ಪ್ರತಿಯೊಬ್ಬರು ಏಡ್ಸ್ ನಿಯಂತ್ರಣಕ್ಕೆ ಕಾಳಜಿ ವಹಿಸಬೇಕು: ನ್ಯಾ.ಕೃಷ್ಣ

ಕೊಳ್ಳೇಗಾಲ, ಡಿ.1: ಪ್ರತಿಯೊಬ್ಬರು ಎಚ್‍ಐವಿ ನಿಯಂತ್ರಣಕ್ಕೆ ಆರೋಗ್ಯ ಪೂರಕ ಪದ್ಧತಿಗಳನ್ನು ಅಳವಡಿಸಿಕೊಂಡು ಮಾರಕವಾಗಿರುವ ಏಡ್ಸ್ ನಿಯಂತ್ರಣಕ್ಕೆ ಕಾಳಜಿ ವಹಿಸಬೇಕು ಎಂದು ಹಿರಿಯ ಶ್ರೇಣಿ ನ್ಯಾಯಾಧೀಶ ಎಸ್.ಜೆ.ಕೃಷ್ಣ ಸಲಹೆ ನೀಡಿದ್ದಾರೆ,.
ಪಟ್ಟಣದ ಸರ್ಕಾರಿ ಉಪವಿಭಾಗ ಆಸ್ಪತ್ರೆಯಲ್ಲಿ ತಾಲೂಕು ಕಾನೂನು ಸೇವೆಗಳ ಸಮಿತಿ, ವಕೀಲರ ಸಂಘ, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಹಾಗೂ ಎಆರ್.ಟಿ.ಕೇಂದ್ರ ವತಿಯಿಂದ ಹಮ್ಮಿಕೊಂಡಿದ್ದ 'ವಿಶ್ವ ಏಡ್ಸ್ ವಿರೋಧಿ ದಿನಾಚರಣೆ' ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು.
ಗ್ರಾಮಾಂತರ ಪ್ರದೇಶದ ಜನರು ಸೇರಿದಂತೆ ಪ್ರತಿಯೊಬ್ಬರಿಗೂ ಏಡ್ಸ್ ಬಗೆಗಿನ ಗಂಭೀರತೆ ಕುರಿತು ಅರಿವು ಮತ್ತು ಮುಂದಾಲೋಚನೆ ಮೂಲಕ ಏಡ್ಸ್ ಮುಕ್ತ ಸಮಾಜವನ್ನು ನಿರ್ಮಿಸುವ ನಿಟ್ಟಿನಲ್ಲಿ ಸಾಗಬೇಕು ಎಂದು ಕರೆ ನಿಡಿದರು.
ಈ ವೇಳೆ ಕಾರ್ಯಕ್ರಮದ ಅಧ್ಯಕ್ಷತೆವಹಿಸಿದ್ದ ವೈದ್ಯಾಧಿಕಾರಿ ಡಾ.ಕೆ.ಎಸ್. ರವೀಂದ್ರ ಮಾತನಾಡಿದರು.
ಕಾರ್ಯಕ್ರಮದಲ್ಲಿ ತಾಲೂಕು ಆರೋಗ್ಯ ಅಧಿಕಾರಿ ಗೋಪಾಲ್, ವಕೀಲರ ಸಂಘ ಅಧ್ಯಕ್ಷ ಡಿ.ಎಸ್. ಬಸವರಾಜು, ಮತ್ತು ಎಸ್.ನಾಗರಾಜ್, ಶೀಗರಾಜು, ಹಿರಿಯ ವೈದ್ಯಾಧಿಕಾರಿ ಡಾ.ಎಂ.ರಘು ಇತರರು ಇದ್ದರು.







