ಏಕಾಂಕ ನಾಟಕ, ಆಶು ಭಾಷಣ, ಶಾಸ್ತ್ರೀಯ ನೃತ್ಯ, ಶಾಸ್ತ್ರೀಯ ಗಾಯನ, ಶಾಸ್ತ್ರೀಯ ವಾದನ, ಹಾರ್ಮೋನಿಯಂ, ಗಿಟಾರ್ ವಾದನ ಸ್ಪರ್ಧೆಗಳು ನಡೆಯಲಿವೆ. ರಾಜ್ಯದ 30 ಜಿಲ್ಲೆಯ 1500ಕ್ಕೂ ಸ್ಪರ್ಧಾಳು ಗಳು ಹಾಗೂ ತಂಡದ ವ್ಯವಸ್ಥಾಪಕರು ಭಾಗವಹಿಸಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X