ಜೂಜಾಟ: ಏಳು ಮಂದಿ ಬಂಧನ
ಬೆಂಗಳೂರು, ಡಿ.1: ಹಣ ಪಣವಾಗಿ ಕಟ್ಟಿಕೊಂಡು ಜೂಜಾಟ ನಡೆಸುತ್ತಿದ್ದ ಆರೋಪದ ಮೇಲೆ ಏಳು ಜನರನ್ನು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ.
ದೀಪಕ್ (22), ರಾಜಶೇಖರ (26), ನವೀನ್(24), ಮಂಜುನಾಥ್(33), ರಾಜಶೆಟ್ಟಿ(28), ಅಮರ್‌ನಾಥ್(43), ಮೆಹಬೂಬ್(30) ಬಂಧಿತರು ಎಂದು ಪೊಲೀಸರು ತಿಳಿಸಿದ್ದಾರೆ.
ನಗರದ ದೊಡ್ಡಬೊಮ್ಮಸಂದ್ರ ಚಾಮರಾಜೇಶ್ವರಿ ಪಬ್ಲಿಕ್ ಶಾಲೆ ಹತ್ತಿರದ ಮನೆಯೊಂದರಲ್ಲಿ ಕೆಲವು ವ್ಯಕ್ತಿಗಳು ಹಣವನ್ನು ಪಣವಾಗಿ ಕಟ್ಟಿಕೊಂಡು, ಅಂದರ್-ಬಾಹರ್ ಎಂಬ ಅದೃಷ್ಟದ ಜೂಜಾಟ ಆಡುತ್ತಿದ್ದ ಬಗ್ಗೆ ಮಾಹಿತಿ ಸಂಗ್ರಹಿಸಿ ದಾಳಿ ನಡೆಸಿದಾಗ ಪ್ರಕರಣ ಬೆಳಕಿಗೆ ಬಂದಿದೆ.
ಬಂಧಿತರಿಂದ 57 ಸಾವಿರ ರೂ. ನಗದು ವಶಕ್ಕೆ ಪಡೆಯಲಾಗಿದ್ದು, ಈ ಸಂಬಂಧ ವಿದ್ಯಾರಣ್ಯಾಪುರ ಪೊಲೀಸ್ ಠಾಣೆಯಲ್ಲಿ ಮೊಕದ್ದಮೆ ದಾಖಲಾಗಿದೆ.
Next Story





